ಮೈಸೂರಿನಲ್ಲಿ ನೂತನ ಆಂಬುಲೆನ್ಸ್ ಸೇವೆಗೆ ಸಮರ್ಪಣೆ
ಮೈಸೂರು: ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ತುರ್ತು ಚಿಕಿತ್ಸಾ ಸೇವೆಯನ್ನು ಜನರಿಗೆ ಶೀಘ್ರವಾಗಿ ತಲುಪಿಸುವ ಉದ್ದೇಶದಿಂದ ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ 8 ನೂತನ ಆಂಬುಲೆನ್ಸ್ಗಳನ್ನು ಶುಕ್ರವಾರ ಸೇವೆಗೆ ಸಮರ್ಪಿಸಲಾಯಿತು.ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹಸಿರುನಿಶಾನೆ ತೋರಿದರು.ಬಳಿಕ ಮಾತನಾಡಿ, ‘ಸಾರ್ವಜನಿಕರಿಗೆ ಗುಣಮಟ್ಟದ

ಮೈಸೂರು: ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ತುರ್ತು ಚಿಕಿತ್ಸಾ ಸೇವೆಯನ್ನು ಜನರಿಗೆ ಶೀಘ್ರವಾಗಿ ತಲುಪಿಸುವ ಉದ್ದೇಶದಿಂದ ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ 8 ನೂತನ ಆಂಬುಲೆನ್ಸ್ಗಳನ್ನು ಶುಕ್ರವಾರ ಸೇವೆಗೆ ಸಮರ್ಪಿಸಲಾಯಿತು.ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹಸಿರುನಿಶಾನೆ ತೋರಿದರು.ಬಳಿಕ ಮಾತನಾಡಿ, ‘ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸಮಯೋಚಿತ ಆರೋಗ್ಯ ಸೇವೆ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಆಂಬುಲೆನ್ಸ್ ಸೇವೆಯ ವಿಸ್ತರಣೆಯಿಂದ ತುರ್ತು ಸಂದರ್ಭಗಳಲ್ಲಿ ಜೀವ ರಕ್ಷಣೆ ಕಾರ್ಯ ಇನ್ನಷ್ಟು ಪರಿಣಾಮಕಾರಿ ಆಗಲಿದೆ’ ಎಂದು ತಿಳಿಸಿದರು.ಕೆ.ಆರ್. ನಗರದ ಶಾಸಕ ಡಿ. ರವಿಶಂಕರ್, ಕಾಂಗ್ರೆಸ್ ಮುಖಂಡ ಎಚ್.ಪಿ. ಮಂಜುನಾಥ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಪಾಲ್ಗೊಂಡಿದ್ದರು.
Read the complete story at Prajavani