ಲೋಕಸಭೆ ಸಚಿವಾಲಯದ ನಿರ್ದೇಶಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ನೊಯಿಡಾ: ಲೋಕಸಭೆ ಸಚಿವಾಲಯದ ನಿರ್ದೇಶಕರೊಬ್ಬರು ನೊಯಿಡಾದ ವಸತಿ ಸೊಸೈಟಿಯಲ್ಲಿರುವ ತಮ್ಮ ಫ್ಲ್ಯಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಸಾಲದ ಬಗ್ಗೆ ಉಲ್ಲೇಖಿಸಿ ಬರೆದಿದ್ದ ಆತ್ಮಹತ್ಯೆ ಪತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.ಗೌರವ್ ಗೌತಮ್ (40) ಮೃತರು. ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್

ನೊಯಿಡಾ: ಲೋಕಸಭೆ ಸಚಿವಾಲಯದ ನಿರ್ದೇಶಕರೊಬ್ಬರು ನೊಯಿಡಾದ ವಸತಿ ಸೊಸೈಟಿಯಲ್ಲಿರುವ ತಮ್ಮ ಫ್ಲ್ಯಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಸಾಲದ ಬಗ್ಗೆ ಉಲ್ಲೇಖಿಸಿ ಬರೆದಿದ್ದ ಆತ್ಮಹತ್ಯೆ ಪತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.ಗೌರವ್ ಗೌತಮ್ (40) ಮೃತರು. ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರು ಭಾನುವಾರ ಪತ್ತೆಯಾಗಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದ ನಂತರ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ಅಲ್ಲಿನ ವೈದ್ಯರು ಘೋಷಿಸಿದ್ದಾರೆ.ಗೌತಮ್ ಅವರ ಪತ್ನಿ ತಮ್ಮ ಹೆತ್ತವರ ಮನೆಗೆ ಹೋಗಿದ್ದರು. ಅಲ್ಲಿಂದ ಹಿಂತಿರುಗಿದಾಗ ಫ್ಲ್ಯಾಟ್ನ ಬಾಗಿಲು ಲಾಕ್ ಆಗಿರುವುದನ್ನು ಗಮನಿಸಿ, ಭದ್ರತಾ ಸಿಬ್ಬಂದಿಯ ನೆರವಿನೊಂದಿಗೆ ಮನೆ ಪ್ರವೇಶಿಸಿದಾಗ ಪತಿ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಕಂಡು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು.(ಯಾರಿಗಾದರೂ ಖಿನ್ನತೆ ಇದ್ದರೆ ಇಲ್ಲವೆ ಆತ್ಮಹತ್ಯೆಯ ಮನೋಭಾವ ಕಾಡುತ್ತಿದ್ದರೆ ಈ ಕೆಳಗಿನ ಸಹಾಯವಾಣಿ ಸಂಪರ್ಕಿಸಿ: ಟೆಲಿಮನಸ್–14416 ಅಥವಾ ಸಹಾಯ್– 080 25497777, 98864 44075)