ಮೈಸೂರು| ಮೋದಿ 25 ವರ್ಷಗಳ ಆಡಳಿತ: ಶಾಲಾ ಮಕ್ಕಳಿಗೆ ಚಿತ್ರಕಲೆ, ಭಾಷಣ ಸ್ಪರ್ಧೆ
ಮೈಸೂರು: ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಹಾಗೂ ಪ್ರಧಾನಿಯಾಗಿ 25 ವರ್ಷಗಳ ಆಡಳಿತ ಪೂರೈಸಿದ ಅಂಗವಾಗಿ ಬಿಜೆಪಿ ನಗರ ಜಿಲ್ಲಾ ಘಟಕದಿಂದ ಇಲ್ಲಿನ ಕೆಎಸ್ಒಯು ಘಟಿಕೋತ್ಸವ ಭವನದಲ್ಲಿ ಶುಕ್ರವಾರ ‘ಸೇವಾ ಸಂಕಲ್ಪ ಅಭಿಯಾನ’ ನಡೆಸಲಾಯಿತು.ಶಾಲಾ ಮಕ್ಕಳಿಗೆ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡು ಪ್ರತಿಭೆ ಪ್ರದರ್ಶಿಸಿ

ಮೈಸೂರು: ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಹಾಗೂ ಪ್ರಧಾನಿಯಾಗಿ 25 ವರ್ಷಗಳ ಆಡಳಿತ ಪೂರೈಸಿದ ಅಂಗವಾಗಿ ಬಿಜೆಪಿ ನಗರ ಜಿಲ್ಲಾ ಘಟಕದಿಂದ ಇಲ್ಲಿನ ಕೆಎಸ್ಒಯು ಘಟಿಕೋತ್ಸವ ಭವನದಲ್ಲಿ ಶುಕ್ರವಾರ ‘ಸೇವಾ ಸಂಕಲ್ಪ ಅಭಿಯಾನ’ ನಡೆಸಲಾಯಿತು.ಶಾಲಾ ಮಕ್ಕಳಿಗೆ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡು ಪ್ರತಿಭೆ ಪ್ರದರ್ಶಿಸಿದರು.ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ವಿಕಸಿತ ಭಾರತ ನಿರ್ಮಾಣಕ್ಕಾಗಿ ಪ್ರಧಾನಿ ಮೋದಿ ಅವರೊಂದಿಗೆ ಎಲ್ಲರೂ ಕೈಜೋಡಿಸಬೇಕು. ಅವರು 25 ವರ್ಷಗಳಿಂದ ದೇಶಕ್ಕೆ ನೀಡಿರುವ ಸೇವೆಯು ಅದ್ವಿತೀಯವಾದುದು ಹಾಗೂ ಅಪಾರವಾದುದು. ಅವರ ಅವಧಿಯಲ್ಲಿ ಭಾರತವು ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದುತ್ತಿದೆ ಎಂದರು.ಶಾಸಕ ಟಿ.ಎಸ್. ಶ್ರೀವತ್ಸ, ವಿಧಾನಪರಿಷತ್ ಮಾಜಿ ಸದಸ್ಯರಾದ ತೋಂಟದಾರ್ಯ, ಸಿದ್ದರಾಜು, ಪಕ್ಷದ ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ, ಅಲ್ಪಸಂಖ್ಯಾತರ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಡಾ.ಅನಿಲ್ ಥಾಮಸ್, ಮುಖಂಡರಾದ ಶಿವಕುಮಾರ್, ಫಣೀಶ್, ವಸಂತ್ಕುಮಾರ್, ಹೇಮಾ ನಂದೀಶ್, ಜೋಗಿ ಮಂಜು ಪಾಲ್ಗೊಂಡಿದ್ದರು.