ಸಿದ್ದು ಪೂರ್ಣಚಂದ್ರ ನಿರ್ದೇಶನದ ‘ಬ್ರಹ್ಮಕಮಲ’ ಟ್ರೇಲರ್ ಬಿಡುಗಡೆ
ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವ ಸೇರಿದಂತೆ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡ ಸಿದ್ದು ಪೂರ್ಣಚಂದ್ರ ನಿರ್ದೇಶನದ ‘ಬ್ರಹ್ಮ ಕಮಲ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.ಈ ಹಿಂದೆ ‘ದಾರಿ ಯಾವುದಯ್ಯ ವೈಕುಂಠಕೆ’ ಚಿತ್ರ ನಿರ್ದೇಶಿಸಿದ್ದ ಸಿದ್ದು ಪೂರ್ಣಚಂದ್ರ ಭಿನ್ನವಾದ ಕಥಾವಸ್ತುವಿನ ಮೂಲಕ ಗಮನಸೆಳೆದಿದ್ದರು. ಸಿನಿಮಾ ಪೂರ್ಣಚಂದ್ರ ಫಿಲಂಸ್ ಬ್ಯ

ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವ ಸೇರಿದಂತೆ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡ ಸಿದ್ದು ಪೂರ್ಣಚಂದ್ರ ನಿರ್ದೇಶನದ ‘ಬ್ರಹ್ಮ ಕಮಲ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.ಈ ಹಿಂದೆ ‘ದಾರಿ ಯಾವುದಯ್ಯ ವೈಕುಂಠಕೆ’ ಚಿತ್ರ ನಿರ್ದೇಶಿಸಿದ್ದ ಸಿದ್ದು ಪೂರ್ಣಚಂದ್ರ ಭಿನ್ನವಾದ ಕಥಾವಸ್ತುವಿನ ಮೂಲಕ ಗಮನಸೆಳೆದಿದ್ದರು. ಸಿನಿಮಾ ಪೂರ್ಣಚಂದ್ರ ಫಿಲಂಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿದೆ. ಶೀಘ್ರದಲ್ಲೇ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ.ಅದ್ವಿತಿ ಶೆಟ್ಟಿ, ಋತು ಚೈತ್ರ, ಲೋಕೇಂದ್ರ ಸೂರ್ಯ, ಬಲ ರಾಜವಾಡಿ, ಮಮತಾ ರಾಹುತ್, ಪ್ರಮೀಳಾ ಸುಬ್ರಮಣ್ಯ ಮುಂತಾದವರು ತಾರಾಬಳಗದಲ್ಲಿದ್ದಾರೆ. ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260807-51-958008282
Read the complete story at Prajavani