ರಾಮನಗರ | ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ; ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ರಾಮನಗರ: ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೃತ್ಯವನ್ನು ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ (Ramanagara) ಕಠಿಣ ಶಿಕ್ಷೆ ವಿಧಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ ಮತ್ತು ಸತ್ರ ನ್ಯಾಯಾಲಯ ಈ ತೀರ್ಪು ನೀಡಿದ್ದು, ಪ್ರಮುಖ ಆರೋಪಿ ಲೋಕೇಶ್ಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ

ರಾಮನಗರ: ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೃತ್ಯವನ್ನು ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ (Ramanagara) ಕಠಿಣ ಶಿಕ್ಷೆ ವಿಧಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ ಮತ್ತು ಸತ್ರ ನ್ಯಾಯಾಲಯ ಈ ತೀರ್ಪು ನೀಡಿದ್ದು, ಪ್ರಮುಖ ಆರೋಪಿ ಲೋಕೇಶ್ಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ. ಎರಡನೇ ಆರೋಪಿ ಗುರುಪ್ರಸಾದ್ಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ಪಂಚಾಕ್ಷರಿ ಆದೇಶ ಹೊರಡಿಸಿದ್ದಾರೆ. 2020ರಲ್ಲಿ ನಡೆದಿದ್ದ ಘಟನೆ 2020ರ ಅಕ್ಟೋಬರ್ನಲ್ಲಿ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಆರೋಪಿಗಳು ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಆ ದೃಶ್ಯಗಳನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಕುದೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದನ್ನೂ ಓದಿ: ಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರಲು ಧನಂಜಯನ ಆಯ್ಕೆ ಬಹುತೇಕ ಖಚಿತ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗಳ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದೆ. ಅಲ್ಲದೆ, ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ಮಂಜೂರು ಮಾಡಿ ಆದೇಶ ಹೊರಡಿಸಿದೆ.ಇದನ್ನೂ ಓದಿ: ಆಂಬ್ಯುಲೆನ್ಸ್ನಲ್ಲಿದ್ದ ಆಕ್ಸಿಜನ್ ಸಿಲಿಂಡರ್ ಸ್ಫೋಟ; ರೋಗಿ ಸಾವು, ಇಬ್ಬರಿಗೆ ಗಂಭೀರ ಗಾಯ