ನಾನು ರೈತರ ಪರ, ಮಂಡ್ಯದವಳು – ಅಖಂಡ ಕರ್ನಾಟಕ ಬಂದ್ಗೆ ನಟಿ ರಮ್ಯಾ ಬೆಂಬಲ
ಬೆಂಗಳೂರು: ಆಗಸ್ಟ್ 13ರ ಅಖಂಡ ಕರ್ನಾಟಕ ಬಂದ್ಗೆ (Karnataka Bandh) ನಟಿ ರಮ್ಯಾ (Actress Ramya) ಸಾಥ್ ನೀಡಿದ್ದಾರೆ. ಕಾವೇರಿ ಹೋರಾಟಕ್ಕೆ (Cauvery Water Dispute) ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಘೋಷಿಸಿದ್ದಾರೆ. ಕಾವೇರಿ ನೀರಿನ ಹೋರಾಟ ತೀವ್ರಗೊಳ್ಳುತ್ತಿರುವ ನಡುವೆಯೇ, ಕಾವೇರಿ ಕೊಳ್ಳದಲ್ಲಿ ಮಳೆಯಾಗುತ್ತಿದೆ. ಅದಾಗ್ಯೂ ಆಗಸ್ಟ್ 13ರಂದು ಕರೆ ನೀಡಲಾಗಿರ

ಬೆಂಗಳೂರು: ಆಗಸ್ಟ್ 13ರ ಅಖಂಡ ಕರ್ನಾಟಕ ಬಂದ್ಗೆ (Karnataka Bandh) ನಟಿ ರಮ್ಯಾ (Actress Ramya) ಸಾಥ್ ನೀಡಿದ್ದಾರೆ. ಕಾವೇರಿ ಹೋರಾಟಕ್ಕೆ (Cauvery Water Dispute) ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಘೋಷಿಸಿದ್ದಾರೆ. ಕಾವೇರಿ ನೀರಿನ ಹೋರಾಟ ತೀವ್ರಗೊಳ್ಳುತ್ತಿರುವ ನಡುವೆಯೇ, ಕಾವೇರಿ ಕೊಳ್ಳದಲ್ಲಿ ಮಳೆಯಾಗುತ್ತಿದೆ. ಅದಾಗ್ಯೂ ಆಗಸ್ಟ್ 13ರಂದು ಕರೆ ನೀಡಲಾಗಿರುವ ಅಖಂಡ ಕರ್ನಾಟಕ ಬಂದ್ಗೆ ನಟಿ ರಮ್ಯಾ ಬೆಂಬಲ ಘೋಷಿಸಿದ್ದಾರೆ. ನಾನು ಮಂಡ್ಯದವಳು. ಕಾವೇರಿ ವಿಚಾರ ಬಂದಾಗ ರೈತರ ಪರವಾಗಿ ನಿಲ್ಲುವುದು ನನ್ನ ಜವಾಬ್ದಾರಿ. ನನ್ನ ಬೆಂಬಲ ಖಂಡಿತ ಇರುತ್ತದೆ ಎಂದು ರಮ್ಯಾ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸ್ನೇಹಿತನ ಬರ್ತ್ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ – ಇಬ್ಬರು ದುರ್ಮರಣ, ಮೂವರು ಗಂಭೀರ ಕಾವೇರಿ ವಿಚಾರವಾಗಿ ಈ ಹಿಂದೆಯೂ ಹೋರಾಟಗಳಲ್ಲಿ ಭಾಗಿಯಾಗಿದ್ದೇನೆ. ಕಾವೇರಿ ನೀರಿನ ವಿಚಾರ ಸುಪ್ರೀಂ ಕೋರ್ಟ್ನಲ್ಲಿ ಚರ್ಚೆಯಾಗುತ್ತಿದ್ದಾಗಲೂ ಅಲ್ಲಿದ್ದೆ ಎಂದು ರಮ್ಯಾ ಹೇಳಿದ್ದಾರೆ. ರೈತರ ಹಿತದ ಪ್ರಶ್ನೆ ಬಂದಾಗ ಯಾವುದೇ ಹಿಂಜರಿಕೆಯಿಲ್ಲದೆ ಬೆಂಬಲ ನೀಡುತ್ತೇನೆ. ಇದನ್ನು ಮತ್ತೆ ಹೇಳಬೇಕಾದ ಅಗತ್ಯವೇ ಇಲ್ಲ. ನಾನು ಯಾವಾಗಲೂ ರೈತರ ಪರವಾಗಿಯೇ ಇರುತ್ತೇನೆ ಎಂದಿದ್ದಾರೆ. ಕಾವೇರಿ ವಿಚಾರ ಮತ್ತೆ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಯ ಕೇಂದ್ರವಾಗಿರುವ ಬೆನ್ನಲ್ಲೇ, ನಟಿ ರಮ್ಯಾ ಅವರ ಈ ಹೇಳಿಕೆ ಹೋರಾಟಕ್ಕೆ ಮತ್ತಷ್ಟು ಬಲ ನೀಡುವ ಸಾಧ್ಯತೆ ಮೂಡಿಸಿದೆ. ಇದನ್ನೂ ಓದಿ: ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ – ಬೆಂಬಲಿಗರಿಂದ ಬಾಗೇಪಲ್ಲಿ ಬಂದ್, ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ಆಗಸ್ಟ್ 13ಕ್ಕೆ ಬಂದ್ ನಡೆದರೆ ನಟಿ ರಮ್ಯಾ ಬೀದಿಗಿಳಿದು ಕಾವೇರಿ ಪರ ಹೋರಾಟ ಮಾಡುತ್ತಾರಾ? ಕೇವಲ ಬೆಂಬಲ ನೀಡುತ್ತಾರಾ ಅಂತ ಕಾದು ನೋಡಬೇಕಿದೆ. ರಮ್ಯಾರ ಬೆಂಬಲವನ್ನ ಕನ್ನಡಪರ ಹೋರಾಟಗಾರರು ಸ್ವಾಗತಿಸಿದ್ದು, ಬಂದ್ಗೆ ಮತ್ತಷ್ಟು ಬಲ ಸಿಕ್ಕಿದೆ. ಇದನ್ನೂ ಓದಿ: ರಾಮನಗರ ಕರಗ ಉತ್ಸವದಲ್ಲಿ ʻಡಿ ಬಾಸ್ʼ, ʻಡಿ ಬಾಸ್ʼ ಘೋಷಣೆ – ಗರಂ ಆದ ಸಿಎಂ