ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಕೀ ಉತ್ತರ ಪ್ರಕಟ – ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು (Key Answers) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತವಾಗಿ ಪ್ರಕಟಿಸಿದೆ. ಆಗಸ್ಟ್ 2 ರಂದು ನಡೆದ ‘ಸಾಮಾನ್ಯ ಜ್ಞಾನ’ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ನಲ್ಲಿ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು (Key Answers) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತವಾಗಿ ಪ್ರಕಟಿಸಿದೆ. ಆಗಸ್ಟ್ 2 ರಂದು ನಡೆದ ‘ಸಾಮಾನ್ಯ ಜ್ಞಾನ’ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಪ್ರಕಟಿತ ಕೀ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಆಗಸ್ಟ್ 6 ರ ಬೆಳಿಗ್ಗೆ 10:30 ರ ಒಳಗಾಗಿ ಪ್ರಾಧಿಕಾರದ ಆನ್ಲೈನ್ ಪೋರ್ಟಲ್ ಮೂಲಕ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಆಕ್ಷೇಪಣೆ ಸಲ್ಲಿಸುವಾಗ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್ (Version Code), ಪ್ರಶ್ನೆ ಸಂಖ್ಯೆ ಹಾಗೂ ಬೆಂಬಲಿತ ಪೂರಕ ದಾಖಲೆಗಳನ್ನು (Supporting Documents) ಕಡ್ಡಾಯವಾಗಿ PDF ರೂಪದಲ್ಲಿ ಲಗತ್ತಿಸಬೇಕು. #CivilPoliceRecruitment: ಆಗಸ್ಟ್ 2ರಂದು ನಡೆದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಆಗಸ್ಟ್ 6ರಂದು ಬೆಳಿಗ್ಗೆ 10.30ರೊಳಗೆ ಸಲ್ಲಿಸಬೇಕು. ವಿವರಗಳಿಗೆ ವೆಬ್ ಸೈಟ್ ನೋಡಿ. -ಹೆಚ್.ಪ್ರಸನ್ನ ಐಎಎಸ್… pic.twitter.com/oGqLoMp0oT — ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) August 3, 2026 ಸಲ್ಲಿಸುವ ಪ್ರತಿ ಆಕ್ಷೇಪಣೆಗೆ 25 ರೂ. ಶುಲ್ಕ ಪಾವತಿಸಬೇಕಿರುತ್ತದೆ. ಈ ಶುಲ್ಕವನ್ನು ಹಿಂತಿರುಗಿಸಲಾಗುವುದಿಲ್ಲ. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದಿದ್ದಲ್ಲಿ, ಅಪೂರ್ಣ/ಆಧಾರರಹಿತ ದಾಖಲೆಗಳನ್ನು ಲಗತ್ತಿಸಿದ್ದಲ್ಲಿ ಹಾಗೂ ನಿಗದಿತ ಶುಲ್ಕ ಪಾವತಿಸದಿದ್ದರೆ ಅಂತಹ ಆಕ್ಷೇಪಣೆಗಳನ್ನು ಪ್ರಾಧಿಕಾರ ತಿರಸ್ಕರಿಸಲಿದೆ. ವಿಷಯ ತಜ್ಞರ ಸಮಿತಿಯು ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮಗೊಳಿಸುವ ಕೀ ಉತ್ತರಗಳೇ ಅಂತಿಮವಾಗಿರಲಿವೆ ಎಂದು KEA ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೀ ಉತ್ತರಕ್ಕೆ ಕ್ಲಿಕ್ ಮಾಡಿ: https://cetonline.karnataka.gov.in/keawebentry456/cpcrpc2026/CPC_RPC_KEY_finalkannada.pdf ಆಕ್ಷೇಪಣೆ ಸಲ್ಲಿಕೆಗೆ ಕ್ಲಿಕ್ ಮಾಡಿ: https://cetonline.karnataka.gov.in/keAOBJECTIONS/FORMS/Login.aspx