ಪಶ್ಚಿಮ ಬಂಗಾಳ ಉಪಚುನಾವಣೆ: ನಂದಿಗ್ರಾಮದಲ್ಲಿ ಬಿಜೆಪಿಗೆ ಭಾರಿ ಮುನ್ನಡೆ
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೇರಿದ ನಾಲ್ಕು ತಿಂಗಳಲ್ಲೇ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ತನ್ನ ಅಧಿಪತ್ಯ ಮುಂದುವರಿಸಿದೆ. ರಾಜಕೀಯವಾಗಿ ಹೆಚ್ಚಿನ ಮಹತ್ವ ಪಡೆದಿರುವ ನಂದಿಗ್ರಾಮ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಬೃಹತ್ ಮುನ್ನಡೆ ಸಾಧಿಸಿದೆ. ಅಲ್ಲದೆ ಶೇ 70ರಷ್ಟು ಮುಸ್ಲಿಂ ಜನಸಂಖ್ಯೆ ಹೊಂದಿರುವ ಮುರ್ಷಿದಾಬಾದ್ ಜಿಲ್ಲೆಯ ರೆಜಿನಗರದ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೇರಿದ ನಾಲ್ಕು ತಿಂಗಳಲ್ಲೇ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ತನ್ನ ಅಧಿಪತ್ಯ ಮುಂದುವರಿಸಿದೆ. ರಾಜಕೀಯವಾಗಿ ಹೆಚ್ಚಿನ ಮಹತ್ವ ಪಡೆದಿರುವ ನಂದಿಗ್ರಾಮ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಬೃಹತ್ ಮುನ್ನಡೆ ಸಾಧಿಸಿದೆ. ಅಲ್ಲದೆ ಶೇ 70ರಷ್ಟು ಮುಸ್ಲಿಂ ಜನಸಂಖ್ಯೆ ಹೊಂದಿರುವ ಮುರ್ಷಿದಾಬಾದ್ ಜಿಲ್ಲೆಯ ರೆಜಿನಗರದಲ್ಲೂ ಅನಿರೀಕ್ಷಿತ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ವಿಪಕ್ಷಗಳ ಮತ ವಿಭಜನೆಯ ಲಾಭ ಪಡೆದಿದೆ.ಚುನಾವಣಾ ಆಯೋಗದ ಅಂಕಿ-ಅಂಶಗಳ ಪ್ರಕಾರ, ನಂದಿಗ್ರಾಮದಲ್ಲಿ 13 ಸುತ್ತುಗಳ ಮತ ಎಣಿಕೆ ಅಂತ್ಯಕ್ಕೆ ಬಿಜೆಪಿ ಅಭ್ಯರ್ಥಿ ಹಸಿರಾಣಿ ರಥ್ ಅವರು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರಿಗಿಂತ 1,05,869 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಹಸಿರಾಣಿ ರಥ್ 1,43,656 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ನ ಪ್ರಧಾನ್ 37,787 ಮತಗಳನ್ನು ಗಳಿಸಿದ್ದಾರೆ.ಇತ್ತ ಶೇ 70ರಷ್ಟು ಅಲ್ಪಸಂಖ್ಯಾತ ಮತದಾರರಿರುವ ರೆಜಿನಗರದಲ್ಲಿ 7 ಸುತ್ತುಗಳ ಎಣಿಕೆ ಮುಕ್ತಾಯಕ್ಕೆ ಬಿಜೆಪಿ ಅಭ್ಯರ್ಥಿ ಶಂಕರಾಭ್ ಸರ್ಕಾರ್ ಅವರು ಎಜೆಯುಪಿ ಅಭ್ಯರ್ಥಿ ಗುಲಾಂ ನಬಿ ಆಜಾದ್ ಅವರಿಗಿಂತ 37,506 ಮತಗಳ ಮುನ್ನಡೆ ಗಳಿಸಿದ್ದಾರೆ. ಸರ್ಕಾರ್ 61,386 ಮತಗಳನ್ನು ಪಡೆದಿದ್ದರೆ, ಆಜಾದ್ 23,880 ಮತಗಳನ್ನು ಗಳಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಒಟ್ಟು 15 ಸುತ್ತುಗಳ ಮತ ಎಣಿಕೆ ನಡೆಯಲಿದೆ.ಉಭಯ ಕ್ಷೇತ್ರಗಳ ಫಲಿತಾಂಶದ ಮುನ್ನೋಟವು ರಾಜ್ಯದ ಬದಲಾಗುತ್ತಿರುವ ರಾಜಕೀಯ ಸಮೀಕರಣಕ್ಕೆ ಸಾಕ್ಷಿಯಾಗಿದೆ. 'ರಾಜ್ಯದಲ್ಲಿ ರಾಷ್ಟ್ರವಾದಿ ಶಕ್ತಿಗಳು ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ಸಾಧಿಸಲಿವೆ' ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.2026ರ ವಿಧಾನಸಭೆ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ನಂದಿಗ್ರಾಮ ಹಾಗೂ ಭವಾನಿಪುರ ಎರಡೂ ಕ್ಷೇತ್ರಗಳಿಂದ ಗೆದ್ದು, ಬಳಿಕ ನಂದಿಗ್ರಾಮ ಕ್ಷೇತ್ರವನ್ನು ಬಿಟ್ಟು ಕೊಟ್ಟಿದ್ದರಿಂದ ಈ ಉಪಚುನಾವಣೆ ನಡೆದಿತ್ತು. ಬಿಜೆಪಿ ಕಾರ್ಯಕರ್ತರ ಸಂಭ್ರಮಪುದುಚೇರಿ ಉಪಚುನಾವಣೆ: ಅಖಿಲ ಭಾರತ ಎನ್.ಆರ್. ಕಾಂಗ್ರೆಸ್ಗೆ ಜಯಉಪಚುನಾವಣೆ ಮತ ಎಣಿಕೆ: ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