ಎಥೆನಾಲ್ ಉತ್ಪಾದನೆ, ಬಳಕೆಗೆ ಕ್ರಮ ಕೈಗೊಳ್ಳಿ:ಕೇಂದ್ರ ಸರ್ಕಾರಕ್ಕೆ ಕುರುಬೂರು ಪತ್ರ
ಬೆಂಗಳೂರು: ಪ್ರಮುಖ ಕೃಷಿ ಉತ್ಪನ್ನಗಳಾದ ಕಬ್ಬು, ಭತ್ತ, ಮೆಕ್ಕೆಜೋಳದಿಂದ ಉತ್ಪಾದಿಸುವ ಎಥೆನಾಲ್. ಬಳಕೆಗೆ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡಿರುವುದನ್ನು ರಾಷ್ಟ್ರೀಯ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಅಧ್ಯಕ್ಷ ಹಾಗು. ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಸ್ವಾಗತಿಸಿದ್ದಾರೆ.ಈ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ

ಬೆಂಗಳೂರು: ಪ್ರಮುಖ ಕೃಷಿ ಉತ್ಪನ್ನಗಳಾದ ಕಬ್ಬು, ಭತ್ತ, ಮೆಕ್ಕೆಜೋಳದಿಂದ ಉತ್ಪಾದಿಸುವ ಎಥೆನಾಲ್. ಬಳಕೆಗೆ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡಿರುವುದನ್ನು ರಾಷ್ಟ್ರೀಯ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಅಧ್ಯಕ್ಷ ಹಾಗು. ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಸ್ವಾಗತಿಸಿದ್ದಾರೆ.ಈ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರದ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಲ್ಹಾದ ಜೋಶಿ ಅವರಿಗೆ ಪತ್ರವನ್ನು ಬರೆದಿದ್ದಾರೆ.ಈ ವಿಚಾರದಲ್ಲಿ ಕೆಲವೊಂದು ವಿರೋಧ ಪಕ್ಷಗಳು ಹಾಗೂ ಸಂಘಟನೆಗಳು ಎಥೆನಾಲ್ ಬಳಕೆ ಹಾನಿಕಾರಕ. ವಾಹನಗಳ ಯಂತ್ರಗಳಿಗೆ ದುಷ್ಪರಿಣಾಮ ಬೀರುತ್ತದೆ. ವಾಹನಗಳ ಮೈಲೇಜ್ ಕಡಿಮೆಯಾಗುತ್ತದೆ ಎಂದು ತಪ್ಪಾಗಿ ಬೆಂಬಿಸುತ್ತಿವೆ. ವಿದೇಶದಲ್ಲಿ ಪೆಟ್ರೋಲಿಯಂ ಉತ್ಪಾದಿಸುವ ಕಂಪನಿಗಳ ಲಾಬಿಯ ಒತ್ತಡಕ್ಕೆ ಮಣಿದು ಈ ರೀತಿ ಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.ದೇಶಿಯ ಉತ್ಪನ್ನವಾದ ಎಥೆನಾಲ್ ಹೆಚ್ಚು ಉತ್ಪಾದಿಸಿ ಬಳಸುವುದರಿಂದ ರೈತರಿಗೆ ಹೆಚ್ಚು ಆದಾಯ ಬರುತ್ತದೆ ಹಾಗೂ ಪರಿಸರ ಸ್ನೇಹಿಯಾಗಿರುವ ಎಥೆನಾಲ್ ನಿಂದ ದೇಶದ ತಲಾ ವರಮಾನ ಜಾಸ್ತಿಯಾಗುವುದರ ಜೊತೆಗೆ ದೇಶ ಆರ್ಥಿಕವಾಗಿ ಸ್ವಾವಲಂಬಿಯಾಗಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.ಎಥೆನಾಲ್ ಬಳಕೆಯಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಚ್ಚಾತೈಲದ ಅವಲಂಬನೆ ಕಡಿಮೆಯಾಗುತ್ತದೆ. ಆಮದು ಕಡಿಮೆಯಾಗಿ ದೇಶಕ್ಕೆ 4 ಲಕ್ಷ ಕೋಟಿ ವಿದೇಶಿ ವಿನಿಮಯ ಹಣ ಉಳಿತಾಯವಾಗುತ್ತದೆ. ಇದರಿಂದ ದೇಶದ ಆರ್ಥಿಕತೆ ಸದೃಢವಾಗುತ್ತದೆ. ಈ ಹಣದಿಂದ ಇನ್ನಿತರ ಮೂಲ ಸೌಕರ್ಯ ಗಳಿಗೆ ಹೆಚ್ಚು ಹೊತ್ತು ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ಧಾರೆ.ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿಯಬಾರದು. ರೈತರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಎಥೆನಾಲ್ ವಿಚಾರದಲ್ಲಿ ದಿಟ್ಟ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರದ ಸಚಿವರಿಗೆ ಬರೆದಿರುವ ಪತ್ರದಲ್ಲಿ ಒತ್ತಾಯಿಸಿದ್ದಾರೆ.