ಸಕಾಲದಲ್ಲಿ ಸಾಲ ಮರುಪಾವತಿಸಿ
ಬೇಲೂರು: ರೈತರು ಬ್ಯಾಂಕ್ನಿಂದ ಪಡೆದ ಸಾಲವನ್ನು ನಿಗದಿತ ಅವಧಿಯೊಳಗೆ ಮರು ಪಾವತಿ ಮಾಡಿದರೆ ಮಾತ್ರ ಬ್ಯಾಂಕ್ನ ಆರ್ಥಿಕ ಸ್ಥಿತಿ ಸದೃಢವಾಗುತ್ತದೆ ಎಂದು ಬೇಲೂರು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಎಂ.ಡಿ.ದಿನೇಶ್ ಹೇಳಿದರು.ಈಚೆಗೆ ಆಯೋಜಿಸಿದ್ದ, ಬ್ಯಾಂಕಿನ ಸರ್ವಸದಸ್ಯರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. 2025-26ನೇ ಸಾಲಿನಲ್ಲಿ
ಬೇಲೂರು: ರೈತರು ಬ್ಯಾಂಕ್ನಿಂದ ಪಡೆದ ಸಾಲವನ್ನು ನಿಗದಿತ ಅವಧಿಯೊಳಗೆ ಮರು ಪಾವತಿ ಮಾಡಿದರೆ ಮಾತ್ರ ಬ್ಯಾಂಕ್ನ ಆರ್ಥಿಕ ಸ್ಥಿತಿ ಸದೃಢವಾಗುತ್ತದೆ ಎಂದು ಬೇಲೂರು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಎಂ.ಡಿ.ದಿನೇಶ್ ಹೇಳಿದರು.ಈಚೆಗೆ ಆಯೋಜಿಸಿದ್ದ, ಬ್ಯಾಂಕಿನ ಸರ್ವಸದಸ್ಯರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. 2025-26ನೇ ಸಾಲಿನಲ್ಲಿ ಬ್ಯಾಂಕ್ ₹49.46 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸಾಲ ವಸೂಲಾತಿಯಲ್ಲೂ ಉತ್ತಮ ಸಾಧನೆ ಮಾಡಿದೆ. ಈ ಸಾಧನೆಗೆ ರೈತರು, ನಿರ್ದೇಶಕರು ಹಾಗೂ ಬ್ಯಾಂಕ್ ಸಿಬ್ಬಂದಿ ಸಹ ಕಾರಣ ಎಂದರು.ಸರ್ಕಾರವು ರೈತರು, ಮಹಿಳೆಯರು ಹಾಗೂ ಸಾರ್ವಜನಿಕರ ಅಭಿವೃದ್ಧಿಗಾಗಿ ಕೆಲ ಯೋಜನೆಗಳಲ್ಲಿ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ನೀಡುತ್ತಿದೆ. ಈ ಯೋಜನೆಗಳ ಯಶಸ್ಸಿಗೆ ಫಲಾನುಭವಿಗಳು ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡುವುದು ಅತ್ಯಗತ್ಯ. ಬ್ಯಾಂಕಿನ ಉತ್ತಮ ಕಾರ್ಯನಿರ್ವಹಣೆ ಪರಿಗಣಿಸಿ ರಾಜ್ಯ ಮಟ್ಟದಲ್ಲಿ ಮೊದಲ ಬಾರಿಗೆ ₹7 ಕೋಟಿಗೂ ಹೆಚ್ಚುವರಿ ಸಾಲ ಮಂಜೂರಾಗಿದ್ದು ಬ್ಯಾಂಕ್ಗೆ ಸಂದ ಗೌರವವಾಗಿದೆ ಎಂದರು.ಬ್ಯಾಂಕ್ ನಿರ್ದೇಶಕ ಗ್ರಾನೈಟ್ ರಾಜಶೇಖರ್,ಬ್ಯಾಂಕಿನ ಮಾಜಿ ಅಧ್ಯಕ್ಷರನ್ನು ಸನ್ಮಾನಿಸಲಾಯಿತು. ಬ್ಯಾಂಕ್ ನಿರ್ದೇಶಕರಾದ ಮೊಗಪ್ಪಗೌಡ, ಹಿರಿಯಣ್ಣಗೌಡ, ವಸಂತಕುಮಾರ್, ಶಿವಶಂಕರ್, ಶ್ರೀನಿವಾಸ್, ರಮೇಶ್, ರಾಜಶೇಖರ್, ಜಯಶಂಕರ್, ಗಂಗಮ್ಮ, ಕಾತ್ಯಾಯಿನಿ, ನಿಂಗರಾಜು ಇದ್ದರು.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260809-36-950591538