ಕಲಬುರಗಿ: ಅಧಿಕಾರಿಗಳಿಗೆ ಮಾಹಿತಿ ಆಯೋಗದಿಂದ ದಂಡದ ಬಿಸಿ!
ಕಲಬುರಗಿ: ಸಕಾಲಕ್ಕೆ ಮಾಹಿತಿ ನೀಡದ ಹಾಗೂ ವಿಚಾರಣೆಗೆ ಹಾಜರಾಗದ ಐವರು ಅಧಿಕಾರಿಗಳಿಗೆ ತಲಾ ₹10 ಸಾವಿರ ದಂಡ ವಿಧಿಸಿ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ಬಿ.ವೆಂಕಟ ಸಿಂಗ್ ಆದೇಶ ಹೊರಡಿಸಿದ್ದಾರೆ.ಬೀದರ್ ಜಿಲ್ಲೆ ಬಸವಕಲ್ಯಾಣ ನಗರಸಭೆ ಪ್ರಥಮ ದರ್ಜೆ ಸಹಾಯಕ ಸೂರ್ಯಕಾಂತ, ರಾಯಚೂರು ಜಿಲ್ಲೆ ಬೋಳಮಾನದೊಡ್ಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಲ್ಲಿಕಾರ್ಜುನ, ಕಲಬುರಗಿ ಮಹ

ಕಲಬುರಗಿ: ಸಕಾಲಕ್ಕೆ ಮಾಹಿತಿ ನೀಡದ ಹಾಗೂ ವಿಚಾರಣೆಗೆ ಹಾಜರಾಗದ ಐವರು ಅಧಿಕಾರಿಗಳಿಗೆ ತಲಾ ₹10 ಸಾವಿರ ದಂಡ ವಿಧಿಸಿ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ಬಿ.ವೆಂಕಟ ಸಿಂಗ್ ಆದೇಶ ಹೊರಡಿಸಿದ್ದಾರೆ.ಬೀದರ್ ಜಿಲ್ಲೆ ಬಸವಕಲ್ಯಾಣ ನಗರಸಭೆ ಪ್ರಥಮ ದರ್ಜೆ ಸಹಾಯಕ ಸೂರ್ಯಕಾಂತ, ರಾಯಚೂರು ಜಿಲ್ಲೆ ಬೋಳಮಾನದೊಡ್ಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಲ್ಲಿಕಾರ್ಜುನ, ಕಲಬುರಗಿ ಮಹಾನಗರ ಪಾಲಿಕೆ ಪರಿಸರ ಎಂಜಿನಿಯರ್ ಅಭಯಕುಮಾರ್, ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಜುಮ್ಮಾಪುರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗುರಪ್ಪ ನಾಯಕ ಹಾಗೂ ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ನಾಗಲಾಪುರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರವಿಕುಮಾರ ಅವರಿಗೆ ದಂಡ ವಿಧಿಸಲಾಗಿದೆ.ಮೇಲ್ಮನವಿದಾರರು ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದರೂ ಮಾಹಿತಿ ನೀಡಿರಲಿಲ್ಲ. ಆದ್ದರಿಂದ ಆಯೋಗಕ್ಕೆ ದ್ವಿತೀಯ ಮೇಲ್ಮನವಿ ಸಲ್ಲಿಸಿದ್ದರು. ಅಲ್ಲದೆ, ಕೆಲ ಅಧಿಕಾರಿಗಳು ಈ ಹಿಂದೆ ಆಯೋಗ ನೀಡಿದ್ದ ಆದೇಶ ಪಾಲಿಸಿರಲಿಲ್ಲ.ದಂಡವನ್ನು ಅವರ ಬರುವ ತಿಂಗಳ ವೇತನದಲ್ಲಿ ಕಡಿತಗೊಳಿಸಬೇಕು ಎಂದು ಆಯಾ ಇಲಾಖೆಯ ಮೇಲಧಿಕಾರಿಗಳಿಗೆ ಆಯೋಗ ಸೂಚಿಸಿದೆ. ದಂಡ ಪಾವತಿ ಮಾಡಬೇಕು ಹಾಗೂ ತಕ್ಷಣ ಮೇಲ್ಮನವಿದಾರರಿಗೆ ಮಾಹಿತಿ ನೀಡಬೇಕು. ತಪ್ಪಿದಲ್ಲಿ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ.