ಬೆಂಗಳೂರು ಏರ್ಪೋರ್ಟ್ನಲ್ಲಿ ಪ್ರಯಾಣಿಕರಿಂದ ಹಣ ವಸೂಲಿಗೆ ಯತ್ನ – ಅಮಿನ್ ಬಂಧನ!
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ಪ್ರಯಾಣಿಕರನ್ನ ಸಂಪರ್ಕಿಸಿ ಹಣ ಸುಲಿಗೆ ಮಾಡುತ್ತಿದ್ದ ಆರೋಪದ ಮೇಲೆ ಅಮಿನ್ ಎಂಬ ವ್ಯಕ್ತಿಯನ್ನ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣದ ಟರ್ಮಿನಲ್-1ರ ಬಫೆಲೋ ವಿಂಗ್ಸ್ ಸಮೀಪ ಈ ಘಟನೆ ನಡೆದಿದ್ದು, ಆರೋಪಿಯನ್ನ ಬಳಿಕ ಕೆಐಎ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ವಿ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ಪ್ರಯಾಣಿಕರನ್ನ ಸಂಪರ್ಕಿಸಿ ಹಣ ಸುಲಿಗೆ ಮಾಡುತ್ತಿದ್ದ ಆರೋಪದ ಮೇಲೆ ಅಮಿನ್ ಎಂಬ ವ್ಯಕ್ತಿಯನ್ನ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣದ ಟರ್ಮಿನಲ್-1ರ ಬಫೆಲೋ ವಿಂಗ್ಸ್ ಸಮೀಪ ಈ ಘಟನೆ ನಡೆದಿದ್ದು, ಆರೋಪಿಯನ್ನ ಬಳಿಕ ಕೆಐಎ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನ ಸಂಪರ್ಕಿಸುತ್ತಿದ್ದ ವ್ಯಕ್ತಿಯ ವರ್ತನೆಯ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆ ಭದ್ರತಾ ಸಿಬ್ಬಂದಿ ಆತನನ್ನು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಆತನ ಮೊಬೈಲ್ ಫೋನ್ ಪರಿಶೀಲಿಸಿದಾಗ ಹಲವು ಹಣಕಾಸಿನ ವಹಿವಾಟುಗಳಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಮೊಬೈಲ್ನಲ್ಲಿ ಹಲವು ಪೇಮೆಂಟ್ ಸ್ಕ್ಯಾನರ್ಗಳು ಪತ್ತೆಯಾಗಿದ್ದು, ಅವುಗಳ ಮೂಲಕ ಪ್ರಯಾಣಿಕರಿಂದ ಹಣ ಸ್ವೀಕರಿಸಿರುವ ಸಾಧ್ಯತೆಯ ಬಗ್ಗೆಯೂ ತನಿಖೆ ನಡೆಯುತ್ತಿದೆ. ಮುಂಬೈ, ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಇದೇ ರೀತಿಯಲ್ಲಿ ಹಣ ವಸೂಲಿಗೆ ಯತ್ನಿಸಿದ್ದನೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಅಲ್ಲದೆ, ಮುಂಬೈನಿಂದ ಬೆಂಗಳೂರಿಗೆ ಪ್ರಯಾಣಿಸಲು ಇಂಡಿಗೋ ವಿಮಾನದ ಟಿಕೆಟ್ ಬುಕ್ ಮಾಡಿದ್ದ ದಾಖಲೆ ಕೂಡ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸಿಐಎಸ್ಎಫ್ ಸಿಬ್ಬಂದಿ ಆರೋಪಿಯನ್ನು ಕೆಐಎ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಸದ್ಯ ವಿಮಾನ ನಿಲ್ದಾಣದ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದು, ಹಣಕಾಸಿನ ವಹಿವಾಟುಗಳ ಹಿಂದಿನ ಉದ್ದೇಶವೇನು? ಪ್ರಯಾಣಿಕರಿಂದ ಎಷ್ಟು ಹಣ ಪಡೆಯಲಾಗಿದೆ? ದೇಶದ ಇತರೆ ವಿಮಾನ ನಿಲ್ದಾಣಗಳಲ್ಲೂ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದನೇ? ಎಂಬ ಹಲವು ಪ್ರಶ್ನೆಗಳಿಗೆ ತನಿಖೆಯಿಂದ ಉತ್ತರ ಸಿಗಬೇಕಿದೆ. ವಿಮಾನ ನಿಲ್ದಾಣದಂತಹ ಸೂಕ್ಷ್ಮ ಪ್ರದೇಶದಲ್ಲಿ ಪ್ರಯಾಣಿಕರಿಂದ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಪೊಲೀಸರ ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.