ಭಾರತೀಯ ಮೂಲದ ನವಿ ಪಿಳ್ಳೈಗೆ ನೊಬೆಲ್ ಶಾಂತಿ ಪ್ರಶಸ್ತಿ
ಓಸ್ಲೊ: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಾಜಿ ಮುಖ್ಯಸ್ಥೆ ಹಾಗೂ ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶೆಯಾಗಿದ್ದ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನ್ಯಾಯಶಾಸ್ತ್ರಜ್ಞೆ ನವನೇಥಂ ನವಿ ಪಿಳ್ಳೈ ಅವರು ಶಾಂತಿ ಮತ್ತು ಅಂತರರಾಷ್ಟ್ರೀಯ ಕಾನೂನಿಗೆ ನೀಡಿದ ಕೊಡುಗೆಗಾಗಿ ಅವರನ್ನು ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಾಂತಿ ಮತ್ತು ಅಂತರರಾಷ್ಟ್ರೀಯ ಕಾ

ಓಸ್ಲೊ: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಾಜಿ ಮುಖ್ಯಸ್ಥೆ ಹಾಗೂ ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶೆಯಾಗಿದ್ದ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನ್ಯಾಯಶಾಸ್ತ್ರಜ್ಞೆ ನವನೇಥಂ ನವಿ ಪಿಳ್ಳೈ ಅವರು ಶಾಂತಿ ಮತ್ತು ಅಂತರರಾಷ್ಟ್ರೀಯ ಕಾನೂನಿಗೆ ನೀಡಿದ ಕೊಡುಗೆಗಾಗಿ ಅವರನ್ನು ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಾಂತಿ ಮತ್ತು ಅಂತರರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ಕಾರ್ಯಕ್ಕಾಗಿ ಈ ಪ್ರತಿಷ್ಠಿತ ಪ್ರಶಸ್ತಿಯು ದಕ್ಷಿಣ ಆಫ್ರಿಕಾದ ಮಾಜಿ ನ್ಯಾಯಶಾಸ್ತ್ರಜ್ಞೆಗೆ ಸಲ್ಲುತ್ತದೆ ಎಂದು ನೊಬೆಲ್ ಸಮಿತಿಯು ಓಸೊದಲ್ಲಿ ಘೋಷಿಸಿದೆ. BREAKING NEWSThe Norwegian Nobel Committee has decided to award the 2026 #NobelPeacePrize to Navanethem “Navi” Pillay for her efforts to promote peace and international law.#NobelPrize pic.twitter.com/97vurspw6z— The Nobel Prize (@NobelPrize) October 9, 2026 1941ರ ಸೆಪ್ಟೆಂಬರ್ 23ರಂದು ದಕ್ಷಿಣ ಆಫ್ರಿಕಾದ ಡರ್ಬನ್ನಲ್ಲಿ ತಮಿಳು ಮೂಲದ ಪೋಷಕರಿಗೆ ಜನಿಸಿದ ಪಿಳ್ಳೈ ಅವರು ವರ್ಣಭೇದ ನೀತಿಯ ನಡುವೆಯೇ ಬೆಳೆದವರು. ನಂತರ ವರ್ಣಭೇದ ನೀತಿ ವಿರೋಧಿ ಹೋರಾಟಗಾರರ ಪರ ವಾದಿಸುತ್ತಾ, ಮಾನವ ಹಕ್ಕುಗಳು ಮತ್ತು ಸಮಾನತೆಯನ್ನು ಎತ್ತಿಹಿಡಿಯುವ ವೃತ್ತಿಜೀವನವನ್ನು ನಿರ್ಮಿಸಿಕೊಂಡಿದ್ದರು. 1967ರಲ್ಲಿ ದಕ್ಷಿಣ ಆಫ್ರಿಕಾದ ನಟಾಲ್ ಪ್ರಾಂತ್ಯದಲ್ಲಿ ವಕೀಲ ವೃತ್ತಿಯನ್ನು ಪ್ರಾರಂಭಿಸಿದರು. ಈ ಸಾಧನೆ ಮಾಡಿದ ಮೊದಲ ಮಹಿಳೆ ಎನ್ನುವ ಖ್ಯಾತಿಗೆ ಭಾಜನರಾಗಿದ್ದರು. ನಂತರ ದಕ್ಷಿಣ ಆಫ್ರಿಕಾದ ಹೈಕೋರ್ಟ್ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ ಮೊದಲ ಕಪ್ಪು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.ನವಿ ಪಿಳ್ಳೈ ಅವರು ರುವಾಂಡಾದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ನ್ಯಾಯಾಧೀಶೆ ಮತ್ತು ಅಧ್ಯಕ್ಷೆಯಾಗಿ, ಅಂತರರಾಷ್ಟ್ರೀಯ ಅಪರಾಧ ನ್ಯಾಯಾಲಯದ ನ್ಯಾಯಾಧೀಶೆಯಾಗಿ ಹಾಗೂ 2008 ರಿಂದ 2014 ರವರೆಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ. ನೊಬೆಲ್ ಶಾಂತಿ ಪ್ರಶಸ್ತಿಯನ್ನು ವಿಶ್ವದ ಅತ್ಯಂತ ಪ್ರತಿಷ್ಠಿತ ಗೌರವಗಳಲ್ಲಿ ಒಂದೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ. ಈ ವರ್ಷ ನೊಬೆಲ್ ಶಾಂತಿ ಪ್ರಶಸ್ತಿಯ 125ನೇ ವಾರ್ಷಿಕೋತ್ಸವವಾಗಿದೆ.