ಪೋಕ್ಸೊ ಪ್ರಕರಣ; ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಸಿರಿಗೆರೆ: ಬಾಲಕಿಯನ್ನು ಅಪಹರಿಸಿ ಬಾಲ್ಯ ವಿವಾಹವಾಗಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ವಸಂತ ಕುಮಾರ್ (27) ಎಂಬ ವ್ಯಕ್ತಿಗೆ ಜಿಲ್ಲಾ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್ ನ್ಯಾಯಾಲಯ 20 ವರ್ಷಗಳ ಕಠಿಣ ಸಜೆ, ₹10,000 ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.ಜೊತೆಗೆ ಆರೋಪಿಯು ನೊಂದ ಬಾಲಕಿಗೆ ಪರಿಹಾರವಾಗಿ ₹ 4 ಲಕ್ಷ ನೀಡಬೇಕೆಂದೂ ತೀರ
ಸಿರಿಗೆರೆ: ಬಾಲಕಿಯನ್ನು ಅಪಹರಿಸಿ ಬಾಲ್ಯ ವಿವಾಹವಾಗಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ವಸಂತ ಕುಮಾರ್ (27) ಎಂಬ ವ್ಯಕ್ತಿಗೆ ಜಿಲ್ಲಾ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್ ನ್ಯಾಯಾಲಯ 20 ವರ್ಷಗಳ ಕಠಿಣ ಸಜೆ, ₹10,000 ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.ಜೊತೆಗೆ ಆರೋಪಿಯು ನೊಂದ ಬಾಲಕಿಗೆ ಪರಿಹಾರವಾಗಿ ₹ 4 ಲಕ್ಷ ನೀಡಬೇಕೆಂದೂ ತೀರ್ಪಿನಲ್ಲಿ ಹೇಳಲಾಗಿದೆ. ಆರೋಪಿ ವಸಂತಕುಮಾರ್, 2020ರ ಜುಲೈನಲ್ಲಿ ಬಾಲಕಿಯನ್ನು ಪುಸಲಾಯಿಸಿ ಅಪಹರಿಸಿದ್ದ. ಪೋಕ್ಸೊ ಅಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಭರಮಸಾಗರದ ಪೊಲೀಸ್ ಇನ್ಸ್ಪೆಕ್ಟರ್ ಪಿ. ಪ್ರಸಾದ್ ವಿಚಾರಣೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶ ಗಂಗಾಧರ ಚನ್ನಬಸಪ್ಪ ಹಡಪದ ಅವರು ಶುಕ್ರವಾರ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಎಚ್.ಆರ್. ಜಗದೀಶ್ ವಾದ ಮಂಡಿಸಿದ್ದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಕುದೂರು ಠಾಣೆ ಇನ್ಸ್ಪೆಕ್ಟರ್ ಚಂದ್ರಶೇಖರ್ ಮಾರ್ಗದರ್ಶನದಲ್ಲಿ ಕೋರ್ಟ್ ವಿಚಾರಣೆ ಸಂದರ್ಭದಲ್ಲಿ ಸಕಾಲಕ್ಕೆ ಸಾಕ್ಷಿದಾರರನ್ನು ಠಾಣೆಯ ಸಿಬ್ಬಂದಿ ಕೆ.ಶಿವಣ್ಣ ಹಾಜರುಪಡಿಸಿದ್ದರು. ತನಿಖಾ ಸಹಾಯಕರಾಗಿ ಸಿಬ್ಬಂದಿ ನಾಗರಾಜು ಕರ್ತವ್ಯ ನಿರ್ವಹಿಸಿದ್ದರು.ಲೋಕೇಶ್ಗುರುಪ್ರಸಾದ್