ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ
ಮಂಗಳೂರು: ‘ನಗರದ ಕಾಲೇಜೊಂದರ ಇಬ್ಬರು ವಿದ್ಯಾರ್ಥಿಗಳ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಗಳ ಗುಂಪು ಮಂಗಳವಾರ ಹಲ್ಲೆ ನಡೆಸಿದೆ.ಗಾಯಾಳು ವಿದ್ಯಾರ್ಥಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೊಂದು ರ್ಯಾಗಿಂಗ್ ಪ್ರಕರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು, ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ’ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕ

ಮಂಗಳೂರು: ‘ನಗರದ ಕಾಲೇಜೊಂದರ ಇಬ್ಬರು ವಿದ್ಯಾರ್ಥಿಗಳ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಗಳ ಗುಂಪು ಮಂಗಳವಾರ ಹಲ್ಲೆ ನಡೆಸಿದೆ.ಗಾಯಾಳು ವಿದ್ಯಾರ್ಥಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೊಂದು ರ್ಯಾಗಿಂಗ್ ಪ್ರಕರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು, ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ’ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.‘ನಗರದ ಪದವಿ ಕಾಲೇಜೊಂದರ ಬಿಬಿಎ ಹಾಗೂ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್ ವಿದ್ಯಾರ್ಥಿಗಳಿಬ್ಬರು ನಗರದ ಗುಜ್ಜರಕೆರೆಯ ಚಹಾ ಅಂಗಡಿ ಬಳಿ ಇದ್ದಾಗ ಆರು ಮಂದಿ ವಿದ್ಯಾರ್ಥಿಗಳ ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ. ‘ಶೂ ಧರಿಸಬಾರದು ಎಂದು ಹೇಳಿ ಹೊಡೆದಿದ್ದಾರೆ’ ಎಂದು ಗಾಯಾಳುಗಳು ಆರೋಪಿಸಿದ್ದಾರೆ. ಹಲ್ಲೆ ನಡೆಸಿದ ಆರೋಪಿಗಳು ಅದೇ ಕಾಲೇಜಿನ ಲಾಜಿಸ್ಟಿಕ್ಸ್ ಡಿಪ್ಲೊಮಾದ ಎರಡನೇ ವರ್ಷದ ವಿದ್ಯಾರ್ಥಿಗಳು’ ಎಂದಿದ್ದಾರೆ.‘ಹಲ್ಲೆಗೆ ಒಳಗಾದ ಹಾಗೂ ಹಲ್ಲೆ ನಡೆಸಿದ ವಿದ್ಯಾರ್ಥಿಗಳು ಕೇರಳಂನವರು. ಬಂಧಿತರ ಪ್ರಕಾರ ಹಲ್ಲೆನಡೆಸಿದ ತಂಡದಲ್ಲಿ ಐವರು ಮಾತ್ರ ಇದ್ದರು. ಆದರೆ ಆರು ಮಂದಿ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೊಳಗಾದ ವಿದ್ಯಾರ್ಥಿಗಳು ದೂರಿದ್ದಾರೆ’ ಎಂದು ಹೇಳಿದರು