ಸಚಿವ ಸಂಪುಟ ವಿಸ್ತರಣೆ: ಮುಂದೆ ಅವಕಾಶ ಇವೆ, ಕಾಯುತ್ತೇನೆ–ಚನ್ನಗಿರಿ ಶಾಸಕ ಶಿವಗಂಗಾ
ದಾವಣಗೆರೆ: ‘ಈ ಬಾರಿ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ನಿರೀಕ್ಷೆ ಇತ್ತು. ಆದರೆ ಸ್ಥಾನ ಸಿಗದಿದ್ದಕ್ಕೆ ಬೇಸರವೇನೂ ಆಗಿಲ್ಲ. ಮುಂದೆ ಸಾಕಷ್ಟು ಅವಕಾಶಗಳಿದ್ದು, ಕಾಯುತ್ತೇನೆ’ ಎಂದು ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ‘ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದರು. ಮೊದಲ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಒಂದು ವೇಳೆ ಸಿ
ದಾವಣಗೆರೆ: ‘ಈ ಬಾರಿ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ನಿರೀಕ್ಷೆ ಇತ್ತು. ಆದರೆ ಸ್ಥಾನ ಸಿಗದಿದ್ದಕ್ಕೆ ಬೇಸರವೇನೂ ಆಗಿಲ್ಲ. ಮುಂದೆ ಸಾಕಷ್ಟು ಅವಕಾಶಗಳಿದ್ದು, ಕಾಯುತ್ತೇನೆ’ ಎಂದು ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ‘ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದರು. ಮೊದಲ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಒಂದು ವೇಳೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯನ್ನು ಕೊಟ್ಟರೆ ನಿಭಾಯಿಸುತ್ತೇನೆ ಎಂದರು. ಭ್ರಷ್ಟಾಚಾರ ಆರೋಪವಿದ್ದರೂ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂಬ ವಿರೋಧಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಭ್ರಷ್ಟಾಚಾರದ ಆರೋಪ ಯಾರ ಮೇಲೆ ಇಲ್ಲ ಹೇಳಿ? ಜೈಲಿಗೆ ಹೋಗಿ ಬಂದಿದ್ದರೂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲಾಯಿತು. ಬಿಜೆಪಿಯವರಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ಕೊಟ್ಟಿದ್ದರಲ್ಲಿ ತಪ್ಪಿಲ್ಲ’ ಎಂದು ಸಮರ್ಥಿಸಿಕೊಂಡರು.‘ಪ್ರಾಂತ್ಯವಾರು ಸಚಿವ ಸ್ಥಾನ ನೀಡಲಾಗಿದೆ. ಹೀಗಾಗಿ ನಮ್ಮ ಭಾಗದಲ್ಲಿ ಕೆ.ಎಸ್. ಬಸವಂತಪ್ಪ ಅವರಿಗೆ ಅವಕಾಶ ನೀಡಿದ್ದಕ್ಕೆ ಸಂತೋಷವಿದೆ’ ಎಂದರು.ಎಸ್ಎಸ್ ಮಲ್ಲಿಕಾರ್ಜುನ್ ಅವರು ಬ್ಲ್ಯಾಕ್ಮೇಲ್ ಮಾಡಿ ಸಚಿವ ಸ್ಥಾನ ಪಡೆದಿದ್ದಾರೆ ಎಂಬ ಆರೋಪವನ್ನು ಅಲ್ಲಗಳೆದ ಅವರು, ‘ನಮ್ಮ ಪಕ್ಷದಲ್ಲಿ ಯಾವ ಬ್ಲ್ಯಾಕ್ ಮೇಲ್ ನಡೆಯುವುದಿಲ್ಲ’ ಎಂದು ಹೇಳಿದರು.