ನನ್ನನ್ನು ಬಿಜೆಪಿಗೆ ಮರಳಿ ಸೇರಿಸುವ ಪ್ರಯತ್ನ ನಡೆಯುತ್ತಿದೆ: ಈಶ್ವರಪ್ಪ
ಶಿವಮೊಗ್ಗ: ಬಿಜೆಪಿ (BJP) ಪಕ್ಷವನ್ನು ಬಿಟ್ಟು ಬೇರೆ ಯಾವ ಪಕ್ಷಕ್ಕೂ ಸೇರ್ಪಡೆಯಾಗುವುದಿಲ್ಲ ಎಂದು ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ (K. S. Eshwarappa) ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ನನ್ನನ್ನು ಮರಳಿ ಬಿಜೆಪಿಗೆ ಸೇರಿಸಬೇಕೆಂಬ ಪ್ರಯತ್ನ ನಡೆಯುತ್ತಿವೆ. ಬಿಜೆಪಿಯಲ್ಲಿನ ಗೊಂದಲಗಳು

ಶಿವಮೊಗ್ಗ: ಬಿಜೆಪಿ (BJP) ಪಕ್ಷವನ್ನು ಬಿಟ್ಟು ಬೇರೆ ಯಾವ ಪಕ್ಷಕ್ಕೂ ಸೇರ್ಪಡೆಯಾಗುವುದಿಲ್ಲ ಎಂದು ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ (K. S. Eshwarappa) ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ನನ್ನನ್ನು ಮರಳಿ ಬಿಜೆಪಿಗೆ ಸೇರಿಸಬೇಕೆಂಬ ಪ್ರಯತ್ನ ನಡೆಯುತ್ತಿವೆ. ಬಿಜೆಪಿಯಲ್ಲಿನ ಗೊಂದಲಗಳು ಸರಿಯಾದರೆ ಮಾತ್ರ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ. ಬಿಜೆಪಿ ನನ್ನ ಮಾತೃ ಪಕ್ಷವಾಗಿದೆ. ಆದರೆ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದರು. ನಾನು ಕೆಲವು ಬೇಡಿಕೆ ಮುಂದಿಟ್ಟಿದ್ದೇನೆ, ಆದರೆ ಅವು ಷರತ್ತಲ್ಲ. ಬಿಜೆಪಿ ಸೇರ್ಪಡೆಗೆ ಯಾವುದೇ ಷರತ್ತು ವಿಧಿಸುವುದಿಲ್ಲ. ಸಂಘಟನೆ ದೃಷ್ಟಿಯಿಂದ ಬಿಜೆಪಿಯಲ್ಲಿ ಕೆಲವು ಬದಲಾವಣೆಗಳು ಆಗಬೇಕಾಗಿದೆ. ಪಕ್ಷದ ದೃಷ್ಟಿಯಿಂದ ಅದು ಆದರೇ ಒಳ್ಳೆಯದು ಎಂದರು. ಹಿರಿಯರು ಕಟ್ಟಿದ ಕಾಂಗ್ರೆಸ್ ಪಕ್ಷ ಇಂದು ಬೀದಿಗೆ ಬಂದಿದೆ. 1885 ರಲ್ಲಿ ಎಲ್ಲಾ ರಾಷ್ಟ್ರಭಕ್ತರು ಸೇರಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದರು. ಇದರಲ್ಲಿ ಆರ್ಎಸ್ಎಸ್ನ ಹೆಡ್ಗೆವಾರ್, ಬಾಲ ಗಂಗಾಧರ ತಿಲಕ್ ಸೇರಿದಂತೆ ಹಲವರು ಕಟ್ಟಿದ್ದರು. ಇಂದು ಕಾಂಗ್ರೆಸ್ ಅಧಿಕಾರದಕ್ಕಾಗಿ ಪೂರ್ಣ ಕೆಳಮಟ್ಟಕ್ಕೆ ಇಳಿದು ಹೀನಾಯ ಸ್ಥಿತಿಗೆ ಬಂದಿದೆ. ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ಸ್ವಾರ್ಥವೇ ತುಂಬಿ ತುಳುತ್ತಿದೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಅಧಿಕಾರ ಸಿಗದೆ ಶಾಸಕರು ಅತೃಪ್ತರಾಗಿದ್ದಾರೆ. ಅವರ ಬೆಂಬಲಿಗರು ಸಹ ಮುಖ್ಯಮಂತ್ರಿ ವಿರುದ್ದ ಧಿಕ್ಕಾರ ಕೂಗುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಕೆಲವು ಶಾಸಕರಿಗೆ ಮಂತ್ರಿ ಸ್ಥಾನ ಕೊಡಿಸುವುದಾಗಿ ಭರವಸೆ ನೀಡಿದ್ದರು. ಸಚಿವ ಸ್ಥಾನ ಸಿಗದ ಬೇಳೂರು ಗೋಪಾಲಕೃಷ್ಣ ಅವರು ತಮಗೆ ಮಂತ್ರಿ ಸ್ಥಾನ ಸಿಗದಿರಲು ರಾಹುಲ್ ಗಾಂಧಿಯವರೇ ಕಾರಣ ಎಂದು ಹೇಳಿದ್ದಾರೆ. ಕಾಂಗ್ರೆಸ್ಗೆ ಈ ಪರಿಸ್ಥಿತಿ ಬರ ಬಾರದಿತ್ತು. ಇಂದು ಕಾಂಗ್ರೆಸ್ ರಾಜ್ಯದಲ್ಲಿ ಸಮಾಧಿಯಾಗಿದೆ. ಅತಿವೃಷ್ಟಿ, ಅನಾವೃಷಿಯಿಂದಾಗಿ ರಾಜ್ಯದಲ್ಲಿ ಜನರು ತತ್ತರಿಸಿದ್ದಾರೆ. ಅವರ ಗೋಳು ಕೇಳುವವರು ಯಾರು ಇಲ್ಲವಾಗಿದೆ ಎಂದು ವಾಗ್ದಾಳಿ ನಡೆಸಿದರು.