ಜನರಲ್ ಸ್ಟೋರ್ನಲ್ಲಿ ಶಾರ್ಟ್ ಸರ್ಕ್ಯೂಟ್ – 40 ಲಕ್ಷ ರೂ. ವಸ್ತುಗಳು ಸುಟ್ಟು ಭಸ್ಮ
ಉಡುಪಿ: ಕುಂದಾಪುರ (Kundapur) ತಾಲೂಕಿನ ತೆಕ್ಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ – 66ರ ಕುವೆಂಪು ಶಾಲೆ ಬಳಿ ಇದ್ದ ಜನರಲ್ ಸ್ಟೋರ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ (Fire Accident) ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಘಟನೆಯಿಂದ ಅಂಗಡಿಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿ ಸುಮಾರು 40 ಲಕ್ಷ ರೂ.ಗಿಂತ ಹೆಚ್ಚು ನಷ್ಟ ಉಂಟಾಗಿದೆ. ಅಂಗಡಿ ಮಾಲೀಕ ಸಂತೋಷ್

ಉಡುಪಿ: ಕುಂದಾಪುರ (Kundapur) ತಾಲೂಕಿನ ತೆಕ್ಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ – 66ರ ಕುವೆಂಪು ಶಾಲೆ ಬಳಿ ಇದ್ದ ಜನರಲ್ ಸ್ಟೋರ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ (Fire Accident) ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಘಟನೆಯಿಂದ ಅಂಗಡಿಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿ ಸುಮಾರು 40 ಲಕ್ಷ ರೂ.ಗಿಂತ ಹೆಚ್ಚು ನಷ್ಟ ಉಂಟಾಗಿದೆ. ಅಂಗಡಿ ಮಾಲೀಕ ಸಂತೋಷ್ ಎಂದಿನಂತೆ ರಾತ್ರಿ ವ್ಯಾಪಾರ ಮುಗಿಸಿ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಮುಂಜಾನೆ 1:30ರ ವೇಳೆಗೆ ಅಂಗಡಿಯೊಳಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಅಂಗಡಿಗೆ ಬೆಂಕಿ ಆವರಿಸಿದೆ. ಅಗ್ನಿ ಅವಘಡದಲ್ಲಿ ದಿನಸಿ ಸಾಮಗ್ರಿಗಳು, ಫ್ರಿಡ್ಜ್ಗಳು, ಪೀಠೋಪಕರಣಗಳು ಹಾಗೂ ಇತರೆ ವಾಣಿಜ್ಯೋಪಯೋಗಿ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಇದನ್ನೂ ಓದಿ: ಬಂಗಾರಪೇಟೆಯಲ್ಲಿ ನಾನು ಬರುವ ಮೊದಲು ಕಾಂಗ್ರೆಸ್ ಅನಾಥವಾಗಿತ್ತು: ಎಸ್.ಎನ್ ನಾರಾಯಣಸ್ವಾಮಿ ಅಂಗಡಿಯಲ್ಲಿದ್ದ ಮೂರು ಫ್ರಿಡ್ಜ್ಗಳ ಪೈಕಿ ಒಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ಆದರೆ, ಅಗ್ನಿ ಅವಘಡಕ್ಕೆ ನಿಖರ ಕಾರಣ ತನಿಖೆಯ ಬಳಿಕವೇ ತಿಳಿದುಬರಬೇಕಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಸತತ ಪ್ರಯತ್ನದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ಹೆಚ್ಚಿನ ಅನಾಹುತ ಸಂಭವಿಸುವುದನ್ನು ತಡೆದಿದ್ದಾರೆ. ಈ ಕುರಿತು ಸಂಬಂಧಿತ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಅಗ್ನಿ ಅವಘಡದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.ಇದನ್ನೂ ಓದಿ: ಹೆಚ್.ಕೆ. ಪಾಟೀಲ್ಗೆ ಕೈತಪ್ಪಿದ ಸಚಿವ ಸ್ಥಾನ; ನಗರಸಭೆ ಸದಸ್ಯರಿಂದ ಸಾಮೂಹಿಕ ರಾಜೀನಾಮೆ