ಜಾರ್ಖಂಡ್ ವಿದ್ಯಾರ್ಥಿಗಳ ಪ್ರತಿಭಟನೆಗೆ ಸೋನಂ ವಾಂಗ್ಚುಕ್, ದೀಪ್ಕೆ ಬೆಂಬಲ
ರಾಂಚಿ: ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿರುವ ಆರೋಪದ ವಿರುದ್ಧ ಜಾರ್ಖಂಡ್ನಲ್ಲಿ (Jharkhand) ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದೆ. (Student Protest) ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಗೆ ಈಗ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಮತ್ತು CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬೆಂಬಲ ಸೂಚಿಸಿದ್ದಾರೆ. ವಿ

ರಾಂಚಿ: ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿರುವ ಆರೋಪದ ವಿರುದ್ಧ ಜಾರ್ಖಂಡ್ನಲ್ಲಿ (Jharkhand) ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದೆ. (Student Protest) ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಗೆ ಈಗ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಮತ್ತು CJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬೆಂಬಲ ಸೂಚಿಸಿದ್ದಾರೆ. ವಿದ್ಯಾರ್ಥಿ ನಾಯಕ ದೇವೇಂದ್ರ ನಾಥ್ ಮಹತೋ ಕಳೆದ 12 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಈ ವೇಳೆ ಸೋನಂ ವಾಂಗ್ಚುಕ್ ಅವರೊಂದಿಗೆ ವಿಡಿಯೋ ಕರೆ ಮೂಲಕ ಮಾತನಾಡಿದ ಅವರು, ಅವರ ಮನವಿಯ ಮೇರೆಗೆ ನೀರು ಕುಡಿದು ಉಪವಾಸ ಕೊನೆಗೊಳಿಸಿದ್ದಾರೆ. ಆದರೆ, ಪ್ರತಿಭಟನೆ ಇನ್ನೂ ಮುಂದುವರೆದಿದೆ. ಪ್ರತಿಭಟನಾಕಾರರು JPSC (ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ) ಮತ್ತು JSSC (ಜಾರ್ಖಂಡ್ ಸಿಬ್ಬಂದಿ ನೇಮಕಾತಿ ಆಯೋಗ) ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ. 14ನೇ JPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ರದ್ದುಪಡಿಸಿ, ಪರೀಕ್ಷೆ ನಡೆಸಿದ ಸಂಸ್ಥೆಗಳ ವಿರುದ್ಧ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 1.11 ಕೋಟಿ ಜನರು ಮತದಾರರ ಪಟ್ಟಿಯಿಂದ ಔಟ್? ಈ ಕುರಿತು ವಿದ್ಯಾರ್ಥಿ ನಾಯಕ ದೇವೇಂದ್ರ ನಾಥ್ ಮಹತೋ ಮಾತನಾಡಿ, ಮುಖ್ಯಮಂತ್ರಿ ಹೇಮಂತ್ ಸೊರೇನ್ ನಮ್ಮ ಜೊತೆ ನೇರವಾಗಿ ಮಾತುಕತೆ ನಡೆಸಬೇಕು. ʼಭರವಸೆ ಬೇಡ, ನ್ಯಾಯ ಬೇಕುʼ ಎಂದು ಆಗ್ರಹಿಸಿದ್ದಾರೆ. ಅವರ ಆರೋಗ್ಯದ ಬಗ್ಗೆ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಜಾರ್ಖಂಡ್ಗೆ ಸಿಜೆಪಿ ಮೆರವಣಿಗೆ ಸಂಸ್ಥಾಪಕ ಅಭಿಜೀತ್ ದೀಪ್ಕೆ ಇಂದು ಛತ್ರಪತಿ ಸಂಭಾಜಿನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರತಿಭಟನೆಗೆ ಕಾಕ್ರೋಚ್ ಜನತಾ ಪಕ್ಷ (CJP)ದ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಪ್ರತಿಭಟನಾ ನಿರತ ಉದ್ಯೋಗ ಆಕಾಂಕ್ಷಿಗಳನ್ನು ಬೆಂಬಲಿಸಲು ತಮ್ಮ ಸದಸ್ಯರು ಜಾರ್ಖಂಡ್ಗೆ ಮೆರವಣಿಗೆ ನಡೆಸಲಿದ್ದಾರೆ ಎಂದು ದೀಪ್ಕೆ ಘೋಷಿಸಿದ್ದಾರೆ. ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಹೇಮಂತ್ ಸೊರೇನ್, ಸರ್ಕಾರ ವಿದ್ಯಾರ್ಥಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ. ತನಿಖೆ ನಡೆಯುತ್ತಿದ್ದು, ವರದಿ ಬಂದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಐಡಿ ಈಗಾಗಲೇ 14 ಮಂದಿಯನ್ನು ಬಂಧಿಸಿದೆ. ನೇಮಕಾತಿ ಅಕ್ರಮದ ತನಿಖೆ ಮುಂದುವರಿದಿದ್ದು, ಮಾಜಿ ಜೆಪಿಎಸ್ಸಿ ಅಧ್ಯಕ್ಷರನ್ನು ವಿಚಾರಣೆ ನಡೆಸಲಾಗಿದೆ. ಇದೇ ವೇಳೆ ಬಿಜೆಪಿ ಹಾಗೂ ಬಿಜೆವೈಎಂ ಕೂಡ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿ ರಾಜೀನಾಮೆ ಹಾಗೂ ಕೇಂದ್ರ ತನಿಖೆಗೆ ಒತ್ತಾಯಿಸಿವೆ. ಇದನ್ನೂ ಓದಿ: ರಾಯಚೂರುಗೆ ಸಚಿವ ಸ್ಥಾನ ಸಿಗದ ಬೇಸರ; ನಿಗಮ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ದದ್ದಲ್ ರಾಜೀನಾಮೆ