ಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಸಾಯಿ ಸುದರ್ಶನ್ ಹೊರಕ್ಕೆ: ಸರ್ಫರಾಜ್ಗೆ ಸ್ಥಾನ
ನವದೆಹಲಿ: ಆಗಸ್ಟ್ 15ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಆರಂಭಿಕ ಬ್ಯಾಟರ್ ಸಾಯಿ ಸುದರ್ಶನ್ ಹೊರಗುಳಿದಿದ್ದು, ಮುಂಬೈ ಬ್ಯಾಟರ್ ಸರ್ಫರಾಜ್ ಖಾನ್ಗೆ ಅವಕಾಶ ನೀಡಲಾಗಿದೆ.ಕಳೆದ ತಿಂಗಳ 'ಇಂಡಿಯಾ ಎ' ಪ್ರವಾಸದ ವೇಳೆ ಎಡಗೈ ಆಟಗಾರ ಸಾಯಿ ಸುದರ್ಶನ್ ಕಾಲಿನ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಸದ್ಯ, ಬೆಂಗಳೂರಿನ ಬಿಸಿಸಿಐ ಶ್ರೇಷ್ಠತಾ ಕೇಂದ್ರದಲ್ಲ

ನವದೆಹಲಿ: ಆಗಸ್ಟ್ 15ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಆರಂಭಿಕ ಬ್ಯಾಟರ್ ಸಾಯಿ ಸುದರ್ಶನ್ ಹೊರಗುಳಿದಿದ್ದು, ಮುಂಬೈ ಬ್ಯಾಟರ್ ಸರ್ಫರಾಜ್ ಖಾನ್ಗೆ ಅವಕಾಶ ನೀಡಲಾಗಿದೆ.ಕಳೆದ ತಿಂಗಳ 'ಇಂಡಿಯಾ ಎ' ಪ್ರವಾಸದ ವೇಳೆ ಎಡಗೈ ಆಟಗಾರ ಸಾಯಿ ಸುದರ್ಶನ್ ಕಾಲಿನ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಸದ್ಯ, ಬೆಂಗಳೂರಿನ ಬಿಸಿಸಿಐ ಶ್ರೇಷ್ಠತಾ ಕೇಂದ್ರದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.ಸುದರ್ಶನ್ ಅವರ ಚೇತರಿಕೆಯಲ್ಲಿ ಗಮನಾರ್ಹ ಪ್ರಗತಿ ಕಂಡುಬಂದಿದೆ. ವೈದ್ಯಕೀಯ ತಂಡವು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಬಿಸಿಸಿಐ ತಿಳಿಸಿದೆ.ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಸಾಯಿ ಸುದರ್ಶನ್ ಅವರ ಬದಲಿಗೆ ಸರ್ಫರಾಜ್ ಖಾನ್ ಅವರನ್ನು ಪುರುಷರ ಆಯ್ಕೆ ಸಮಿತಿಯು ಆಯ್ಕೆ ಮಾಡಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.15ರಂದು ಮೊದಲ ಟೆಸ್ಟ್ ಆಡಲು ಭಾರತ ತಂಡವು ಗಾಲೆಗೆ ತೆರಳಲಿದ್ದು, ಅದಕ್ಕೂ ಮುನ್ನವೇ ಸರ್ಫರಾಜ್ ಕೊಲಂಬೊದಲ್ಲಿ ತಂಡ ಸೇರಿಕೊಳ್ಳಲಿದ್ದಾರೆ ಎಂದು ಅದು ತಿಳಿಸಿದೆ.28 ವರ್ಷದ ಸರ್ಫರಾಜ್ ಖಾನ್ ಭಾರತದ ಪರ 6 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಕೊನೆಯ ಬಾರಿಗೆ 2024ರಲ್ಲಿ ಮುಂಬೈನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡಿದ್ದರು.ಶ್ರೀಲಂಕಾ ಸರಣಿಗೆ ಭಾರತ ತಂಡಶುಭಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ (ವಿಕೆಟ್ ಕೀಪರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮಾನವ್ ಸುತಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಗುರ್ನೂರ್ ಬ್ರಾರ್, ದೇವದತ್ತ ಪಡಿಕ್ಕಲ್. ಸರಾಂಶ್ ಜೈನ್, ಅಕಿಬ್ ನಬಿ, ಸರ್ಫರಾಜ್ ಖಾನ್