ಕಾಂಗ್ರೆಸ್ ಸಂಘಟನೆ & ಸರ್ಕಾರದ ನಡುವೆ ಸಮನ್ವಯ:ಬಿ.ಕೆ ಪ್ರಸ್ತಾವಕ್ಕೆ ಡಿ.ಕೆ ವಿರೋಧ
ನವದೆಹಲಿ: ಕಾಂಗ್ರೆಸ್ ಸಂಘಟನೆ ಮತ್ತು ಸರ್ಕಾರದ ನಡುವಿನ ಸಮನ್ವಯ ಸುಧಾರಿಸಲು ರಾಜಕೀಯ ವ್ಯವಹಾರಗಳ ಸಮಿತಿ ರಚಿಸುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಪ್ರಸ್ತಾವವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರೋಧಿಸಿದ್ದಾರೆ.ಪ್ರಮುಖ ಆಡಳಿತಾತ್ಮಕ ನಿರ್ಧಾರಗಳ ಕುರಿತು ವ್ಯಾಪಕ ಸಮಾಲೋಚನೆ ನಡೆಸುವ ಅಗತ್ಯವಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದ

ನವದೆಹಲಿ: ಕಾಂಗ್ರೆಸ್ ಸಂಘಟನೆ ಮತ್ತು ಸರ್ಕಾರದ ನಡುವಿನ ಸಮನ್ವಯ ಸುಧಾರಿಸಲು ರಾಜಕೀಯ ವ್ಯವಹಾರಗಳ ಸಮಿತಿ ರಚಿಸುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಪ್ರಸ್ತಾವವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರೋಧಿಸಿದ್ದಾರೆ.ಪ್ರಮುಖ ಆಡಳಿತಾತ್ಮಕ ನಿರ್ಧಾರಗಳ ಕುರಿತು ವ್ಯಾಪಕ ಸಮಾಲೋಚನೆ ನಡೆಸುವ ಅಗತ್ಯವಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದನ್ನು ಉಲ್ಲೇಖಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಜತೆಗಿನ ಇತ್ತೀಚಿನ ಸಭೆಯಲ್ಲಿ ಹರಿಪ್ರಸಾದ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಮಿತಿಯನ್ನು ತುರ್ತಾಗಿ ರಚಿಸುವಂತೆ ಪ್ರತಿಪಾದಿಸಿದ್ದರು ಎಂದು ಮೂಲಗಳು ತಿಳಿಸಿವೆ.ಭೂಸ್ವಾಧೀನದ ಬಗ್ಗೆ ರೈತರಿಂದ ವಿರೋಧ ವ್ಯಕ್ತವಾಗಿರುವ ಪ್ರಸ್ತಾವಿತ ‘ಬಿಡದಿ ಎಐ ಸಿಟಿ’ ಯೋಜನೆಯು, ಹೆಚ್ಚಿನ ಸಮಾಲೋಚನೆಯ ಅಗತ್ಯವನ್ನು ಎತ್ತಿ ತೋರಿಸಿರುವ ಪ್ರಮುಖ ವಿಷಯಗಳಲ್ಲಿ ಒಂದಾಗಿದೆ.ಪ್ರಸ್ತಾವಿತ ಸಮಿತಿಯಲ್ಲಿ ಸೇರ್ಪಡೆ ಗೊಳಿಸಬಹುದಾದ ಸಚಿವರು ಮತ್ತು ಹಿರಿಯ ಪಕ್ಷದ ನಾಯಕರು ಸೇರಿದಂತೆ ಸುಮಾರು 30 ನಾಯಕರ ಪಟ್ಟಿಯನ್ನು ಹರಿಪ್ರಸಾದ್ ಸಲ್ಲಿಸಿದ್ದಾರೆ ಎಂದು ಗೊತ್ತಾಗಿದೆ.ಈ ಪ್ರಸ್ತಾವದ ಪ್ರಕಾರ, ಕರ್ನಾಟಕ ಉಸ್ತುವಾರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಮಿತಿಯ ಅಧ್ಯಕ್ಷತೆ ವಹಿಸಲಿದ್ದು, ಹರಿಪ್ರಸಾದ್ ಸಂಚಾಲಕರಾಗಿರುತ್ತಾರೆ. ಶಿವಕುಮಾರ್, ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ಕೆಪಿಸಿಸಿ ಕಾರ್ಯಾಧ್ಯಕ್ಷರು, ಹಿರಿಯ ಸಚಿವರು ಮತ್ತು ಇತರ ಹಿರಿಯ ನಾಯಕರು ಸದಸ್ಯರಾಗುವ ಸಾಧ್ಯತೆಯಿದೆ.ಸರ್ಕಾರ ಮತ್ತು ಪಕ್ಷದ ಪ್ರಮುಖ ನಿರ್ಧಾರಗಳನ್ನು ಜಾರಿಗೆ ತರುವ ಮೊದಲು ಅವುಗಳ ಬಗ್ಗೆ ಈ ಸಮಿತಿಯಲ್ಲಿ ಚರ್ಚಿಸಲಾಗುತ್ತದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ನಡುವೆ ಸಮನ್ವಯ ಸಾಧಿಸಲು ವ್ಯವಸ್ಥೆಯ ಅಗತ್ಯವಿದೆ ಎಂದು ಹರಿಪ್ರಸಾದ್ ಪ್ರತಿಪಾದಿಸಿದ್ದರು.ಆದರೆ, ಪಕ್ಷದ ಹೈಕಮಾಂಡ್ನೊಂದಿಗೆ ಈ ವಿಷಯದ ಬಗ್ಗೆ ಚರ್ಚೆ ನಡೆದಾಗ ಶಿವಕುಮಾರ್ ಅವರು ಪ್ರಸ್ತಾವವನ್ನು ವಿರೋಧಿಸಿದ್ದಾರೆ ಎಂದು ತಿಳಿದುಬಂದಿದೆ. ಸರ್ಕಾರ ಮತ್ತು ಸಂಘಟನೆ ಸುಗಮವಾಗಿ ನಡೆಯುತ್ತಿದೆ ಮತ್ತು ಪ್ರತ್ಯೇಕ ರಾಜಕೀಯ ವ್ಯವಹಾರಗಳ ಸಮಿತಿಯ ಅಗತ್ಯವಿಲ್ಲ ಎಂದು ಅವರು ವಾದಿಸಿದ್ದಾರೆ. ತಮ್ಮ ನೇತೃತ್ವದಲ್ಲಿ ಈಗಾಗಲೇ ಸಚಿವರ ಸಮಿತಿ ಇದೆ. ಮತ್ತೊಂದು ಸಮಿತಿ ರಚಿಸಿದರೆ ಗೊಂದಲ ಸೃಷ್ಟಿಯಾಗುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ ಎಂದು ಮೂಲಗಳು ಹೇಳಿವೆ.261008-51-670045536