ಎಸ್ಐಆರ್ ಅಕ್ರಮ | ಸುಪ್ರೀಂ ಕೋರ್ಟ್ ತನಿಖೆಗೆ ಆದೇಶಿಸಲಿ: ಕೆ.ಟಿ. ರಾಮ ರಾವ್
ಹೈದರಾಬಾದ್: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮ ರಾವ್ ಆಗ್ರಹಿಸಿದ್ದಾರೆ.‘ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಅಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಗೆ ಆದೇಶಿಸಬೇಕು’ ಎಂದು ಅವರ

ಹೈದರಾಬಾದ್: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮ ರಾವ್ ಆಗ್ರಹಿಸಿದ್ದಾರೆ.‘ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಅಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಗೆ ಆದೇಶಿಸಬೇಕು’ ಎಂದು ಅವರು ‘ಎಕ್ಸ್’ನಲ್ಲಿ ಒತ್ತಾಯಿಸಿದ್ದಾರೆ.‘ಸಂವಿಧಾನಕ್ಕಿಂತ ಮಿಗಿಲಾದವರು ಯಾರೂ ಇಲ್ಲ. ಜ್ಞಾನೇಶ್ ಕುಮಾರ್ ಕೆಳಗಿಳಿಯಲೇಬೇಕು. ಸಂಸ್ಥೆಗಿಂತ ಯಾವ ವ್ಯಕ್ತಿಯೂ ದೊಡ್ಡವರಲ್ಲ. ಭಾರತದ ಯಾರೊಬ್ಬರ ಮತದಾನದ ಹಕ್ಕನ್ನೂ ಕಸಿದುಕೊಳ್ಳಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.‘ಅನೇಕ ವ್ಯಕ್ತಿಗಳು ಬರುವುದು–ಹೋಗುವುದನ್ನು ದೇಶ ಕಂಡಿದೆ, ಆದರೂ ಸುಂದರವಾಗಿ ಉಳಿದುಕೊಂಡಿದೆ. ಮತ್ತೇಕೆ ಒಬ್ಬ ವ್ಯಕ್ತಿಯನ್ನು ಉಳಿಸಲು ಇಷ್ಟೊಂದು ಹತಾಶೆ. 140 ಕೋಟಿ ಭಾರತೀಯರಿಗಿಂತಲೂ ಒಬ್ಬ ವ್ಯಕ್ತಿ ಹೆಚ್ಚೇ’ ಎಂದು ಪ್ರಶ್ನಿಸಿದ್ದಾರೆ.ಸಿಇಸಿ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟವನ್ನು ಬೆಂಬಲಿಸಿ ತೆಲಂಗಾಣ ಮುಖ್ಯ ಚುನಾವಣಾ ಅಧಿಕಾರಿ ಕಚೇರಿ ಎದುರು ಅ.10ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷವು ತಿಳಿಸಿದೆ.