ಮದರಸಾಗಳಲ್ಲಿ ‘ವಂದೇ ಮಾತರಂ’ ಹಾಡುವುದರಿಂದ ಆಕಾಶವೇನೂ ಕಳಚಿ ಬೀಳಲ್ಲ: ಕೋರ್ಟ್
ಕೋಲ್ಕತ್ತ: ‘ಮದರಸಾಗಳಲ್ಲಿ 'ವಂದೇ ಮಾತರಂ' ಗೀತೆಯನ್ನು ಹಾಡುವುದರಿಂದ ಆಕಾಶವೇನೂ ಕಳಚಿ ಬೀಳುವುದಿಲ್ಲ’ ಎಂದು ಕಲ್ಕತ್ತ ಹೈಕೋರ್ಟ್ ಬುಧವಾರ ಹೇಳಿದೆ.ಮದರಸಾಗಳಲ್ಲಿ ವಂದೇ ಮಾತರಂ ಗಾಯನವನ್ನು ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.ಮುಖ್ಯ ನ್ಯಾಯಮೂರ್

ಕೋಲ್ಕತ್ತ: ‘ಮದರಸಾಗಳಲ್ಲಿ 'ವಂದೇ ಮಾತರಂ' ಗೀತೆಯನ್ನು ಹಾಡುವುದರಿಂದ ಆಕಾಶವೇನೂ ಕಳಚಿ ಬೀಳುವುದಿಲ್ಲ’ ಎಂದು ಕಲ್ಕತ್ತ ಹೈಕೋರ್ಟ್ ಬುಧವಾರ ಹೇಳಿದೆ.ಮದರಸಾಗಳಲ್ಲಿ ವಂದೇ ಮಾತರಂ ಗಾಯನವನ್ನು ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.ಮುಖ್ಯ ನ್ಯಾಯಮೂರ್ತಿ ತಪಬ್ರತ ಚಕ್ರವರ್ತಿ ಮತ್ತು ನ್ಯಾಯಮೂರ್ತಿ ಪಾರ್ಥ ಸಾರಥಿ ಸೇನ್ ಅವರನ್ನೊಳಗೊಂಡ ಪೀಠವು ವಿಚಾರಣೆಯ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದೆ.‘ವಂದೇ ಮಾತರಂ ಹಾಡುವುದರಿಂದ ಆಕಾಶವೇನೂ ಕರಚಿ ಬೀಳುವುದಿಲ್ಲ. ಇಂದು ನನ್ನ ಧರ್ಮದಲ್ಲಿ ಇಲ್ಲದ ಒಂದು ಸಾಲನ್ನು ಉಚ್ಚರಿಸಲು ನನಗೆ ಹೇಳಿದರೆ... ಏನಾಗುತ್ತದೆ? ನಾನು ಆ ಧರ್ಮಕ್ಕೆ ಸೇರದ ವ್ಯಕ್ತಿಯಾಗಿ ಬಿಡುತ್ತೇನೆಯೇ?’ ಎಂದು ಪೀಠ ಪ್ರಶ್ನಿಸಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ
Read the complete story at Prajavani