ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ರಾಹುಲ್, ಪ್ರಿಯಾಂಕಾ ವಿರುದ್ಧ ಎಫ್ಐಆರ್
ನವದೆಹಲಿ: ಪೊಲೀಸರ ಮೇಲೆ ಹಲ್ಲೆ ನಡೆಸಿದ ಹಾಗೂ ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ದೆಹಲಿಯಲ್ಲಿ ಗುರುವಾರ ಎಫ್ಐಆರ್ ದಾಖಲಾಗಿದೆ.ರಾಹುಲ್, ಪ್ರಿಯಾಂಕಾ ಮಾತ್ರವಲ್ಲದೆ ಬುಧವಾರ (ಅಕ್ಟೋಬರ್ 7ರಂದು) ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ನ

ನವದೆಹಲಿ: ಪೊಲೀಸರ ಮೇಲೆ ಹಲ್ಲೆ ನಡೆಸಿದ ಹಾಗೂ ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ದೆಹಲಿಯಲ್ಲಿ ಗುರುವಾರ ಎಫ್ಐಆರ್ ದಾಖಲಾಗಿದೆ.ರಾಹುಲ್, ಪ್ರಿಯಾಂಕಾ ಮಾತ್ರವಲ್ಲದೆ ಬುಧವಾರ (ಅಕ್ಟೋಬರ್ 7ರಂದು) ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ನ ಹಲವು ನಾಯಕರು ಮತ್ತು ಕಾರ್ಯಕರ್ತರ ಹೆಸರನ್ನೂ ಎಫ್ಐಆರ್ನಲ್ಲಿ ಸೇರಿಸಲಾಗಿದೆ. ಹಲ್ಲೆ ಆರೋಪಗಳು ಮತ್ತು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವರ ಪಾತ್ರದ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.ಸಂಸದರು, ರಾಜಕೀಯ ನಾಯಕರು ಸೇರಿದಂತೆ ಒಟ್ಟು 91 ಜನರನ್ನು ಬುಧವಾರ ವಶಕ್ಕೆ ಪಡೆಯಲಾಗಿತ್ತು ಎಂದು ತಿಳಿಸಿದ್ದಾರೆ.ದೇಶದಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಲೆದಂಡಕ್ಕೆ ಒತ್ತಾಯಿಸಿ ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಸಂಸದರು, ಕಾರ್ಯಕರ್ತರು ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದ್ದರು.ಜನಪಥದಿಂದ ಜಂತರ್ ಮಂತರ್ನತ್ತ ಬಸ್ನಲ್ಲಿ ಹೊರಟಿದ್ದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದರು. ಆಗ ಘರ್ಷಣೆಯಾಗಿತ್ತು.ಪ್ರಿಯಾಂಕಾ ಸೇರಿದಂತೆ ಹಲವು ಮಹಿಳಾ ನಾಯಕಿಯರು ಸಂವಿಧಾನದ ಪ್ರತಿ ಹಿಡಿದು ರಸ್ತೆಯಲ್ಲೇ ಮಲಗಿ ಪ್ರತಿಭಟಿಸಿದ್ದರು. ಅವರನ್ನೆಲ್ಲ ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದಿದ್ದರು.ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 6ರಂದು ನಡೆಸಿದ ಪ್ರತಿಭಟನೆ ಸಂದರ್ಭದಲ್ಲಿ ಅನುಮತಿ ಪಡೆಯದೆ ಆಕಾಶವಾಣಿ ಭವನ ಪ್ರವೇಶಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್, ಪ್ರಿಯಾಂಕಾ ಸೇರಿದಂತೆ ಹಲವರ ವಿರುದ್ಧ ಬುಧವಾರವೂ ಎಫ್ಐಆರ್ ದಾಖಲಾಗಿದೆ.ಅನುಮತಿ ಪಡೆಯದೆ ಆಕಾಶವಾಣಿ ಭವನ ಪ್ರವೇಶ: ರಾಹುಲ್, ಪ್ರಿಯಾಂಕಾ ವಿರುದ್ಧ ಎಫ್ಐಆರ್