ರಾಜೀನಾಮೆ ಹಿಂಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಯಶವಂತರಾಯಗೌಡ ಪಾಟೀಲ ಅವರು, ತಮ್ಮ ನಿಲುವು ಬದಲಿಸಿಕೊಂಡಿದ್ದಾರೆ.ಡಿ.ಕೆ. ಶಿವಕುಮಾರ್ ಶಿವಕುಮಾರ್ ಮುಖ್ಯಮಂತ್ರಿಯಾಗಿ ಆಡಳಿತ ಚುಕ್ಕಾಣಿ ಹಿಡಿದು ಸರಿಯಾಗಿ ಎರಡು ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗಿದೆ. ನೂತನ ಸಚಿವರ ಪಟ್ಟಿ ಸೋಮವಾರ ಬಿಡುಗ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಯಶವಂತರಾಯಗೌಡ ಪಾಟೀಲ ಅವರು, ತಮ್ಮ ನಿಲುವು ಬದಲಿಸಿಕೊಂಡಿದ್ದಾರೆ.ಡಿ.ಕೆ. ಶಿವಕುಮಾರ್ ಶಿವಕುಮಾರ್ ಮುಖ್ಯಮಂತ್ರಿಯಾಗಿ ಆಡಳಿತ ಚುಕ್ಕಾಣಿ ಹಿಡಿದು ಸರಿಯಾಗಿ ಎರಡು ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗಿದೆ. ನೂತನ ಸಚಿವರ ಪಟ್ಟಿ ಸೋಮವಾರ ಬಿಡುಗಡೆಯಾಗುತ್ತಿದ್ದಂತೆ, ಸಚಿವ ಸ್ಥಾನದ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿತ್ತು.ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲವೆಂದು ಗೊತ್ತಾಗುತ್ತಿದ್ದಂತೆಯೇ ಸಿಡಿಮಿಡಿಗೊಂಡ ಯಶವಂತರಾಯಗೌಡ ಪಾಟೀಲ, ಹಂಗಾಮಿ ಸಭಾಧ್ಯಕ್ಷರಾಗಿದ್ದ ರುದ್ರಪ್ಪ ಲಮಾಣಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು.ಇದೀಗ ನಿರ್ಧಾರದಿಂದ ಹಿಂದೆ ಸರಿದಿರುವ ಅವರು, ಶಾಸಕ ಸ್ಥಾನಕ್ಕೆ ಕಾರಣಾಂತರಗಳಿಂದ ರಾಜೀನಾಮೆ ನೀಡಿದ್ದೆ. ರಾಜೀನಾಮೆ ಪತ್ರವನ್ನು ಹಿಂಪಡೆಯುತ್ತೇನೆ ಎಂದು ವಿಧಾನಸಭೆ ಕಾರ್ಯದರ್ಶಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
Read the complete story at Prajavani