ಬೆಂಗಳೂರು: ಸ್ಟಾರ್ ಹೋಟೆಲ್ಗಳಲ್ಲಿ ಆಹಾರ ಮಾದರಿ ಪರಿಶೀಲನೆ
ಬೆಂಗಳೂರು: ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಸ್ಟಾರ್ ಹೋಟೆಲ್ ಗಳಲ್ಲಿ ಆಹಾರ ಮಾದರಿಗಳ ಪರಿಶೀಲನೆ ಪ್ರಾರಂಭಿಸಿದ್ದಾರೆ.3 ಸ್ಟಾರ್ ಮತ್ತು 5 ಸ್ಟಾರ್ ಹೋಟೆಲ್ ಗಳಲ್ಲಿ ಆಹಾರದ ಗುಣಮಟ್ಟದ ಬಗ್ಗೆ ದೂರುಗಳು ಇಲಾಖೆಗೆ ಸಲ್ಲಿಕೆಯಾಗಿದ್ದವು. ಆದ್ದರಿಂದ ಈ ಪರಿಶೀಲನೆ ಕೈಗೊಳ್ಳಲಾಗಿದೆ. ಈ ಸಂಬಂಧ ವಿಶೇಷ ಅಭಿಯಾನ ಹಮ್ಮಿಕೊಂಡಿದ್ದು,

ಬೆಂಗಳೂರು: ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಸ್ಟಾರ್ ಹೋಟೆಲ್ ಗಳಲ್ಲಿ ಆಹಾರ ಮಾದರಿಗಳ ಪರಿಶೀಲನೆ ಪ್ರಾರಂಭಿಸಿದ್ದಾರೆ.3 ಸ್ಟಾರ್ ಮತ್ತು 5 ಸ್ಟಾರ್ ಹೋಟೆಲ್ ಗಳಲ್ಲಿ ಆಹಾರದ ಗುಣಮಟ್ಟದ ಬಗ್ಗೆ ದೂರುಗಳು ಇಲಾಖೆಗೆ ಸಲ್ಲಿಕೆಯಾಗಿದ್ದವು. ಆದ್ದರಿಂದ ಈ ಪರಿಶೀಲನೆ ಕೈಗೊಳ್ಳಲಾಗಿದೆ. ಈ ಸಂಬಂಧ ವಿಶೇಷ ಅಭಿಯಾನ ಹಮ್ಮಿಕೊಂಡಿದ್ದು, ಆಹಾರಗಳ ಮಾದರಿ ಪರಿಶೀಲನೆಗೆ ಜಿಲ್ಲಾವರು ತಂಡಗಳನ್ನು ರಚಿಸಲಾಗಿದೆ.ಅವಧಿ ಮೀರಿದ ಆಹಾರ ಉತ್ಪನ್ನಗಳ ಬಳಕೆ, ಕಳಪೆ ಗುಣಮಟ್ಟದ ಆಹಾರ ವಿತರಣೆ ಕಂಡುಬಂದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ಕ್ರಮ ಕೈಗೊಂಡು ವರದಿ ಸಲ್ಲಿಸಲು ಇಲಾಖೆ ಆಯುಕ್ತ ಶ್ರೀನಿವಾಸ ಸೂಚಿಸಿದ್ದಾರೆ. ಅಧಿಕಾರಿಗಳು ರಾಜ್ಯದ ವಿವಿಧೆಡೆ ಸ್ಟಾರ್ ಹೋಟೆಲ್ಗಳ ಮೇಲೆ ದಿಢೀರ್ ದಾಳಿ ನಡೆಸಿ, ಆಹಾರ ಮಾದರಿ ಸಂಗ್ರಹ ಕಾರ್ಯ ಪ್ರಾರಂಭಿಸಿದ್ದಾರೆ.
Read the complete story at Prajavani