ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ – 21 ದಿನದಲ್ಲಿ 3.75 ಕೋಟಿ ಕಾಣಿಕೆ ಸಂಗ್ರಹ
ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ (Shri Raghavendra Swamy Mutt) ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 21 ದಿನದಲ್ಲಿ 3.75 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಪ್ರತೀ ತಿಂಗಳಿನಂತೆ ಈ ಬಾರಿಯೂ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರ ದಂಡು ಮಠಕ್ಕೆ ಹರಿದು ಬಂದಿದೆ. ಜುಲೈ ಹಾಗೂ ಆಗಸ್ಟ್ ತಿಂಗಳಿನ 21 ದಿನದಲ್ಲಿ ಕೋಟ್ಯಂತರ ರೂ

ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ (Shri Raghavendra Swamy Mutt) ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 21 ದಿನದಲ್ಲಿ 3.75 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಪ್ರತೀ ತಿಂಗಳಿನಂತೆ ಈ ಬಾರಿಯೂ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರ ದಂಡು ಮಠಕ್ಕೆ ಹರಿದು ಬಂದಿದೆ. ಜುಲೈ ಹಾಗೂ ಆಗಸ್ಟ್ ತಿಂಗಳಿನ 21 ದಿನದಲ್ಲಿ ಕೋಟ್ಯಂತರ ರೂ. ಕಾಣಿಕೆ ಹರಿದು ಬಂದಿದ್ದು, 3,75,91,531 ರೂ. ಸಂಗ್ರಹವಾಗಿದೆ.ಇದನ್ನೂ ಓದಿ:ರೈತರನ್ನು ಹೆ ದರಿಸಿ, ಬೆದರಿಸಿ ಒತ್ತಾಯಪೂರ್ವಕವಾಗಿ ಸಹಿ ಹಾಕಿಸಿದರೆ ನಾವು ಸುಮ್ಮನೆ ಕೂರಲ್ಲ: ನಿಖಿಲ್ ಸಂಗ್ರಹವಾದ ಒಟ್ಟು ಕಾಣಿಕೆಯಲ್ಲಿ 3,65,16,531 ರೂ. ಕರೆನ್ಸಿ ನೋಟುಗಳು, 10,75,000 ರೂ. ನಾಣ್ಯಗಳು ಸಂಗ್ರಹವಾಗಿವೆ. ಇದರ ಜೊತೆಗೆ 49 ಗ್ರಾಂ ಚಿನ್ನ, 865 ಗ್ರಾಂ ಬೆಳ್ಳಿಯನ್ನ ಭಕ್ತರು ಕಾಣಿಕೆ ರೂಪದಲ್ಲಿ ನೀಡಿದ್ದಾರೆ. ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು. ಮುಜರಾಯಿ ಇಲಾಖೆ ಅಧಿಕಾರಿಗಳು, ಶ್ರೀಮಠದ ಅಧಿಕಾರಿಗಳು ಹುಂಡಿ ಎಣಿಕೆ ವೇಳೆ ಹಾಜರಿದ್ದರು.ಇದನ್ನೂ ಓದಿ: ರಾಯಚೂರುಗೆ ಸಚಿವ ಸ್ಥಾನ ಸಿಗದ ಬೇಸರ; ನಿಗಮ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ದದ್ದಲ್ ರಾಜೀನಾಮೆ