ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ – JPSC ಪರೀಕ್ಷೆ ರದ್ದುಪಡಿಸಲು ಸಿದ್ಧತೆ
– CBI ತನಿಖೆ ವಿಚಾರದಲ್ಲಿ ಇನ್ನೂ ಬಿಕ್ಕಟ್ಟು ನವದೆಹಲಿ: ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ 16 ದಿನಗಳ ಸುದೀರ್ಘ ಪ್ರತಿಭಟನೆಯ ಬಳಿಕ ಜಾರ್ಖಂಡ್ ಪಬ್ಲಿಕ್ ಸರ್ವಿಸ್ ಕಮಿಷನ್ (JPSC) ಪ್ರಾಥಮಿಕ ಪರೀಕ್ಷೆಯನ್ನ ರದ್ದುಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ಬ್ಯಾಕ್ಲಾಗ್ ಪ್ರಶ್ನೆಪತ್ರಿಕೆಗಳ

– CBI ತನಿಖೆ ವಿಚಾರದಲ್ಲಿ ಇನ್ನೂ ಬಿಕ್ಕಟ್ಟು ನವದೆಹಲಿ: ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ 16 ದಿನಗಳ ಸುದೀರ್ಘ ಪ್ರತಿಭಟನೆಯ ಬಳಿಕ ಜಾರ್ಖಂಡ್ ಪಬ್ಲಿಕ್ ಸರ್ವಿಸ್ ಕಮಿಷನ್ (JPSC) ಪ್ರಾಥಮಿಕ ಪರೀಕ್ಷೆಯನ್ನ ರದ್ದುಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ಬ್ಯಾಕ್ಲಾಗ್ ಪ್ರಶ್ನೆಪತ್ರಿಕೆಗಳ ಕುರಿತು CID ಮತ್ತು ED ತನಿಖೆಗೆ ಆದೇಶಿಸಲು ಕೂಡ ಸರ್ಕಾರ ಸಿದ್ಧವಿದೆ ಎನ್ನಲಾಗಿದೆ. ವಿದ್ಯಾರ್ಥಿಗಳ ಬಹುತೇಕ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆದರೆ ಪರೀಕ್ಷಾ ಅಕ್ರಮಗಳ ಕುರಿತು CBI ತನಿಖೆ ನಡೆಸಬೇಕು ಎಂಬ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯ ವಿಚಾರದಲ್ಲಿ ಇನ್ನೂ ಒಮ್ಮತ ಮೂಡಿಲ್ಲ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ, ಅಭಯ್ ತಿವಾರಿ ಅವರು ಹಾಜರಾದ ಎಲ್ಲಾ ಪರೀಕ್ಷೆಗಳನ್ನ ರದ್ದುಪಡಿಸಲು ರಾಜ್ಯ ಸರ್ಕಾರ ಸಿದ್ಧವಿಲ್ಲ ಎಂದು ತಿಳಿಸಿದೆ. ಪರೀಕ್ಷಾ ಅಕ್ರಮಗಳ ಆರೋಪ ಎದುರಿಸುತ್ತಿರುವವರ ಪೈಕಿ ತಿವಾರಿ ಕೂಡ ಒಬ್ಬರಾಗಿದ್ದು, ಕಳೆದ 13 ವರ್ಷಗಳಲ್ಲಿ ಅವರು 12 ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ವರದಿಯಾಗಿದೆ. ಈ ಎಲ್ಲ ವಿಚಾರಗಳನ್ನ ರಾಜ್ಯ ಸರ್ಕಾರ ಪ್ರಮುಖ ವಿದ್ಯಾರ್ಥಿ ಸಂಘಟನೆಗೆ ತಿಳಿಸಿದ್ದು, ಅವರ ಹಲವು ಬೇಡಿಕೆಗಳನ್ನು ಒಪ್ಪಿಕೊಂಡಿದೆ. ಅಲ್ಲದೇ, 90 ದಿನಗಳೊಳಗೆ ಆರೋಪಪಟ್ಟಿ (Chargesheet) ಸಲ್ಲಿಸಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಹೇಮಂತ್ ಸೊರೆನ್ ಹೇಳಿದ್ದೇನು? JPSC ಪರೀಕ್ಷಾ ಅಕ್ರಮಗಳ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಪ್ರತಿಕ್ರಿಯಿಸಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ನ್ಯಾಯ ದೊರೆಯಲಿದೆ ಮತ್ತು ಅಕ್ರಮಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರಲ್ಲದೇ, ಸತ್ಯ ಮತ್ತು ಸುಳ್ಳನ್ನ ಬೆರೆಸಿ ಪ್ರತಿಪಕ್ಷಗಳು ಯುವಕರನ್ನು ದಾರಿ ತಪ್ಪಿಸುತ್ತಿವೆ ಎಂದು ಸೊರೆನ್ ಆರೋಪಿಸಿದ್ದಾರೆ. ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ 16ನೇ ದಿನಕ್ಕೆ ಕಾಲಿಟ್ಟಿದೆ. JPSC ಪರೀಕ್ಷೆಯನ್ನು ರದ್ದುಪಡಿಸಬೇಕು, ಪರೀಕ್ಷಾ ಅಕ್ರಮಗಳ ಕುರಿತು CBI ತನಿಖೆ ನಡೆಸಬೇಕು ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳು ಏಪ್ರಿಲ್ 19 ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ, JPSC ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪಗಳ ಕುರಿತು ವಿಚಾರಣೆ ನಡೆಸಲು CID ತಂಡವು ಆಯೋಗದ ಮೂವರು ಹಾಲಿ ಸದಸ್ಯರಿಗೆ ಸಮನ್ಸ್ ಜಾರಿ ಮಾಡಿದೆ. ಈ ಮೂವರು ಸದಸ್ಯರನ್ನು ವಿಚಾರಣೆ ನಡೆಸಲು CID ಸಿದ್ಧತೆ ನಡೆಸಿದೆ. ಪ್ರತಿಭಟನೆಯ ಕುರಿತು ಮಾತನಾಡಿದ ಮುಖ್ಯಮಂತ್ರಿ ಹೇಮಂತ್ ಸೊರೆನ್, ಯುವಕರಿಗೆ ನ್ಯಾಯ ದೊರೆಯಲಿದೆ ಎಂದು ಪುನರುಚ್ಚರಿಸಿದ್ದಾರೆ. ನಮ್ಮ ಯುವಕರು ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ಹಾಗೂ ಹೋರಾಟ ನಡೆಸುತ್ತಿದ್ದಾರೆ. ನಮ್ಮ ಸರ್ಕಾರದ ಕ್ರಮಗಳಿಂದಲೇ ಅವರು ಮುಂದೆ ಬಂದು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಧೈರ್ಯ ಪಡೆದಿದ್ದಾರೆ. ಏಕೆಂದರೆ ನಾವು ಅಕ್ರಮಗಳನ್ನು ಬಹಿರಂಗಪಡಿಸಿದ್ದೇವೆ. ಯುವಕರಿಗೆ ನ್ಯಾಯ ದೊರೆಯಲಿದೆ. ಅಕ್ರಮಗಳಿಗೆ ಕಾರಣರಾದವರ ವಿರುದ್ಧ ಅತ್ಯಂತ ಕಠಿಣ ಶಿಕ್ಷೆ ವಿಧಿಸಲಾಗುವುದುʼ ಎಂದು ಸೊರೆನ್ ಸಾರ್ವಜನಿಕ ಸಭೆಯೊಂದರಲ್ಲಿ ಹೇಳಿದ್ದಾರೆ. ಈ ವಿಚಾರವನ್ನ ರಾಜಕೀಯ ದೃಷ್ಟಿಕೋನದಿಂದ ನೋಡಬೇಕಾದ ಅಗತ್ಯವಿಲ್ಲ ಮತ್ತು ಯಾವುದೇ ರಾಜಕೀಯ ಆಶ್ರಯವನ್ನ ಪಡೆಯುವ ಅಗತ್ಯವೂ ಇಲ್ಲ ಎಂದು ಅವರು ಹೇಳಿದ್ದಾರೆ. ಮುಖ್ಯಾಂಶಗಳು: * JPSC PT ಪರೀಕ್ಷೆ ರದ್ದುಪಡಿಸಲು ಮುಂದಾದ ಜಾರ್ಖಂಡ್ ಸರ್ಕಾರ * ವಿದ್ಯಾರ್ಥಿಗಳ ಹಲವು ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ * CBI ತನಿಖೆ ಬೇಡಿಕೆ ವಿಚಾರದಲ್ಲಿ ಇನ್ನೂ ಒಮ್ಮತವಿಲ್ಲ * CID ಮತ್ತು ED ತನಿಖೆಗೆ ಸರ್ಕಾರ ಸಿದ್ಧತೆ * 90 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸುವ ಭರವಸೆ * JPSCನ ಮೂವರು ಹಾಲಿ ಸದಸ್ಯರಿಗೆ CID ಸಮನ್ಸ್ * ವಿದ್ಯಾರ್ಥಿಗಳಿಗೆ ನ್ಯಾಯ ಸಿಗಲಿದೆ ಎಂದ ಸಿಎಂ ಹೇಮಂತ್ ಸೊರೆನ್