ಷೇರುಪೇಟೆ: ಸೆನ್ಸೆಕ್ಸ್ 455 ಅಂಶ ಇಳಿಕೆ
ಮುಂಬೈ: ಬ್ಯಾಂಕ್ಗಳು, ಹಣಕಾಸು ಸಂಸ್ಥೆಗಳ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದರಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಶುಕ್ರವಾರದ ವಹಿವಾಟಿನಲ್ಲಿ ಇಳಿಕೆ ಕಂಡಿವೆ.ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 455 ಅಂಶ ಇಳಿಕೆಯಾಗಿ, 78,499ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 65 ಅಂಶ ಕಡಿಮೆಯಾಗಿ, 24,570ಕ್ಕೆ ಕೊನೆಗೊಂಡಿದೆ.ಬಜಾ

ಮುಂಬೈ: ಬ್ಯಾಂಕ್ಗಳು, ಹಣಕಾಸು ಸಂಸ್ಥೆಗಳ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದರಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಶುಕ್ರವಾರದ ವಹಿವಾಟಿನಲ್ಲಿ ಇಳಿಕೆ ಕಂಡಿವೆ.ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 455 ಅಂಶ ಇಳಿಕೆಯಾಗಿ, 78,499ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 65 ಅಂಶ ಕಡಿಮೆಯಾಗಿ, 24,570ಕ್ಕೆ ಕೊನೆಗೊಂಡಿದೆ.ಬಜಾಜ್ ಫೈನಾನ್ಸ್, ಬಜಾಜ್ ಫಿನ್ಸರ್ವ್, ಐಸಿಐಸಿಐ ಬ್ಯಾಂಕ್, ಟ್ರೆಂಟ್, ಎಕ್ಸಿಸ್ ಬ್ಯಾಂಕ್ ಮತ್ತು ಏಷ್ಯನ್ ಪೇಂಟ್ಸ್ನ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ. ಟಿಸಿಎಸ್, ಮಹೀಂದ್ರ ಆ್ಯಂಡ್ ಮಹೀಂದ್ರ, ಎಸ್ಬಿಐ ಮತ್ತು ಟೆಕ್ ಮಹೀಂದ್ರ ಷೇರಿನ ಬೆಲೆಯಲ್ಲಿ ಹೆಚ್ಚಳವಾಗಿದೆ.ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಪ್ರತಿ ಬ್ಯಾರಲ್ ದರವು 82.20 ಡಾಲರ್ ಇದೆ.ಏಷ್ಯಾದ ಮಾರುಕಟ್ಟೆಯಲ್ಲಿ ದಕ್ಷಿಣ ಕೊರಿಯಾ, ಜಪಾನ್ ನಕಾರಾತ್ಮಕ ವಹಿವಾಟಿನಲ್ಲಿ ಅಂತ್ಯಗೊಂಡಿದ್ದರೆ, ಶಾಂಘೈ ಮತ್ತು ಹಾಂಗ್ಕಾಂಗ್ ಮಾರುಕಟ್ಟೆಯು ಏರಿಕೆ ಆಗಿದೆ.
Read the complete story at Prajavani