2029ಕ್ಕೆ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡೋಣ: ಸಚಿವ ನರೇಂದ್ರಸ್ವಾಮಿ
ಮಂಡ್ಯ: ಸಿದ್ದರಾಮಯ್ಯ ನೇತೃತ್ವದಲ್ಲಿ ಒಳ್ಳೆಯ ಆಡಳಿತ ನೀಡಿದ್ದೇವೆ. ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿದ್ದೇವೆ. ನೆಪಮಾತ್ರಕ್ಕೆ ನಾವು ಮಂತ್ರಿಗಳು. ನಿಮ್ಮಂತೆಯೇ ನಾವು ಕಾರ್ಯಕರ್ತರು. ನಾವೆಲ್ಲರೂ ಒಟ್ಟಿಗೆ ಶ್ರಮಿಸೋಣ. 2028ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರೋಣ. ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡಲು ಪಣ ತೊಡೋಣ ಎಂದು ಸಚಿವ

ಮಂಡ್ಯ: ಸಿದ್ದರಾಮಯ್ಯ ನೇತೃತ್ವದಲ್ಲಿ ಒಳ್ಳೆಯ ಆಡಳಿತ ನೀಡಿದ್ದೇವೆ. ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿದ್ದೇವೆ. ನೆಪಮಾತ್ರಕ್ಕೆ ನಾವು ಮಂತ್ರಿಗಳು. ನಿಮ್ಮಂತೆಯೇ ನಾವು ಕಾರ್ಯಕರ್ತರು. ನಾವೆಲ್ಲರೂ ಒಟ್ಟಿಗೆ ಶ್ರಮಿಸೋಣ. 2028ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರೋಣ. ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡಲು ಪಣ ತೊಡೋಣ ಎಂದು ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರು ಕಾರ್ಯಕರ್ತರನ್ನು ಹುರಿದುಂಬಿಸಿದರು. ನಗರದಲ್ಲಿ ನೂತನ ಸಚಿವರಿಗೆ ಶನಿವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಮತ್ತು ಸಾರ್ವಜನಿಕರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಈಗ ವೀರಾವೇಷದ ಮಾತುಗಳು ಬೇಡ. ಜಿಲ್ಲೆಯ ಅಭಿವೃದ್ಧಿ ಮಾಡುವುದು ನಮ್ಮ ಕೆಲಸ. ನಿಮ್ಮೆಲ್ಲರ ಪ್ರೀತಿಗೆ ನಾವು ಆಭಾರಿ ಎಂದು ಹೇಳಿದರು. ಸಭೆಯಲ್ಲಿದ್ದ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ಪಿ.ರವಿಕುಮಾರ್, ಕೆ.ಎಂ.ಉದಯ್ ಅವರು ಕೂಡ ದನಿಗೂಡಿಸಿ, ‘2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮತ್ತೆ ಬರಲಿದೆ. ಅದಕ್ಕಾಗಿ ಇಂದಿನಿಂದಲೇ ನಾವೆಲ್ಲರೂ ಶ್ರಮಿಸೋಣ’ ಎಂದು ಕರೆ ನೀಡಿದರು. ಸಚಿವರಾದ ಬಳಿಕ ಮೊದಲ ಬಾರಿಗೆ ಮಂಡ್ಯ ಜಿಲ್ಲೆಗೆ ಆಗಮಿಸಿದ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ಪಿಎಂ.ನರೇಂದ್ರಸ್ವಾಮಿ ಅವರಿಗೆ ಮದ್ದೂರಿನಿಂದ ಮಂಡ್ಯ ನಗರದವರೆಗೆ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಕಬ್ಬು, ಸೇಬು, ಮೂಸಂಬಿ, ಹೂವಿನ ಹಾರಗಳನ್ನು ಹಾಕಿ ಅಭಿನಂದಿಸಿದರು.ಮಂಡ್ಯಕ್ಕೆ ಕೃಷಿ ವಿವಿ ತರಲು ರಕ್ತ ಸುರಿಸಿದ್ದೇನೆ: ಸಚಿವ ಚಲುವರಾಯಸ್ವಾಮಿ