ನೇಪಾಳ, ಬಾಂಗ್ಲಾದಂತೆ ದೇಶದಲ್ಲೂ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ: ಬಿಜೆಪಿ
ನವದೆಹಲಿ: ನೇಪಾಳ ಮತ್ತು ಬಾಂಗ್ಲಾದೇಶದ ಮಾದರಿಯಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. 'ಇಂಡಿಯಾ' ಮೈತ್ರಿಕೂಟ ನಡೆಸಿದ ಪ್ರತಿಭಟನೆಯ ವಿಡಿಯೊಗಳನ್ನು ಹಂಚಿಕೊಂಡ ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ, ದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಕಾಂಗ್ರೆಸ್ ಕಾರ್ಯಕರ್ತರು

ನವದೆಹಲಿ: ನೇಪಾಳ ಮತ್ತು ಬಾಂಗ್ಲಾದೇಶದ ಮಾದರಿಯಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. 'ಇಂಡಿಯಾ' ಮೈತ್ರಿಕೂಟ ನಡೆಸಿದ ಪ್ರತಿಭಟನೆಯ ವಿಡಿಯೊಗಳನ್ನು ಹಂಚಿಕೊಂಡ ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ, ದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ ನಡೆಸಿದ ಅನುಚಿತವಾಗಿ ವರ್ತನೆಯೇ ಪಕ್ಷದ ದುರುದ್ದೇಶವನ್ನು ತೋರಿಸುತ್ತದೆ ಎಂದಿದ್ದಾರೆ. ರಾಹುಲ್ ಗಾಂಧಿ ಅಧಿಕಾರಕ್ಕೆ ಬರಲು ಹಾತೊರೆಯುತ್ತಿದ್ದು, ಅದಕ್ಕಾಗಿ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಲು ಯತ್ನಿಸುತ್ತಿರುವುದು ಕಂಡುಬಂದಿದೆ. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಪೊಲೀಸರನ್ನು ತಳ್ಳಿ ಹಾಕಿರುವುದು ವಿಡಿಯೊದಲ್ಲಿ ದಾಖಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಜೊತೆಗೂಡಿ ಭಾರತದಲ್ಲಿ ಅಶಾಂತಿ ಸೃಷ್ಟಿಸಲು ವಿದೇಶ ಶಕ್ತಿಗಳು ಯತ್ನಿಸುತ್ತಿವೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗದ ವಿಚಾರ ಪ್ರಸ್ತಾಪಿಸಿದ ಅವರು, 'ಈ ಪ್ರಕರಣ ಈಗಾಗಲೇ ಸುಪ್ರೀಂ ಕೋರ್ಟ್ ಮುಂದಿದೆ. ಹಾಗಿರುವಾಗ ಬೀದಿಯಲ್ಲಿ ನಾನು ಪ್ರತಿಭಟಿಸಿದರೂ, ಬೇರೆ ಯಾರೇ ಪ್ರತಿಭಟಿಸಿದರೂ ಅಥವಾ ರಾಹುಲ್ ಗಾಂಧಿ ಪ್ರತಿಭಟಿಸಿದರೂ ನ್ಯಾಯಾಲಯದ ಪ್ರಕ್ರಿಯೆಗಳ ಮೇಲೆ ಯಾವುದೇ ಪ್ರಭಾವ ಬೀರದು. ಇಂತಹ ಪ್ರತಿಭಟನೆಗಳ ಮೂಲಕ ಸುಪ್ರೀಂ ಕೋರ್ಟ್ ತೀರ್ಪಿನ ಮೇಲೆ ಒತ್ತಡ ಹೇರಲು ಹಾಗೂ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ರಾಹುಲ್ ಯೋಚಿಸುತ್ತಿದ್ದಾರೆ' ಎಂದು ಟೀಕಿಸಿದ್ದಾರೆ. LIVE | SIR ಪ್ರತಿಭಟನೆ; ಜ್ಞಾನೇಶ್ ರಾಜೀನಾಮೆ ನೀಡುವವರೆಗೂ ಹೋರಾಟ: ದೀಪ್ಕೆಮತ ಕಳ್ಳತನ, ಪ್ರಜಾಪ್ರಭುತ್ವದ ಕೊಲೆ: ಪ್ರಧಾನಿ ಮೋದಿ ವಿರುದ್ಧ ದೀಪ್ಕೆ ಆರೋಪ