ದಲಿತ ಯುವಕನ ಹತ್ಯೆ: ಕ್ರಮಕ್ಕೆ ಆಗ್ರಹ
ಮಾನ್ವಿ: ದೇವದುರ್ಗ ತಾಲ್ಲೂಕಿನ ಹದ್ದಿನಹಾಳ ಗ್ರಾಮದ ದಲಿತ ಯುವಕ ಭೂಮಾನಂದ ಹತ್ಯೆಯಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಪ್ರಭುರಾಜ ಕೊಡ್ಲಿ ಮತ್ತು ಪದಾಧಿಕಾರಿಗಳು ಶನಿವಾರ ಪಟ್ಟಣಕ್ಕೆ ಆಗಮಿಸಿದ್ದ ಸಚಿವ ಡಾ.ಅಜಯ್ ಸಿಂಗ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಸರ್ಕಾರ ಮೃತ ಭೂಮಾನಂದನ ಕುಟುಂಬಕ್ಕೆ
ಮಾನ್ವಿ: ದೇವದುರ್ಗ ತಾಲ್ಲೂಕಿನ ಹದ್ದಿನಹಾಳ ಗ್ರಾಮದ ದಲಿತ ಯುವಕ ಭೂಮಾನಂದ ಹತ್ಯೆಯಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಪ್ರಭುರಾಜ ಕೊಡ್ಲಿ ಮತ್ತು ಪದಾಧಿಕಾರಿಗಳು ಶನಿವಾರ ಪಟ್ಟಣಕ್ಕೆ ಆಗಮಿಸಿದ್ದ ಸಚಿವ ಡಾ.ಅಜಯ್ ಸಿಂಗ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಸರ್ಕಾರ ಮೃತ ಭೂಮಾನಂದನ ಕುಟುಂಬಕ್ಕೆ ಸೂಕ್ತ ರಕ್ಷಣೆ, ಪರಿಹಾರ ಹಾಗೂ ಸರ್ಕಾರಿ ನೌಕರಿ ಒದಗಿಸಬೇಕು. ಜಿಲ್ಲೆಯಲ್ಲಿ ದಲಿತರ ಮೇಲೆ ನಡೆಯುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯವನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಡುವೆ ಶಾಂತಿ, ಸೌಹಾರ್ದ ಹಾಗೂ ಸಹಬಾಳ್ವೆ ಸಾಧ್ಯವಾಗಲು ಕಾನೂನು ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದರು.ಜಿಲ್ಲೆಯಲ್ಲಿ ದಲಿತರ ಕುಂದು ಕೊರತೆ ಸಭೆಗಳನ್ನು ಕಡ್ಡಾಯವಾಗಿ ಪರಿಪೂರ್ಣವಾಗಿ ನಡೆಸಬೇಕು. ದೌರ್ಜನ್ಯಗಳನ್ನು ತಡೆಯಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಬೇಕು. ಪರಿಶಿಷ್ಟ ಜಾತಿ ವಸತಿ ನಿಲಯಗಳಲ್ಲಿ ಆಹಾರ ಸರಬರಾಜು ಮಾಡದೇ ಹಣ ಪಾವತಿಸಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಉಪಸ್ಥಿತರಿದ್ದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260809-32-1453833297