ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡೋ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ: ಬಸವರಾಜ ಹೊರಟ್ಟಿ
– ರಾಜೀನಾಮೆ ಕೊಡುವಂತೆ ಹೊರಟ್ಟಿಗೆ ತಿಳಿಸಿದ ಸಿಎಂ ಬೆಂಗಳೂರು: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಬಗ್ಗೆ ನಾನಿನ್ನೂ ನಿರ್ಧಾರ ಮಾಡಿಲ್ಲ ಎಂದು ಬಸವರಾಜ ಹೊರಟ್ಟಿ (Basavaraj Horatti) ʻಪಬ್ಲಿಕ್ ಟಿವಿʼಗೆ ತಿಳಿಸಿದ್ದಾರೆ. ʻಪಬ್ಲಿಕ್ ಟಿವಿʼ (Public TV) ಜೊತೆಗೆ ಮಾತನಾಡಿದ ಅವರು, ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಸಿಎಂ ಡಿಕೆಶಿ (DK Shivakumar)

– ರಾಜೀನಾಮೆ ಕೊಡುವಂತೆ ಹೊರಟ್ಟಿಗೆ ತಿಳಿಸಿದ ಸಿಎಂ ಬೆಂಗಳೂರು: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಬಗ್ಗೆ ನಾನಿನ್ನೂ ನಿರ್ಧಾರ ಮಾಡಿಲ್ಲ ಎಂದು ಬಸವರಾಜ ಹೊರಟ್ಟಿ (Basavaraj Horatti) ʻಪಬ್ಲಿಕ್ ಟಿವಿʼಗೆ ತಿಳಿಸಿದ್ದಾರೆ. ʻಪಬ್ಲಿಕ್ ಟಿವಿʼ (Public TV) ಜೊತೆಗೆ ಮಾತನಾಡಿದ ಅವರು, ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಸಿಎಂ ಡಿಕೆಶಿ (DK Shivakumar) ತಿಳಿಸಿದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಮ್ಮ ವರಿಷ್ಠರು ಸಭಾಪತಿ, ಉಪ ಸಭಾಪತಿ ಸ್ಥಾನಕ್ಕೆ ಇಬ್ಬರನ್ನು ಆಯ್ಕೆ ಮಾಡಿದ್ದಾರೆ, ಹೀಗಾಗಿ ನೀವು ರಾಜೀನಾಮೆ ನೀಡಬೇಕೆಂದು ಸಿಎಂ ತಿಳಿಸಿದ್ದಾರೆಂದು ಹೇಳಿದ್ದಾರೆ. ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡೋ ಬಗ್ಗೆ ನಾನಿನ್ನೂ ನಿರ್ಧಾರ ಮಾಡಿಲ್ಲ. ಈ ರೀತಿ ಇತಿಹಾಸದಲ್ಲಿ ಯಾವತ್ತೂ ಆಗಿಲ್ಲ. ಹೈಕಮಾಂಡ್ ಹೆಸರು ಹೇಳಿದ ಉದಾಹರಣೆ ಇಲ್ಲ. ನಮ್ಮ ಪಕ್ಷದ ನಾಯಕರ ಜೊತೆ ಚರ್ಚೆ ಮಾತಾಡ್ತೀನಿ, ಸಿಎಂ ಕರೆ ಮಾಡಿ ರಾಜೀನಾಮೆ ಕೊಡೋಕೆ ಹೇಳಿದ್ದಾರೆ. ಸದನದಲ್ಲಿ ಈ ಬಗ್ಗೆ ತೀರ್ಮಾನ ಆಗಲಿ. ಸದನದ ನಿರ್ಧಾರಕ್ಕೆ ನಾನು ಗೌರವ ಕೊಡ್ತೀನಿ. ಈ ವಿದ್ಯಾಮಾನ ನನಗೆ ನೋವು ತರಿಸಿದೆ, ಮೊದಲು ಅವರು ನೊಟೀಸ್ ಕೊಡಲಿ ಅಮೇಲೆ ಆ ಬಗ್ಗೆ ನಿರ್ಧಾರ ಮಾಡ್ತೀನಿ. ಸದನ ನಿರ್ಧಾರಕ್ಕೆ ನಾನು ಬದ್ಧ ಎಂದಿದ್ದಾರೆ. ಇನ್ನೂ ಸಭಾಪತಿ ಹೊರಟ್ಟಿ ಅವರನ್ನ ಭೇಟಿ ಮಾಡಿದ ಸಚಿವ ಶರಣಪ್ರಕಾಶ್ ಪಾಟೀಲ್ ಕೆಲಕಾಲ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಸಭಾಪತಿ ರಾಜೀನಾಮೆ ಬಗ್ಗೆ ನಾನು ಮಾತಾಡಲ್ಲ. ಯಾವುದೋ ಮೀಟಿಂಗ್ ಇತ್ತು. ಆ ವಿಚಾರವಾಗಿ ಚರ್ಚೆ ಮಾಡಿದ್ದೇನೆ ಅಷ್ಟೆ. ರಾಜೀನಾಮೆ ಬಗ್ಗೆ ಚರ್ಚೆ ಮಾಡಿಲ್ಲ. ಸಿಎಂ ಕರೆ ಮಾಡಿರೋ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ. ಹೊರಟ್ಟಿ ಅವರ ರಾಜೀನಾಮೆ ವಿಚಾರ ಎಲ್ಲರ ನಿರ್ಣಯದ ಮೇಲೆ ನಿರ್ಧಾರ ಆಗುತ್ತದೆ. ಪಕ್ಷ ನಿರ್ಣಯ ಮಾಡೋ ವಿಚಾರ ಇದು. ಇದರ ಬಗ್ಗೆ ನಾನು ವೈಯಕ್ತಿಕ ಅಭಿಪ್ರಾಯ ನೀಡಲ್ಲ ಎಂದು ತಿಳಿಸಿದ್ದಾರೆ.