ಶಾಸಕ ವಿನಯ್ ಕುಲಕರ್ಣಿಗೆ ಇಂದು ಬಿಗ್ ಡೇ; ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ
– ಸುಪ್ರೀಂನಲ್ಲಿ ಇಂದೇ ಆದೇಶ ಸಾಧ್ಯತೆ ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ (Yogesh Gowda) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಶಾಸಕ ವಿನಯ್ ಕುಲಕರ್ಣಿ (Vinay Kulkarni) ವಿರುದ್ಧ ಸಿಬಿಐ ಮತ್ತು ಯೋಗೇಶ್ ಗೌಡ ಸಹೋದರ ಗುರುನಾಥ್ ಗೌಡ ಸಲ್ಲಿಸಿರುವ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಯಲಿದೆ

– ಸುಪ್ರೀಂನಲ್ಲಿ ಇಂದೇ ಆದೇಶ ಸಾಧ್ಯತೆ ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ (Yogesh Gowda) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಶಾಸಕ ವಿನಯ್ ಕುಲಕರ್ಣಿ (Vinay Kulkarni) ವಿರುದ್ಧ ಸಿಬಿಐ ಮತ್ತು ಯೋಗೇಶ್ ಗೌಡ ಸಹೋದರ ಗುರುನಾಥ್ ಗೌಡ ಸಲ್ಲಿಸಿರುವ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಯಲಿದೆ. ಕೆಳ ಹಂತದ ನ್ಯಾಯಲಯದ ಆದೇಶಕ್ಕೆ ತಡೆ ನೀಡಿ, ಜಾಮೀನು ನೀಡಿದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ ಮಾಡಲಾಗಿತ್ತು. ಇದನ್ನೂ ಓದಿ: ಜೈಲಲ್ಲಿರೋ ತಂದೆ ವಿನಯ್ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಮಕ್ಕಳು ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಕಳೆದ ವಿಚಾರಣೆಯಲ್ಲಿ ಕೊಲೆ ಪ್ರಕರಣ ಆರೋಪಿಗಳು ವಿಧಾನಸಭೆಯಲ್ಲಿ ಇರಬೇಕೇ ಎಂದು ನ್ಯಾಯಪೀಠ ಪ್ರಶ್ನಿಸಿತ್ತು. ಇಂದು ಕೊಲೆ, ನಾಳೆ ದರೋಡೆ ಮಾಡಿದವರು ವಿಧಾನಸಭೆ ಪ್ರವೇಶಿಸಬೇಕೆ ಎಂದು ಕಟುವಾಗಿ ಮೌಕಿಕವಾಗಿ ಕೋರ್ಟ್ ಪ್ರಶ್ನಿಸಿತ್ತು. ವಿಚಾರಣೆ ವೇಳೆ ವಿನಯ್ ಕುಲಕರ್ಣಿಗೆ ನ್ಯಾಯಾಲಯ ನೋಟಿಸ್ ನೀಡಿತ್ತು. ಇದನ್ನೂ ಓದಿ: ಯೋಗೀಶ್ ಗೌಡ ಕೊಲೆ ಕೇಸ್ – ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಇಂದು ಕೋರ್ಟ್ ವಿಚಾರಣೆ ಮುಂದುವರಿಸಲಿದೆ. ಸುಪ್ರೀಂ ಕೋರ್ಟ್ನಲ್ಲಿ ವಿನಯ್ ಕುಲಕರ್ಣಿಗೆ ಬಿಗ್ ಡೇ ಆಗಿದ್ದು, ಜಾಮೀನು ಭವಿಷ್ಯ ನಿರ್ಧಾರವಾಗುವ ಸಾಧ್ಯತೆ ಇದೆ.