ತೋಟಗಾರಿಕೆ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ, ಆ.30 ಕೊನೆಯ ದಿನ
ಬೆಂಗಳೂರು: ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಆ.30 ಕೊನೆಯ ದಿನ.ಉಳಿಕೆ ಮೂಲ ವೃಂದದಲ್ಲಿ ಸಹಾಯಕ ತೋಟಗಾರಿಕೆ ನಿರ್ದೇಶಕರ 5 ಹುದ್ದೆ ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿ ದರ್ಜೆಯಲ್ಲಿ 75 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟ
ಬೆಂಗಳೂರು: ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಆ.30 ಕೊನೆಯ ದಿನ.ಉಳಿಕೆ ಮೂಲ ವೃಂದದಲ್ಲಿ ಸಹಾಯಕ ತೋಟಗಾರಿಕೆ ನಿರ್ದೇಶಕರ 5 ಹುದ್ದೆ ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿ ದರ್ಜೆಯಲ್ಲಿ 75 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ವೃಂದದಲ್ಲಿ 5 ಸಹಾಯಕ ತೋಟಗಾರಿಕೆ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.ಸಹಾಯಕ ತೋಟಗಾರಿಕೆ ನಿರ್ದೇಶಕರ ಹುದ್ದೆಗೆ ತೋಟಗಾರಿಕೆ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಬಿ.ಎಸ್ಸಿಯಲ್ಲೂ ತೋಟಗಾರಿಕೆ ವಿಷಯ ಓದಿರಬೇಕು. ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗೆ ತೋಟಗಾರಿಕೆ ವಿಷಯದಲ್ಲಿ ಪದವಿ ಪಡೆದಿರಬೇಕು. ಅರ್ಜಿ ಶುಲ್ಕ ಪಾವತಿಸಲು ಆ.31 ಕೊನೆಯ ದಿನ.ಭೂಮಾಪಕರ ನೇಮಕಾತಿ: ಅವಧಿ ವಿಸ್ತರಣೆಭೂಮಾಪಕರ ಹುದ್ದೆಗೆ ನಿಗದಿಪಡಿಸಿದ್ದ ಕನಿಷ್ಠ ವಿದ್ಯಾರ್ಹತೆಯಲ್ಲಿ ಇಲಾಖೆಯು ತಿದ್ದುಪಡಿ ಮಾಡಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಆ.20ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ 21 ಕೊನೆ ದಿನ.ನೇಮಕಾತಿಯ ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ಸೈಟ್ಗೆ ಭೇಟಿ ನೀಡಬಹುದು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260806-51-1138759652