ನಾಳೆಯ ಸಿಜೆಪಿ ಧರಣಿಗೆ ದೆಹಲಿ ಪೊಲೀಸರ ತಡೆ: ಜಂತರ್ ಮಂತರ್ನಲ್ಲಿ ನಿಷೇಧಾಜ್ಞೆ
ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಳೆ (ಅ.10) ಜಂತರ್ ಮಂತರ್ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ದೆಹಲಿ ಪೊಲೀಸರು ಶುಕ್ರವಾರ ಅನುಮತಿ ನಿರಾಕರಿಸಿದ್ದಾರೆ.ಮುನ್ನೆಚ್ಚರಿಕೆ ಕ್ರಮವಾಗಿ ನವದೆಹಲಿಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವ್ಯಾಪಕ ಭದ್ರತೆ ಕೈಗೊಳ್ಳಲಾಗಿದ್ದು, 20,000ಕ್ಕೂ ಹೆಚ್ಚು

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಳೆ (ಅ.10) ಜಂತರ್ ಮಂತರ್ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ದೆಹಲಿ ಪೊಲೀಸರು ಶುಕ್ರವಾರ ಅನುಮತಿ ನಿರಾಕರಿಸಿದ್ದಾರೆ.ಮುನ್ನೆಚ್ಚರಿಕೆ ಕ್ರಮವಾಗಿ ನವದೆಹಲಿಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವ್ಯಾಪಕ ಭದ್ರತೆ ಕೈಗೊಳ್ಳಲಾಗಿದ್ದು, 20,000ಕ್ಕೂ ಹೆಚ್ಚು ಪೊಲೀಸರು ಹಾಗೂ ಅರೆಸೇನಾ ಪಡೆ ಸಿಬ್ಬಂದಿ ನಿಯೋಜಿಸಲಾಗಿದೆ.ಪ್ರತಿಭಟನೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಶುಕ್ರವಾರ ರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ 57 ಮೆಟ್ರೊ ನಿಲ್ದಾಣಗಳ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ದೆಹಲಿ ಮೆಟ್ರೊ ರೈಲು ನಿಗಮಕ್ಕೆ ಪೊಲೀಸರು ಸೂಚಿಸಿದ್ದಾರೆ.ಎಸ್ಐಆರ್ ವಿರೋಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ, ವಿದ್ಯಾರ್ಥಿ ಸಂಘಟನೆಗಳು ಹಾಗೂ ರೈತ ಒಕ್ಕೂಟಗಳು ಈ ಪ್ರತಿಭಟನೆಗೆ ಕರೆ ನೀಡಿವೆ.ನಾಳೆ ಸಿಜೆಪಿ ಪ್ರತಿಭಟನೆ: ಭದ್ರತೆಗೆ 20 ಸಾವಿರ ಸಿಬ್ಬಂದಿಒಗ್ಗಟ್ಟು ಪ್ರದರ್ಶಿಸಿ, ಸುದೀರ್ಘ ಆಂದೋಲನಕ್ಕೆ ಸಜ್ಜಾಗಿ: ಸಿಜೆಪಿ ಕರೆ