ಹೂಥಿ ದಾಳಿ: ರಿಯಾದ್ಗೆ ವಿಮಾನ ಹಾರಾಟ ರದ್ದು, ಭಾರತೀಯರಿಗೆ ಮುನ್ನೆಚ್ಚರಿಕೆ
ರಿಯಾದ್/ನವದೆಹಲಿ: ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ವಿಮಾನ ನಿಲ್ದಾಣದ ಮೇಲೆ ಯೆಮೆನ್ನ ಇರಾನ್ ಬೆಂಬಲಿತ ಹೂಥಿ ಬಂಡುಕೋರರು ದಾಳಿ ನಡೆಸಿರುವುದಾಗಿ ವರದಿಯಾಗಿರುವ ಬೆನ್ನಲ್ಲೇ ಭಾರತದ ಏರ್ ಇಂಡಿಯಾ ಸಂಸ್ಥೆಗಳು ರಿಯಾದ್ಗೆ ತೆರಳುವ ವಿಮಾನ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ. ರಿಯಾದ್ ಮತ್ತು ಅಭಾ ನಗರಗಳ ಎರಡು ವಿಮಾನ ನಿಲ್ದಾಣಗಳ ಮೇಲೆ ಹೂಥಿ ಬಂಡುಕೋರರು

ರಿಯಾದ್/ನವದೆಹಲಿ: ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ವಿಮಾನ ನಿಲ್ದಾಣದ ಮೇಲೆ ಯೆಮೆನ್ನ ಇರಾನ್ ಬೆಂಬಲಿತ ಹೂಥಿ ಬಂಡುಕೋರರು ದಾಳಿ ನಡೆಸಿರುವುದಾಗಿ ವರದಿಯಾಗಿರುವ ಬೆನ್ನಲ್ಲೇ ಭಾರತದ ಏರ್ ಇಂಡಿಯಾ ಸಂಸ್ಥೆಗಳು ರಿಯಾದ್ಗೆ ತೆರಳುವ ವಿಮಾನ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ. ರಿಯಾದ್ ಮತ್ತು ಅಭಾ ನಗರಗಳ ಎರಡು ವಿಮಾನ ನಿಲ್ದಾಣಗಳ ಮೇಲೆ ಹೂಥಿ ಬಂಡುಕೋರರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ ರಿಯಾದ್ಗೆ ಹೊರಟಿದ್ದ ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳು ಮಾರ್ಗಮಧ್ಯದಿಂದಲೇ ಭಾರತಕ್ಕೆ ವಾಪಸಾಗಿವೆ ಎಂದು ಮೂಲಗಳು ತಿಳಿಸಿವೆ. ಜರ್ಮನಿಯ ಲುಫ್ಥಾನ್ಸಾ ಗ್ರೂಪ್ ಸಹ ತನ್ನ ವಿಮಾನಯಾನವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಇತ್ತೀಚಿನ ಪ್ರಕ್ಷುಬ್ಧ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಮುನ್ನೆಚ್ಚರಿಕೆ ಕ್ರಮವಾಗಿ ಅಕ್ಟೋಬರ್ 10ರವರೆಗೆ ಸೌದಿ ರಾಜಧಾನಿಗೆ ತೆರಳುವ ಎಲ್ಲ ವಿಮಾನಗಳನ್ನು ರದ್ದುಪಡಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಮತ್ತೊಂದೆಡೆ ಅಕ್ಟೋಬರ್ 16ರವರೆಗೆ ರಿಯಾದ್ಗೆ ವಿಮಾನ ಸಂಚಾರವನ್ನು ಸ್ಥಗಿತಗೊಳಿಸುತ್ತಿರುವುದಾಗಿ ಲುಫ್ಥಾನ್ಸಾ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಭಾರತೀಯರಿಗೆ ಮುನ್ನೆಚ್ಚೆರಿಕೆ:ಯೆಮನ್ ಮೂಲದ ಹೂಥಿ ಬಂಡುಕೋರರು ಸೌದಿ ಅರೇಬಿಯಾದ ವಿಮಾನ ನಿಲ್ದಾಣಗಳನ್ನು ಗುರಿಯಾಗಿಸಿಕೊಂಡು ಸರಣಿ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಸೌದಿಯಲ್ಲಿರುವ ಭಾರತೀಯ ಪ್ರಜೆಗಳು ಎಚ್ಚರಿಕೆ ವಹಿಸಬೇಕು ಮತ್ತು ಅಗತ್ಯವಿದ್ದಲ್ಲಿ ಮನೆಗಳಲ್ಲೇ ಉಳಿಯಬೇಕು ಎಂದು ಭಾರತೀಯ ರಾಯಭಾರ ಕಚೇರಿ ಗುರುವಾರ ಸಲಹೆ ನೀಡಿದೆ. ಅಲ್ಲದೆ ಸ್ಥಳೀಯಾಡಳಿತ ನೀಡುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದೆ. ಭಾರತೀಯ ರಾಯಭಾರ ಕಚೇರಿಯು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಹೇಳಿದೆ. ಸೌದಿಯ ಎರಡು ವಿಮಾನ ನಿಲ್ದಾಣಗಳ ಮೇಲೆ ಯೆಮನ್ನ ಹೂಥಿ ಬಂಡುಕೋರು ದಾಳಿಹೂಥಿ ದಾಳಿ: ಸೌದಿ ಅರೇಬಿಯಾದಲ್ಲಿ ಸೇನೆ ನಿಯೋಜಿಸಲು ಪಾಕ್, ಟರ್ಕಿ ಸಮ್ಮತಿ