ಜೆಪಿಎಸ್ಸಿ ಪ್ರಶ್ನೆಪತ್ರಿಕೆ ಸೋರಿಕೆ – ಜಾರ್ಖಂಡ್ ಸರ್ಕಾರದೊಂದಿಗೆ ಮಾತುಕತೆ ಸಕಾರಾತ್ಮಕ
– ʻನಮ್ಮ ಬೇಡಿಕೆ ಮಂಡಿಸಿದ್ದೇವೆ, ಆದ್ರೂ ಪ್ರತಿಭಟನೆ ಮುಂದುವರಿಯುತ್ತೆʼ ರಾಂಚಿ: ಜೆಪಿಎಸ್ಸಿ–ಜೆಎಸ್ಎಸ್ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಜಾರ್ಖಂಡ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿ ಪ್ರತಿನಿಧಿಗಳು ಶುಕ್ರವಾರ ಜಾರ್ಖಂಡ್ ಸರ್ಕಾರದ ನಿಯೋಗದೊಂದಿಗೆ ಮಾತುಕತೆ ನಡೆಸಿದರು. ಮಾತುಕತೆ ಬಳಿಕ ವಿದ್ಯಾರ್ಥಿ ಪ್ರತಿನಿಧಿಗಳು,

– ʻನಮ್ಮ ಬೇಡಿಕೆ ಮಂಡಿಸಿದ್ದೇವೆ, ಆದ್ರೂ ಪ್ರತಿಭಟನೆ ಮುಂದುವರಿಯುತ್ತೆʼ ರಾಂಚಿ: ಜೆಪಿಎಸ್ಸಿ–ಜೆಎಸ್ಎಸ್ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಜಾರ್ಖಂಡ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿ ಪ್ರತಿನಿಧಿಗಳು ಶುಕ್ರವಾರ ಜಾರ್ಖಂಡ್ ಸರ್ಕಾರದ ನಿಯೋಗದೊಂದಿಗೆ ಮಾತುಕತೆ ನಡೆಸಿದರು. ಮಾತುಕತೆ ಬಳಿಕ ವಿದ್ಯಾರ್ಥಿ ಪ್ರತಿನಿಧಿಗಳು, ತಮ್ಮ ಎಲ್ಲಾ ಬೇಡಿಕೆಗಳನ್ನ ಸರ್ಕಾರದ ಮುಂದಿಟ್ಟಿದ್ದು, ಚರ್ಚೆ ಸಕಾರಾತ್ಮಕವಾಗಿತ್ತು ಎಂದು ತಿಳಿಸಿದ್ದಾರೆ. ಇನ್ನಷ್ಟು ಸುತ್ತಿನ ಮಾತುಕತೆ ನಡೆಯಲಿದ್ದು, ಅಲ್ಲಿಯವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. #WATCH | JPSC-JSSC aspirants’ protest in Ranchi | After meeting with the State Govt delegation, student leader Ravindra Paswan says, “This was our first meeting. It felt very positive. Sitting with everyone felt like family. It was a really positive meeting. We are confident that… pic.twitter.com/VuJXqPXQIJ — ANI (@ANI) August 7, 2026 ಸರ್ಕಾರದ ಪರವಾಗಿ ಸಚಿವ ಸುದಿವ್ಯ ಕುಮಾರ್ ಸೋನು ಮಾತನಾಡಿ, ವಿದ್ಯಾರ್ಥಿಗಳ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು. ಪ್ರತಿಭಟನಾಕಾರರು 14ನೇ ಜೆಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯನ್ನು ರದ್ದುಗೊಳಿಸುವುದು ಹಾಗೂ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಸಿಬಿಐ ಅಥವಾ ರಾಜ್ಯದ ಹೊರಗಿನ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿಯಿಂದ ಸ್ವತಂತ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. #WATCH | JPSC-JSSC aspirants’ protest in Ranchi | After meeting with the State Govt delegation, one of the protesting aspirants, Rajesh Prasad says, “…A 10-member delegation went for a meeting with the 4 Ministers. The discussion began in a cordial atmosphere, like speaking… pic.twitter.com/LRCO6Ti1Bh — ANI (@ANI) August 7, 2026 ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆ 14ನೇ ದಿನಕ್ಕೆ ಕಾಲಿಟ್ಟಿದ್ದು, ಆರು ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ.