ಚನ್ನಗಿರಿ: ಅಧಿಕಾರಿಗಳ ಹಾಜರಾತಿ ಕಡ್ಡಾಯ–ತಹಶೀಲ್ದಾರ್
ಚನ್ನಗಿರಿ: ‘ಈ ಬಾರಿಯ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಎಲ್ಲ ಇಲಾಖೆಗಳ ಮುಖ್ಯಸ್ಥರು ತಮ್ಮ ಸಿಬ್ಬಂದಿ ಜತೆ ಕಾರ್ಯಕ್ರಮದಲ್ಲಿ ಭಾಗವಹಿಸಲೇಬೇಕು. ಗೈರಾಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ತಹಶೀಲ್ದಾರ್ ಎನ್.ಜೆ. ನಾಗರಾಜ್ ತಿಳಿಸಿದರು.ಪಟ್ಟಣದ ತಾಲ್ಲೂಕು ಕಚೇರಿ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸೋಮವಾರ ನಡೆದ ಪೂರ್ವಭಾವಿ

ಚನ್ನಗಿರಿ: ‘ಈ ಬಾರಿಯ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಎಲ್ಲ ಇಲಾಖೆಗಳ ಮುಖ್ಯಸ್ಥರು ತಮ್ಮ ಸಿಬ್ಬಂದಿ ಜತೆ ಕಾರ್ಯಕ್ರಮದಲ್ಲಿ ಭಾಗವಹಿಸಲೇಬೇಕು. ಗೈರಾಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ತಹಶೀಲ್ದಾರ್ ಎನ್.ಜೆ. ನಾಗರಾಜ್ ತಿಳಿಸಿದರು.ಪಟ್ಟಣದ ತಾಲ್ಲೂಕು ಕಚೇರಿ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.ಆ.15ರಂದು ಬೆಳಿಗ್ಗೆ 9ಕ್ಕೆ ಶಾಸಕರ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ನಡೆಯಲಿದೆ. ನಂತರ ಪೊಲೀಸ್, ಗೃಹರಕ್ಷಕ ದಳ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಗೌರವ ಪಥ ಸಂಚಲನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ, ಸ್ತಬ್ಧಚಿತ್ರಗಳ ಪ್ರದರ್ಶನವೂ ನಡೆಯಲಿದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಅವರ ಮನೆ ಬಾಗಿಲಿಗೆ ಹೋಗಿ ಸನ್ಮಾನಿಸಲಾಗುವುದು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.ಉಪ ವಿಭಾಗಾಧಿಕಾರಿ ಎಚ್.ಬಿ. ಚನ್ನಪ್ಪ, ತಾಲ್ಲೂಕು ಪಂಚಾಯಿತಿ ಇಒ ಎಂ.ಆರ್. ಪ್ರಕಾಶ್, ತೋಟಗಾರಿಕೆ ಇಲಾಖೆ ನಿರ್ದೇಶಕ ಶ್ರೀಕಾಂತ್, ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್, ಲೋಕೋಪಯೋಗಿ ಇಲಾಖೆ ಎಇಇ ರವಿಕುಮಾರ್, ಕುಡಿಯುವ ನೀರು ಇಲಾಖೆ ಎಇಇ ಲೋಹಿತ್ ಕುಮಾರ್, ಪಿಎಸ್ ಐ ರೂಪ್ಲಿಬಾಯಿ ಉಪಸ್ಥಿತರಿದ್ದರು.10 ಹೆಚ್ಚುವರಿ ಮತಗಟ್ಟೆ ತಾಲ್ಲೂಕಿನಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯ ಶೇ 99.59ರಷ್ಟು ಮುಗಿದಿದ್ದು ಆ.8ರೊಳಗೆ ಶೇ 100ರಷ್ಟು ಪೂರ್ಣಗೊಳ್ಳಲಿದೆ ಎಂದು ತಹಶೀಲ್ದಾರ್ ಎನ್.ಜೆ. ನಾಗರಾಜ್ ತಿಳಿಸಿದರು. ತಾಲ್ಲೂಕಿನಲ್ಲಿ ಈವರೆಗೆ 255 ಮತಗಟ್ಟೆಗಳು ಇದ್ದು ಹೆಚ್ಚುವರಿಯಾಗಿ 10 ಮತಗಟ್ಟೆಗಳನ್ನು ಪ್ರಾರಂಭಿಸಲಾಗುವುದು. ನಲ್ಲೂರು ಕೆರೆಬಿಳಚಿ ಹೊಸೂರು ಕರೇಕಟ್ಟೆ ವಿ. ಬನ್ನಿಹಟ್ಟಿ ತಾವರೆಕೆರೆ ನೀತಿಗೆರೆ ಮಲಹಾಳ್ ಚನ್ನಾಪುರ ಗ್ರಾಮಗಳಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ತೆರೆಯಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.