ಪ್ರತಿ ಕ್ವಿಂಟಲ್ ಹೆಸರುಕಾಳಿಗೆ ₹ 8,780ರ ಬೆಂಬಲ ಬೆಲೆ; ಜಿಲ್ಲಾಧಿಕಾರಿ ಡಾ.ಆನಂದ
ವಿಜಯಪುರ: 2026ನೇ ಸಾಲಿನ ಮುಂಗಾರು ಹಂಗಾಮಿನ ಎಫ್ಎಕ್ಯೂ ಗುಣಮಟ್ಟದ ಹೆಸರುಕಾಳನ್ನು ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಲ್ಗೆ ₹ 8,780ರ ಬೆಂಬಲ ಬೆಲೆಯಲ್ಲಿ ಖರೀದಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ತಿಳಿಸಿದ್ದಾರೆ.ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ

ವಿಜಯಪುರ: 2026ನೇ ಸಾಲಿನ ಮುಂಗಾರು ಹಂಗಾಮಿನ ಎಫ್ಎಕ್ಯೂ ಗುಣಮಟ್ಟದ ಹೆಸರುಕಾಳನ್ನು ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಲ್ಗೆ ₹ 8,780ರ ಬೆಂಬಲ ಬೆಲೆಯಲ್ಲಿ ಖರೀದಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ತಿಳಿಸಿದ್ದಾರೆ.ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.ಪ್ರಸ್ತುತ ಮಾರುಕಟ್ಟೆಯಲ್ಲಿ ಹೆಸರುಕಾಳು ಪ್ರತಿ ಕ್ವಿಂಟಲ್ಗೆ ₹7,500ರಿಂದ ₹8,000ರ ವರೆಗೆ ಮಾರಾಟವಾಗುತ್ತಿದ್ದು, ರೈತರು ಬೆಂಬಲ ಬೆಲೆ ಯೋಜನೆಯ ಸೌಲಭ್ಯ ಪಡೆದುಕೊಳ್ಳುವಂತೆ ಜಿಲ್ಲಾಡಳಿತ ತಿಳಿಸಿದೆ.ಯೋಜನೆಯಡಿ ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಲ್ ಹಾಗೂ ಒಬ್ಬ ರೈತನಿಂದ ಗರಿಷ್ಠ 20 ಕ್ವಿಂಟಲ್ ಹೆಸರುಕಾಳನ್ನು ಖರೀದಿಸಲಾಗುವುದು. ರೈತರ ಅನುಕೂಲಕ್ಕಾಗಿ ವಿಜಯಪುರ, ಬಸವನಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ, ಇಂಡಿ, ಚಡಚಣ ಹಾಗೂ ಬಬಲೇಶ್ವರ ತಾಲ್ಲೂಕುಗಳಲ್ಲಿನ ಟಿಎಪಿಸಿಎಂಎಸ್ ಸಂಸ್ಥೆಗಳು ಮತ್ತು ಬಬಲೇಶ್ವರ ತಾಲ್ಲೂಕಿನ ಪಿಕೆಪಿಎಸ್ನಲ್ಲಿ ಖರೀದಿ ಕೇಂದ್ರಗಳನ್ನು ಗುರುತಿಸಲಾಗಿದೆ.ರೈತರ ನೋಂದಣಿ ಪ್ರಕ್ರಿಯೆಗೆ 80 ದಿನಗಳು ಹಾಗೂ ಹೆಸರುಕಾಳು ಖರೀದಿ ಪ್ರಕ್ರಿಯೆಗೆ 90 ದಿನಗಳ ಕಾಲಾವಕಾಶ ನಿಗದಿಪಡಿಸಲಾಗಿದೆ. ಖರೀದಿಸಿದ ಹೆಸರುಕಾಳಿನ ಮೊತ್ತವನ್ನು ರೈತರ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಮೂರು ದಿನಗಳೊಳಗಾಗಿ ನೇರವಾಗಿ ಜಮೆ ಮಾಡಲಾಗುವುದು. ಖರೀದಿ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ಆಯಾ ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಕಾರ್ಯದರ್ಶಿಗಳನ್ನು ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.ಹೆಸರುಕಾಳು ಖರೀದಿ ಹಾಗೂ ನೋಂದಣಿ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಎಸ್ಸಿಎಂಎಫ್ ಶಾಖಾ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ 8722687143 ಅನ್ನು ಸಂಪರ್ಕಿಸಬಹುದು ಎಂದು ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.261008-26-179982492