ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ (ವಿಎಒ) ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಆಗಸ್ಟ್ 20ರವರೆಗೆ ವಿಸ್ತರಿಸಿದೆ.ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಗ್ರೂಪ್–ಸಿ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಮೊದಲು ಜುಲೈ 30 ಕೊನೇ ದಿನವಾಗಿ

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ (ವಿಎಒ) ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಆಗಸ್ಟ್ 20ರವರೆಗೆ ವಿಸ್ತರಿಸಿದೆ.ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಗ್ರೂಪ್–ಸಿ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಮೊದಲು ಜುಲೈ 30 ಕೊನೇ ದಿನವಾಗಿತ್ತು. ಬಳಿಕ ಆ ದಿನಾಂಕವನ್ನು ಆಗಸ್ಟ್ 7ಕ್ಕೆ ವಿಸ್ತರಿಸಲಾಗಿತ್ತು. #KEARecruitment: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಆಗಸ್ಟ್ 20ರವರೆಗೆ #KEA ವಿಸ್ತರಿಸಿದೆ.ಶುಲ್ಕ ಪಾವತಿಸಲು ಆಗಸ್ಟ್ 21 ಕೊನೆ ದಿನ.ಸಾರ್ವಜನಿಕರ ಕೋರಿಕೆ ಮೇರೆಗೆ ಆ.7ಕ್ಕೆ ಇದ್ದ ಕೊನೆ ದಿನಾಂಕ ವಿಸ್ತರಿಸಲಾಗಿದೆ.ಕಲ್ಯಾಣ ಕರ್ನಾಟಕ ವೃಂದಕ್ಕೆ ಅರ್ಜಿ ಸಲ್ಲಿಸುವವರಿಗೂ ಅನ್ವಯವಾಗುತ್ತದೆ.… pic.twitter.com/mR1Uq9sHur— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) August 6, 2026 ಈಗ ಸಾರ್ವಜನಿಕರ ಕೋರಿಕೆ ಮೇರೆಗೆ ಆಗಸ್ಟ್ 7ಕ್ಕೆ ಇದ್ದ ಕೊನೆ ದಿನಾಂಕ ಮತ್ತೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಲು ಆಗಸ್ಟ್ 21 ಕೊನೇ ದಿನ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.ಕಲ್ಯಾಣ ಕರ್ನಾಟಕ ವೃಂದಕ್ಕೆ ಅರ್ಜಿ ಸಲ್ಲಿಸುವವರಿಗೂ ಇದು ಅನ್ವಯವಾಗುತ್ತದೆ ಎಂದೂ ಅವರು ಹೇಳಿದ್ದಾರೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಿದ ಕೆಇಎ