ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕುವವರ ಮೇಲೆ ದಂಡ ಹಾಕಿ: ಸಚಿವ ಯತೀಂದ್ರ ಸಿದ್ದರಾಮಯ್ಯ
ಬೀದರ್: ‘ಬೀದರ್ ನಗರದಲ್ಲಿ ನಿತ್ಯ 110 ಟನ್ ತ್ಯಾಜ್ಯ ಸಂಗ್ರಹವಾಗುತ್ತಿದೆ. ಆದರೆ, ತ್ಯಾಜ್ಯ ಸಂಸ್ಕರಣೆಯ ಘಟಕವೇ ಇಲ್ಲ. ನಿತ್ಯ ಕಸದ ಗುಡ್ಡೆ ಹಾಕಿದರೆ ಹೇಗೆ? ಅದು ಬೆಳೆಯುತ್ತಲೇ ಹೋಗುತ್ತದೆ. ಇದಕ್ಕಾಗಿ ಸೂಕ್ತ ಯೋಜನೆ ರೂಪಿಸಿ, ಆದಷ್ಟು ಶೀಘ್ರ ಅನುಷ್ಠಾನಗೊಳಿಸಬೇಕು’ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಇಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.ನಗರ

ಬೀದರ್: ‘ಬೀದರ್ ನಗರದಲ್ಲಿ ನಿತ್ಯ 110 ಟನ್ ತ್ಯಾಜ್ಯ ಸಂಗ್ರಹವಾಗುತ್ತಿದೆ. ಆದರೆ, ತ್ಯಾಜ್ಯ ಸಂಸ್ಕರಣೆಯ ಘಟಕವೇ ಇಲ್ಲ. ನಿತ್ಯ ಕಸದ ಗುಡ್ಡೆ ಹಾಕಿದರೆ ಹೇಗೆ? ಅದು ಬೆಳೆಯುತ್ತಲೇ ಹೋಗುತ್ತದೆ. ಇದಕ್ಕಾಗಿ ಸೂಕ್ತ ಯೋಜನೆ ರೂಪಿಸಿ, ಆದಷ್ಟು ಶೀಘ್ರ ಅನುಷ್ಠಾನಗೊಳಿಸಬೇಕು’ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಇಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಹಸಿ ಕಸ ಹಾಗೂ ಒಣ ಕಸವನ್ನು ವಿಂಗಡಿಸಿ ಕೊಡುವುದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಜನರಿಗೆ ಡಸ್ಟ್ ಬೀನ್ಗಳನ್ನು ಕೊಡುತ್ತಿರೋ ಅಥವಾ ಬೇರೇನೋ ಮಾಡುತ್ತಿರೋ ಗೊತ್ತಿಲ್ಲ. ಆದರೆ, ಮೂಲದಲ್ಲೇ ತ್ಯಾಜ್ಯ ಪ್ರತ್ಯೇಕಿಸುವ ಕೆಲಸವಾಗಬೇಕು. ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕುವವರ ಮೇಲೆ ದಂಡ ವಿಧಿಸಬೇಕು. ಇತರೆ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಾದ ಉತ್ತಮ ಕೆಲಸವನ್ನು ನೋಡಿಕೊಂಡು ಜಾರಿಗೆ ತರಬೇಕು. ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಕೂಡಲೇ ಪ್ರಸ್ತಾವ ಕಳಿಸಿಕೊಡಬೇಕು ಎಂದು ನಿರ್ದೇಶನ ನೀಡಿದರು.ಬೀದರ್ ನಗರದಲ್ಲಿ ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಹೇಗಿದೆ ಎಂದು ಕೇಳಿದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತ ಮುಕುಲ್ ಜೈನ್, ಸರಿಯಾದ ನಿರ್ವಹಣೆ ಇರಲಿಲ್ಲ. ಆದಕಾರಣ ಗುತ್ತಿಗೆ ರದ್ದುಪಡಿಸಲಾಗಿದೆ ಎಂದು ತಿಳಿಸಿದರು.