ಜಂತರ್ ಮಂತರ್ನಲ್ಲಿ ಪ್ರತಿಭಟನೆ ಬಂದ್ ಮಾಡಿ – ಕೇಂದ್ರಕ್ಕೆ ಹೈಕೋರ್ಟ್ ಸಲಹೆ
– ಪ್ರತಿಭಟನೆ ಹೆಸರಿನಲ್ಲಿ ನಗರದ ಜನರನ್ನು ಒತ್ತೆಯಾಳಾಗಿ ಇಡಬಾರದು ನವದೆಹಲಿ: ನಗರದ ಮಧ್ಯಭಾಗದಲ್ಲಿರುವ ಜಂತರ್ ಮಂತರ್(Jantar Mantar) ಪ್ರದೇಶವನ್ನು ಪ್ರತಿಭಟನಾ ಸ್ಥಳವಾಗಿ ಬಳಸುವುದನ್ನು ಸಂಪೂರ್ಣವಾಗಿ ಮುಚ್ಚುವ ಬಗ್ಗೆ ಏಕೆ ಪರಿಶೀಲಿಸುತ್ತಿಲ್ಲ ಎಂದು ದೆಹಲಿ ಹೈಕೋರ್ಟ್ (Delhi High Court) ಶುಕ್ರವಾರ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ಇಂತಹ ಪ್ರತಿಭಟನೆಗಳಿ

– ಪ್ರತಿಭಟನೆ ಹೆಸರಿನಲ್ಲಿ ನಗರದ ಜನರನ್ನು ಒತ್ತೆಯಾಳಾಗಿ ಇಡಬಾರದು ನವದೆಹಲಿ: ನಗರದ ಮಧ್ಯಭಾಗದಲ್ಲಿರುವ ಜಂತರ್ ಮಂತರ್(Jantar Mantar) ಪ್ರದೇಶವನ್ನು ಪ್ರತಿಭಟನಾ ಸ್ಥಳವಾಗಿ ಬಳಸುವುದನ್ನು ಸಂಪೂರ್ಣವಾಗಿ ಮುಚ್ಚುವ ಬಗ್ಗೆ ಏಕೆ ಪರಿಶೀಲಿಸುತ್ತಿಲ್ಲ ಎಂದು ದೆಹಲಿ ಹೈಕೋರ್ಟ್ (Delhi High Court) ಶುಕ್ರವಾರ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ. ಇಂತಹ ಪ್ರತಿಭಟನೆಗಳಿಂದ ನಗರದ ಜನಜೀವನವನ್ನು ವಿನಾಕಾರಣ ಒತ್ತೆಯಾಳಾಗಿ ಇಡಬಾರದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಮಹಾಜನ್ ಅವರು, “ನನ್ನ ಪ್ರಕಾರ ಇಂತಹ ಪ್ರತಿಭಟನೆಗಳು (Protest) ನಗರದ ಒಳಗೆ ನಡೆಯಬಾರದು. ಆದರೆ ಇದು ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದ್ದು. ಇಂತಹ ಪ್ರತಿಭಟನೆಗಳಿಂದ ಇಡೀ ನಗರವನ್ನು ವಿನಾಕಾರಣ ಒತ್ತೆಯಾಳಾಗಿ ಇಡುವುದು ಎಷ್ಟು ಸರಿ?” ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರನ್ನು ಪ್ರಶ್ನಿಸಿದರು. ಅಂಬುಲೆನ್ಸ್ ಸಂಚಾರ ಸೇರಿದಂತೆ ನಗರದ ದೈನಂದಿನ ಚಟುವಟಿಕೆಗಳಿಗೆ ಪ್ರತಿಭಟನೆಗಳಿಂದ ತೊಂದರೆಯಾಗುತ್ತದೆ ಎಂದು ತಿಳಿಸಿದ ನ್ಯಾಯಮೂರ್ತಿಗಳು, ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳವಾಗಿ ಬಂದ್ ಮಾಡುವಂತೆ ಸಲಹೆ ನೀಡಿದರು. ಇದನ್ನೂ ಓದಿ: ಅಸಾರಾಂಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ನಕಾರ – ಕೇರ್ ಟೇಕರ್ ನೇಮಕಕ್ಕೆ ಒಪ್ಪಿಗೆ ಆಲ್ ಇಂಡಿಯಾ ದಲಿತ ಕ್ರಿಶ್ಚಿಯನ್ ರೈಟ್ಸ್ ಪ್ರೊಟೆಕ್ಷನ್ ಕಮಿಟಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂಜಯ್ ಘೋಷ್, ನಾವು ಕೇವಲ 75 ಜನರಷ್ಟೇ ಸೇರುವುದಾಗಿ ಜುಲೈನಲ್ಲಿ ಸಲ್ಲಿಸಿದ್ದ ಅರ್ಜಿಗೆ ದೆಹಲಿ ಪೊಲೀಸರು ಈವರೆಗೆ ಯಾವುದೇ ಅನುಮತಿಯನ್ನೂ ನೀಡಿಲ್ಲ, ಅರ್ಜಿಯನ್ನು ತಿರಸ್ಕರಿಸಲೂ ಇಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಅಲ್ಲದೆ, ಶಾಹೀನ್ ಬಾಗ್ ಪ್ರಕರಣದ ತೀರ್ಪನ್ನು ಉಲ್ಲೇಖಿಸಿ ಶಾಂತಿಯುತ ಪ್ರತಿಭಟನೆ ನಡೆಸುವುದು ಸಂವಿಧಾನಬದ್ಧ ಹಕ್ಕು ಎಂದರು. ಎಎಸ್ಜಿ ಚೇತನ್ ಶರ್ಮಾ ಪ್ರತಿಕ್ರಿಯಿಸಿ, ಜಂತರ್ ಮಂತರ್ ಪ್ರದೇಶದಲ್ಲಿ ಸಿಆರ್ಪಿಸಿ ಸೆಕ್ಷನ್ 144 ಜಾರಿಯಲ್ಲಿದೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಹತ್ತಿರವಿರುವುದರಿಂದ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರತಿಭಟನೆಗೆ 75 ಜನರು ಎಂದು ಹೇಳಿ 75 ಸಾವಿರ ಜನರು ಸೇರಿದರೆ ಪರಿಸ್ಥಿತಿ ನಿಭಾಯಿಸುವುದು ಕಷ್ಟ. ಜಂತರ್ ಮಂತರ್ ಪ್ರತಿಭಟನಾ ಸ್ಥಳವಾಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬ ವಿಚಾರ ಈಗಾಗಲೇ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ ಎಂದು ತಿಳಿಸಿದರು. ಎರಡೂ ಕಡೆಯ ವಾದ ಆಲಿಸಿದ ಹೈಕೋರ್ಟ್, ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಆಗಸ್ಟ್ 8ರೊಳಗಾಗಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಅರ್ಜಿಯನ್ನು ವಿಲೇವಾರಿಗೊಳಿಸಿದೆ.