ಮತ ಕಳ್ಳತನ, ಪ್ರಜಾಪ್ರಭುತ್ವದ ಕೊಲೆ: ಪ್ರಧಾನಿ ಮೋದಿ ವಿರುದ್ಧ ದೀಪ್ಕೆ ಆರೋಪ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು 'ಪ್ರಜಾಪ್ರಭುತ್ವದ ಕೊಲೆ ಹಾಗೂ ಮತ ಕಳ್ಳತನ' ನಡೆಸುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಅವರು ಎ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು 'ಪ್ರಜಾಪ್ರಭುತ್ವದ ಕೊಲೆ ಹಾಗೂ ಮತ ಕಳ್ಳತನ' ನಡೆಸುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರುದ್ಧ ನಾಗರಿಕ ಸಮಾಜದ ಸಂಘಟನೆಗಳು ಹಾಗೂ ಸಿಜೆಪಿ ಜಂಟಿಯಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅವರು, 'ಎಸ್ಐಆರ್ ಪರಿಷ್ಕರಣೆಯ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿ ಹಾಕಲಾಗುತ್ತಿದೆ. ಇದು ಬಿಜೆಪಿ ವಿರೋಧಿಗಳ ಮತದಾನದ ಹಕ್ಕನ್ನು ಕಸಿದುಕೊಳ್ಳುವ ವ್ಯವಸ್ಥಿತ ಹುನ್ನಾರವಾಗಿದೆ. ಪ್ರಧಾನಿ ಮೋದಿ ಹಾಗೂ ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿ, ಮತಗಳ ಕಳವಿಗೆ ಕಾರಣವಾಗಿವೆ' ಎಂದು ಆರೋಪಿಸಿದ್ದಾರೆ. 'ನಾವು ಬೀದಿಗಿಳಿದು ಹೋರಾಡಲಿದ್ದೇವೆ, ನಮ್ಮ ಪ್ರಜಾಪ್ರಭುತ್ವವನ್ನು ಮರಳಿ ಪಡೆಯಲಿದ್ದೇವೆ. ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡುವವರೆಗೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ' ಎಂದು ಅವರು ಎಚ್ಚರಿಸಿದ್ದಾರೆ. LIVE | SIR ಪ್ರತಿಭಟನೆ; ಜ್ಞಾನೇಶ್ ರಾಜೀನಾಮೆ ನೀಡುವವರೆಗೂ ಹೋರಾಟ: ದೀಪ್ಕೆಬೆಂಗಳೂರು: ನಾಳಿನ ಸಿಜೆಪಿ ಪ್ರತಿಭಟನೆಯಲ್ಲಿ ಯೂಟ್ಯೂಬರ್ ಧ್ರುವ್ ರಾಠಿ ಭಾಗಿVIDEO | ಮತಗಳ್ಳತನದಿಂದ ಪ್ರಜಾಪ್ರಭುತ್ವದ ಸಾವು: ಮೋದಿ ವಿರುದ್ಧ ದೀಪ್ಕೆ ವಾಗ್ದಾಳಿ