3 ಕೋಟಿ ರೂ. ವಂಚನೆ ಕೇಸ್ – ಸಲ್ಮಾನ್ ಖಾನ್, ಸಹೋದರಿಗೆ ಕೋರ್ಟ್ ಸಮನ್ಸ್ ಜಾರಿ
ಚಂಡೀಗಢದ ಮಣಿಮಜ್ರಾದಲ್ಲಿರುವ ಬೀಯಿಂಗ್ ಹ್ಯೂಮನ್ ಆಭರಣ ಶೋರೂಮ್ಗೆ ಸಂಬಂಧಿಸಿದ ವಂಚನೆ ದೂರಿಗೆ ಸಂಬಂಧಿಸಿದಂತೆ ನಟ ಸಲ್ಮಾನ್ ಖಾನ್ (Salman Khan), ಸಹೋದರಿ ಅಲ್ವಿರಾ ಖಾನ್ ಅಗ್ನಿಹೋತ್ರಿಗೆ (Alvira Khan Agnihotri) ಚಂಡೀಗಢ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಜೊತೆಗೆ ಸ್ಟೈಲ್ ಅಂಡ್ ಕಂಟೆಂಟ್ ಜ್ಯುವೆಲ್ಲರಿ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರಿಗೂ ಕೋ

ಚಂಡೀಗಢದ ಮಣಿಮಜ್ರಾದಲ್ಲಿರುವ ಬೀಯಿಂಗ್ ಹ್ಯೂಮನ್ ಆಭರಣ ಶೋರೂಮ್ಗೆ ಸಂಬಂಧಿಸಿದ ವಂಚನೆ ದೂರಿಗೆ ಸಂಬಂಧಿಸಿದಂತೆ ನಟ ಸಲ್ಮಾನ್ ಖಾನ್ (Salman Khan), ಸಹೋದರಿ ಅಲ್ವಿರಾ ಖಾನ್ ಅಗ್ನಿಹೋತ್ರಿಗೆ (Alvira Khan Agnihotri) ಚಂಡೀಗಢ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಜೊತೆಗೆ ಸ್ಟೈಲ್ ಅಂಡ್ ಕಂಟೆಂಟ್ ಜ್ಯುವೆಲ್ಲರಿ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರಿಗೂ ಕೋರ್ಟ್ ಸಮನ್ಸ್ ನೀಡಿದೆ. ಎಲ್ಲಾ ಆರೋಪಿಗಳು ಅಕ್ಟೋಬರ್ 5 ರಂದು ಹಾಜರಾಗಿ ಆರೋಪಗಳಿಗೆ ಉತ್ತರಗಳನ್ನು ಸಲ್ಲಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ. ಇದನ್ನೂ ಓದಿ: Exclusive: ಆರೋಪಿ ದರ್ಶನ್ಗೆ ಅತಿದೊಡ್ಡ ಸಂಕಷ್ಟ; ಪ್ರಕರಣದ ಎ-14 ಪ್ರದೋಷ್ನಿಂದ ಮಾಫಿ ಸಾಕ್ಷಿಗೆ ಅರ್ಜಿ ಚಂಡೀಗಢ ಮೂಲದ ಉದ್ಯಮಿ ಅರುಣ್ ಗುಪ್ತಾ ಅವರು ದೂರು ದಾಖಲಿಸಿದ್ದರು. ಉತ್ತಮ ವ್ಯವಹಾರ ನಿರೀಕ್ಷೆಯ ಸುಳ್ಳು ಭರವಸೆ ನೀಡಿ ಶೋರೂಂನಲ್ಲಿ ಹೂಡಿಕೆ ಮಾಡಲು ನನ್ನನ್ನು ಮನವೊಲಿಸಿದ್ದರು. ತರುವಾಯ ನನಗೆ ಹಲವಾರು ಕೋಟಿ ನಷ್ಟವಾಗಿದೆ ಎಂದು ಆರೋಪಿಸಿದ್ದಾರೆ. ಬೀಯಿಂಗ್ ಹ್ಯೂಮನ್ ಆಭರಣಗಳನ್ನು ಮಾರಾಟ ಮಾಡಲು ಪರವಾನಗಿ ಪಡೆದ ಸ್ಟೈಲ್ & ಕಂಟೆಂಟ್ ಜ್ಯುವೆಲ್ಲರಿ ಪ್ರೈವೇಟ್ ಲಿಮಿಟೆಡ್ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಗುಪ್ತಾ ಸುಮಾರು 3 ಕೋಟಿ ರೂ.ಗಳನ್ನು ಹೂಡಿಕೆ ಮಾಡಿದ್ದಾರೆ. ಶೋರೂಮ್ ಸ್ಥಾಪಿಸಲು ಸುಮಾರು 1 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಒಪ್ಪಂದದ ಅಡಿಯಲ್ಲಿ ಅಗತ್ಯವಿರುವ ಎಲ್ಲಾ ಒಪ್ಪಂದದ ಬಾಧ್ಯತೆಗಳನ್ನು ಪೂರೈಸಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಪುಷ್ಕರ್ ಕನಸಿನ `ವಿಜಯನಗರ ಸಾಮ್ರಾಜ್ಯ’ – ಭಾರೀ ಬಜೆಟ್ನಲ್ಲಿ ನಿರ್ಮಾಣ ಶೋರೂಮ್ ಶುರುವಾರ ನಂತರ ಕಂಪನಿ ನೀಡಿದ್ದ ವ್ಯಾಪಾರ ಬೆಂಬಲವನ್ನು ಒದಗಿಸಲು ವಿಫಲವಾಗಿದೆ. ಇದರಿಂದ ನನಗೆ ಆರ್ಥಿಕ ನಷ್ಟವಾಗಿದೆ ಎಂದು ಗುಪ್ತಾ ಆರೋಪಿಸಿದ್ದರು.