ಮೈಸೂರು | ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಜಾಗೃತಿ ಕಾರ್ಯಕ್ರಮ ಆ.9ರಂದು: ರಾಘವೇಂದ್ರ
ಮೈಸೂರು: ನರೆಡ್ಕೊ (ನ್ಯಾಷನಲ್ ರಿಯಲ್ ಎಸ್ಟೇಟ್ ಡೆವಲಪ್ಮೆಂಟ್ ಕೌನ್ಸಿಲ್) ಮೈಸೂರು ಚಾಪ್ಟರ್ ವತಿಯಿಂದ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಜಾಗೃತಿ ಕಾರ್ಯಕ್ರಮವನ್ನು ಆ.9ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಬನ್ನೂರು ರಸ್ತೆ ಸಮೀಪದ ದೇವೇಗೌಡ ವೃತ್ತದ ಬಳಿಯ ಎಂಪ್ರೊ ಹೋಟೆಲ್ನಲ್ಲಿ ಹಮ್ಮಿಕೊಳ್ಳಲಾಗಿದೆ.‘ವಿವಿಧ ಸಂಘ– ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದೆ. ಶಾಸಕರಾದ

ಮೈಸೂರು: ನರೆಡ್ಕೊ (ನ್ಯಾಷನಲ್ ರಿಯಲ್ ಎಸ್ಟೇಟ್ ಡೆವಲಪ್ಮೆಂಟ್ ಕೌನ್ಸಿಲ್) ಮೈಸೂರು ಚಾಪ್ಟರ್ ವತಿಯಿಂದ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಜಾಗೃತಿ ಕಾರ್ಯಕ್ರಮವನ್ನು ಆ.9ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಬನ್ನೂರು ರಸ್ತೆ ಸಮೀಪದ ದೇವೇಗೌಡ ವೃತ್ತದ ಬಳಿಯ ಎಂಪ್ರೊ ಹೋಟೆಲ್ನಲ್ಲಿ ಹಮ್ಮಿಕೊಳ್ಳಲಾಗಿದೆ.‘ವಿವಿಧ ಸಂಘ– ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದೆ. ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ರಮೇಶ್ ಬಂಡಿಸಿದ್ದೇಗೌಡ, ಕೆ.ಹರೀಶ್ಗೌಡ, ಟಿ.ಎಸ್. ಶ್ರೀವತ್ಸ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಜಿಲ್ಲಾ ಕಾರ್ಮಿಕ ಅಧಿಕಾರಿ ಚೇತನ್ಕುಮಾರ್ ಮಾಹಿತಿ ನೀಡುವರು’ ಎಂದು ಚಾಪ್ಟರ್ ಅಧ್ಯಕ್ಷ ರಾಘವೇಂದ್ರ ಪ್ರಸಾದ್ ಎಂ.ಡಿ. ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.‘ಕಾರ್ಮಿಕರ ಚೀಟಿಗೆ ನೋಂದಣಿ, ಉಚಿತ ವೈದ್ಯಕೀಯ ತಪಾಸಣೆ, ಉಚಿತ ವಿಮಾ ನೋಂದಣಿಯೂ ನಡೆಯಲಿದೆ’ ಎಂದು ಮಾಹಿತಿ ನೀಡಿದರು.
Read the complete story at Prajavani