ಪಾಲಿಕೆಗೆ ಸೇರಿದ ಆಸ್ತಿಯನ್ನು ಮ್ಯಾಪಿಂಗ್ ಮಾಡಿಸಬೇಕು. ಖಾತಾ ಕೊಡುವುದನ್ನು ಮಿಷನ್ ರೂಪದಲ್ಲಿ ಮಾಡಬೇಕು. ಯಾರಿಗೂ ತೊಂದರೆ ಆಗಬಾರದು ಎಂದು ಸೂಚಿಸಿದರು.ನಗರದ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಗಳಿಗೆ ವೇಗ ನೀಡಬೇಕು. ಎಲ್ಲಾ ರಸ್ತೆಗಳಲ್ಲಿರುವ ಗುಂಡಿಗಳನ್ನು ಆದಷ್ಟು ಬೇಗ ಮುಚ್ಚಿಸಬೇಕು. ಅತಿಕ್ರಮಣವಾಗಿರುವ ಪಾದಚಾರಿ ಮಾರ್ಗ ತೆರವುಗೊಳಿಸಲು ಕ್ರಮ ವಹಿಸಬೇಕೆಂದು ತಾಕೀತು ಮಾಡಿದರು.ನಗರದಲ್ಲಿ ಮೆಗಾ ಮಾರುಕಟ್ಟೆ ನಿರ್ಮಿಸಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅನುಕೂಲ ಮಾಡಿಕೊಡಬೇಕು. ದೊಡ್ಡ ವ್ಯಾಪಾರಿಗಳು ಹೇಗೋ ವ್ಯವಸ್ಥೆ ಮಾಡಿಕೊಳ್ಳುತ್ತಾರೆ. ಸಣ್ಣ ವ್ಯಾಪಾರಿಗಳ ಹಿತ ಕಾಪಾಡಬೇಕು ಎಂದು ಹೇಳಿದರು.ತೆರಿಗೆ ಸಂಗ್ರಹ ಕೂಡ ಹೆಚ್ಚಿಸಬೇಕು. ಪ್ರತಿಯೊಂದು ಅಂಗಡಿಗಳು ಟ್ರೇಡ್ ಲೈಸನ್ಸ್ ಕಡ್ಡಾಯವಾಗಿ ಹೊಂದಿರಬೇಕು. ಟ್ರೇಡ್ ಲೈಸನ್ಸ್ ಹೊಂದಿರದ ಅಂಗಡಿಗಳಿಗೆ ಅನುಮತಿ ನೀಡಬಾರದು ಎಂದು ಸೂಚಿಸಿದರು.ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಕುಡಿಯುವ ನೀರಿನ ಕೆಲಸ ಶೀಘ್ರ ಮುಗಿಸಬೇಕು. ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಣ್ಣ ಸಮುದಾಯಗಳು, ಸಂಘ ಸಂಸ್ಥೆಗಳಿಗೆ ಸಿ.ಎ ಸೈಟ್ ಬಗ್ಗೆ ಕೋರಿಕೆ ಬಂದಲ್ಲಿ ಒದಗಿಸಬೇಕು. ವಸತಿ ಯೋಜನೆಯಡಿ ಬೇಡಿಕೆಗೆ ಅನುಗುಣವಾಗಿ ಕಾಮಗಾರಿಗಳನ್ನು ರೂಪಿಸಬೇಕು ಎಂದು ಹೇಳಿದರು.‘ಬೀದರ್ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರು ಹಾಗೂ ಕಸ ತೆಗೆದುಕೊಂಡು ಹೋಗುವ ವಾಹನಗಳಿಗೆ ಕೊರತೆ ಇದೆ. ಆದಕಾರಣ ಹೊಸದಾಗಿ 201 ಪೌರ ಕಾರ್ಮಿಕರ ನೇಮಕಾತಿ ಮಾಡಲಾಗುವುದು. ಈಗಾಗಲೇ ‘ಡಿ’ ಗ್ರುಪ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆ. 10ರೊಳಗೆ ಅರ್ಜಿ ಸಲ್ಲಿಸಬಹುದು. ಅದೇ ರೀತಿ ಹೊಸ ವಾಹನಗಳ ಖರೀದಿಗೂ ಸೂಚನೆ ಕೊಟ್ಟಿರುವೆ’ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಪೌರ ಕಾರ್ಮಿಕರ ನೇಮಕಕ್ಕೆ ಕ್ರಮ