ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮೀಸಲಾತಿ: ಅರ್ಜಿ ವಜಾಗೊಳಿಸಿದ ‘ಸುಪ್ರೀಂ’
ನವದೆಹಲಿ: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಶೇಕಡ 34ರಷ್ಟು ಮೀಸಲಾತಿ ನೀಡುವ ಆಂಧ್ರ ಪ್ರದೇಶ ಸರ್ಕಾರದ ಎರಡು ಆದೇಶಗಳನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.ಆಂಧ್ರ ಪ್ರದೇಶದ ಹೈಕೋರ್ಟ್ ಸಮಜಂಸವಾದ ಆದೇಶವನ್ನು ನೀಡಿದೆ ಎಂದು ನ್ಯಾಯಮ

ನವದೆಹಲಿ: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಶೇಕಡ 34ರಷ್ಟು ಮೀಸಲಾತಿ ನೀಡುವ ಆಂಧ್ರ ಪ್ರದೇಶ ಸರ್ಕಾರದ ಎರಡು ಆದೇಶಗಳನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.ಆಂಧ್ರ ಪ್ರದೇಶದ ಹೈಕೋರ್ಟ್ ಸಮಜಂಸವಾದ ಆದೇಶವನ್ನು ನೀಡಿದೆ ಎಂದು ನ್ಯಾಯಮೂರ್ತಿಗಳಾದ ದೀಪಾಂಕರ್ ದತ್ತಾ ಹಾಗೂ ಶೀಲ್ ನಾಗು ನೇತೃತ್ವದ ನ್ಯಾಯಪೀಠವು ತಿಳಿಸಿದೆ.ಮೀಸಲಾತಿಯು ಶೇಕಡ 50ರಷ್ಟನ್ನು ಮೀರುವಂತಿಲ್ಲ ಎಂಬ ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಆಂಧ್ರ ಪ್ರದೇಶ ಸರ್ಕಾರವು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್, ಕಳೆದ ಅಕ್ಟೋಬರ್ 1ರಂದು ರದ್ದುಗೊಳಿಸಿತ್ತು. ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗವು ಆರು ವಾರಗಳ ಒಳಗಾಗಿ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಈ ವೇಳೆ ನಿರ್ದೇಶನ ನೀಡಿತ್ತು. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಶೇಕಡ 34ರಷ್ಟು ಮೀಸಲಾತಿ ನೀಡಲಾಗುವುದು ಎಂದು ಆಗಸ್ಟ್ 18ರಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಘೋಷಿಸಿದ್ದರು. ‘ಎನ್ಡಿಎ ಸರ್ಕಾರ ನೀಡಿದ ವಾಗ್ದಾನದಂತೆ ಮೀಸಲಾತಿ ನೀಡಲಾಗುತ್ತಿದೆ. ಚುನಾವಣೆಯ ಸಮಯದಲ್ಲಿ ನಾಮನಿರ್ದೇಶಿತ ಹುದ್ದೆಗಳಿಗೂ ಮೀಸಲಾತಿ ನೀಡಲಾಗುವುದು ಎಂದು ಘೋಷಿಸಿದ್ದೆವು, ಅದರಂತೆ ನಡೆದುಕೊಳ್ಳುತ್ತಿದ್ದೇವೆ’ ಎಂದು ಹೇಳಿದ್ದರು.