ರಟ್ಟೀಹಳ್ಳಿ: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ
ರಟ್ಟೀಹಳ್ಳಿ: ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿ ಮೂರ್ತಿಯ ವಿಸರ್ಜನೆ ಸಡಗರದಿಂದ ನಡೆಯಿತು.ನೂರಾರು ಹಿಂದೂ ಕಾರ್ಯಕರ್ತರು ಒಗ್ಗೂಡಿ ಬೃಹತ್ ಶೋಭಾಯಾತ್ರೆ ನಡೆಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾತಂಡಗಳು, ವಾದ್ಯಮೇಳ, ಡೊಳ್ಳು ಹಾಗೂ ಗೊಂಬೆಕುಣಿತದೊಂದಿಗೆ ಮೆರವಣಿಗೆ ಸಾಗಿತು.ಗಣಪತಿ ವಿಸರ್ಜನಾ ಕಾರ್ಯಕ್ರ

ರಟ್ಟೀಹಳ್ಳಿ: ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿ ಮೂರ್ತಿಯ ವಿಸರ್ಜನೆ ಸಡಗರದಿಂದ ನಡೆಯಿತು.ನೂರಾರು ಹಿಂದೂ ಕಾರ್ಯಕರ್ತರು ಒಗ್ಗೂಡಿ ಬೃಹತ್ ಶೋಭಾಯಾತ್ರೆ ನಡೆಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾತಂಡಗಳು, ವಾದ್ಯಮೇಳ, ಡೊಳ್ಳು ಹಾಗೂ ಗೊಂಬೆಕುಣಿತದೊಂದಿಗೆ ಮೆರವಣಿಗೆ ಸಾಗಿತು.ಗಣಪತಿ ವಿಸರ್ಜನಾ ಕಾರ್ಯಕ್ರಮಕ್ಕೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಚಿವ ಬಿ.ಸಿ. ಪಾಟೀಲ, ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಸದಸ್ಯ ಬಸವರಾಜ ಆಡಿನವರ ಹಾಗೂ ಶ್ರೀರಾಮಸೇನೆಯ ತಾಲ್ಲೂಕು ಅಧ್ಯಕ್ಷ ರಾಮು ದೇವರಮನಿ ಚಾಲನೆ ನೀಡಿದರು. ಕಬ್ಬಿಣಕಂತಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.ಕಾರ್ಯಕ್ರಮದ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು. ಬಳಿಕ ಮಧ್ಯಾಹ್ನ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಸಂಜೆ 5ಕ್ಕೆ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭವಾದ ಬೃಹತ್ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು. ರಾತ್ರಿ 9ಕ್ಕೆ ಮೆರವಣಿಗೆ ಕೋಟೆ ಮಾರ್ಗ ತಲುಪಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಾರಿ ಸಿಡಿಮದ್ದು ಪ್ರದರ್ಶನ ನಡೆಯಿತು. ಬಳಿಕ ಕೋಟೆ ಮಾರ್ಗವಾಗಿ ಸಾಗಿದ ಮೆರವಣಿಗೆ ಕುಮದ್ವತಿ ನದಿ ತಲುಪಿದ್ದು, ಅಲ್ಲಿ ಗಣಪತಿ ಮೂರ್ತಿಯ ವಿಸರ್ಜನೆ ಸಾಂಗವಾಗಿ ನೆರವೇರಿತು.261008-22-775727327