SIR ಪ್ರತಿಭಟನೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಲಿರುವ ‘ಇಂಡಿಯಾ’ ನಾಯಕರು
ನವದೆಹಲಿ: ಎಸ್ಐಆರ್ ರದ್ದು ಮಾಡುವುದು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, ‘ಇಂಡಿಯಾ’ ಮೈತ್ರಿಕೂಟದ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಇಂದು(ಅ.9) ರಾತ್ರಿ 8ಕ್ಕೆ ಭೇಟಿ ಮಾಡಲಿದ್ದಾರೆ. ದ್ರೌಪದಿ ಮುರ್ಮು ಅವರನ್ನು ವಿರೋಧ ಪಕ್ಷಗಳ ನಾಯಕರು ಭೇಟಿ ಮಾಡುವುದನ್ನು ರಾಷ್ಟ್ರಪತಿ ಭವನ ದೃಢೀಕರಿಸಿದೆ ಎಂದು ಮೂಲಗ

ನವದೆಹಲಿ: ಎಸ್ಐಆರ್ ರದ್ದು ಮಾಡುವುದು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, ‘ಇಂಡಿಯಾ’ ಮೈತ್ರಿಕೂಟದ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಇಂದು(ಅ.9) ರಾತ್ರಿ 8ಕ್ಕೆ ಭೇಟಿ ಮಾಡಲಿದ್ದಾರೆ. ದ್ರೌಪದಿ ಮುರ್ಮು ಅವರನ್ನು ವಿರೋಧ ಪಕ್ಷಗಳ ನಾಯಕರು ಭೇಟಿ ಮಾಡುವುದನ್ನು ರಾಷ್ಟ್ರಪತಿ ಭವನ ದೃಢೀಕರಿಸಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಮತ್ತು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ವಿರೋಧ ಪಕ್ಷದ ಪ್ರಮುಖ ನಾಯಕರು ರಾಷ್ಟ್ರಪತಿ ಅವರನ್ನು ಭೇಟಿಯಾಗಲಿದ್ದಾರೆ. ರಾಷ್ಟ್ರಪತಿ ಭೇಟಿಗೂ ಮುನ್ನ, ವಿರೋಧ ಪಕ್ಷಗಳ ನಾಯಕರು ಸಂವಿಧಾನ ಸದನದಲ್ಲಿರುವ ಸೆಂಟ್ರಲ್ ಹಾಲ್ನಲ್ಲಿ ಸಂಜೆ 5ಕ್ಕೆ ಸಭೆ ಸೇರಲಿದ್ದಾರೆ. ಈ ವೇಳೆ ‘ಮತಗಳ್ಳತನ’ದ ಕುರಿತು ಪ್ರತಿಭಟನೆ ಮಾಡುವ ಸಾಧ್ಯತೆಯಿದೆ. ಕಳೆದ ಮೂರು ದಿನಗಳಿಂದ ವಿರೋಧ ಪಕ್ಷದ ನಾಯಕರು ಮತ್ತು ಸಂಸದರು ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.