ಸಿಜೆಪಿ ಪ್ರತಿಭಟನೆ; ನೋಯ್ಡಾ-ದೆಹಲಿ ಗಡಿಗಳಲ್ಲಿ ಭದ್ರತೆ ಹೆಚ್ಚಳ, BSF ನಿಯೋಜನೆ
ನೋಯ್ಡಾ: ಅ.10ರಂದು ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಕರೆ ನೀಡಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ, ನೋಯ್ಡಾ ಮತ್ತು ದೆಹಲಿಯನ್ನು ಸಂಪರ್ಕಿಸುವ ಗಡಿಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಗಡಿ ಭದ್ರತಾ ಪಡೆಯನ್ನು (ಬಿಎಸ್ಎಫ್) ನಿಯೋಜಿಸಲಾಗಿದೆ.ಎಸ್ಐಆರ್ ಮತ್ತು ಚುನಾವಣಾ ಪ್ರಕ್ರಿಯೆಗಳಲ್ಲಿ ಅಕ್ರಮಗಳು

ನೋಯ್ಡಾ: ಅ.10ರಂದು ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಕರೆ ನೀಡಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ, ನೋಯ್ಡಾ ಮತ್ತು ದೆಹಲಿಯನ್ನು ಸಂಪರ್ಕಿಸುವ ಗಡಿಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಗಡಿ ಭದ್ರತಾ ಪಡೆಯನ್ನು (ಬಿಎಸ್ಎಫ್) ನಿಯೋಜಿಸಲಾಗಿದೆ.ಎಸ್ಐಆರ್ ಮತ್ತು ಚುನಾವಣಾ ಪ್ರಕ್ರಿಯೆಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳ ನಡುವೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಈ ಪ್ರತಿಭಟನೆಗೆ ಕರೆ ನೀಡಲಾಗಿದೆ.ನೋಯ್ಡಾದಿಂದ ದೆಹಲಿಗೆ ಪ್ರವೇಶಿಸುವ ಬಸ್ಗಳು, ಟ್ಯಾಕ್ಸಿಗಳು ಮತ್ತು ಖಾಸಗಿ ಕಾರುಗಳ ಮೇಲೆ ಭದ್ರತಾ ಸಿಬ್ಬಂದಿ ಸೂಕ್ಷ್ಮ ನಿಗಾ ವಹಿಸಿದ್ದಾರೆ. ಸಂಶಯಾಸ್ಪದವಾಗಿ ಕಂಡುಬರುವ ವಾಹನಗಳನ್ನು ಪರಿಶೀಲಿಸಲು ಮತ್ತು ಅಗತ್ಯವಿರುವಲ್ಲಿ ಜನರನ್ನು ವಿಚಾರಣೆಗೊಳಪಡಿಸಲು ಪೊಲೀಸ್ ತಂಡಗಳು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪ್ರತಿಭಟನೆಯ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯುವ ಪ್ರಯತ್ನದ ಭಾಗವಾಗಿ ವಾಹನಗಳನ್ನು ತಡೆದು ತಪಾಸಣೆ ನಡೆಸಲಾಗುತ್ತಿದೆ. ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಗಡಿಯಲ್ಲಿ ಆರ್ಸಿಸಿ ತಡೆಗೋಡೆಗಳನ್ನು ಸಹ ಅಳವಡಿಸಲಾಗಿದೆ ಎಂದು ಹೇಳಿದ್ದಾರೆ. ಪ್ರತಿಭಟನೆಗೂ ಮುನ್ನ ಪೊಲೀಸರು ತಮ್ಮನ್ನು ಗೃಹ ಬಂಧನದಲ್ಲಿಟ್ಟಿದ್ದಾರೆ ಎಂದು ನೋಯ್ಡಾದ ಹಲವು ಸಾಮಾಜಿಕ ಸಂಸ್ಥೆ, ರೈತ ಸಂಘಟನೆಗಳ ಸದಸ್ಯರು ಮತ್ತು ಕೆಲವು ರಾಜಕೀಯ ಪಕ್ಷಗಳ ನಾಯಕರು ಆರೋಪಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ನಿಂದನೆ ಖಂಡಿಸಿ 'ಲಾಲ್ ಹಿಟ್ ಜನತಾ ಪಾರ್ಟಿ' ಪ್ರತಿಭಟನೆSIR ಪ್ರತಿಭಟನೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಲಿರುವ ‘ಇಂಡಿಯಾ’ ನಾಯಕರು